Karnataka Assembly Polls 2023: ಬೆಂಗಳೂರು ನಗರ ವಿಧಾನಸಭಾ ಕ್ಷೇತ್ರಗಳ ಪೈಕಿ ಜೆಡಿಎಸ್ 8 ರಲ್ಲಿ ಗೆಲುವು ಸಾಧಿಸಲಿದೆ: ಹೆಚ್ ಡಿ ಕುಮಾರಸ್ವಾಮಿ

ರಾಜ್ಯದ ಜನತೆ ತಮ್ಮ ಪಕ್ಷಕ್ಕೆ ಸ್ಪಷ್ಟ ಬಹುಮತ ನೀಡಿದರೆ, ಪಂಚರತ್ನ ಯೋಜನೆಗಳನ್ನು ಜಾರಿಗೆ ತರುವುದಾಗಿ ಕುಮಾರಸ್ವಾಮಿ ಹೇಳಿದರು.

ಬೆಂಗಳೂರು: ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹೆಚ್ ಡಿ ಕುಮಾರಸ್ವಾಮಿ (HD Kumaraswamy) ಇಂದು ಬೆಂಗಳೂರು ನಗರ (Bengaluru City) ವಿಧಾನಸಭಾ ಕ್ಷೇತ್ರಗಳಲ್ಲಿ ಪ್ರಚಾರ ನಡೆಸಿದರು. ರೋಡ್ ಶೋ ನಡೆಸುತ್ತಲೇ ಟಿವಿ9 ಕನ್ನಡ ವಾಹಿನಿಯ ಬೆಂಗಳೂರು ಪ್ರತಿನಿಧಿಯೊಂದಿಗೆ ಮಾತಾಡಿದ ಕುಮಾರಸ್ವಾಮಿ, ನಗರದ ಕ್ಷೇತ್ರಗಳ ಪೈಕಿ ಜೆಡಿಎಸ್ 6-8 ಸ್ಥಾನಗಳನ್ನು ಗೆಲ್ಲಲಿದೆ ಎಂದು ಹೇಳಿದರು. ರಾಷ್ಟ್ರೀಯ ಪಕ್ಷಗಳಾದ ಕಾಂಗ್ರೆಸ್ ಮತ್ತು ಬಿಜೆಪಿ ಎರಡೂ ಭ್ರಷ್ಟ ಪಕ್ಷಗಳೇ, ಆ ಹಿನ್ನೆಲೆಯಲ್ಲೇ ರಾಜ್ಯದ ಜನತೆ ತಮ್ಮ ಪಕ್ಷಕ್ಕೆ ಸ್ಪಷ್ಟ ಬಹುಮತ ನೀಡಿದರೆ, ಪಂಚರತ್ನ ಯೋಜನೆಗಳನ್ನು (Pancharatna Projects) ಜಾರಿಗೆ ತರುವುದಾಗಿ ಕುಮಾರಸ್ವಾಮಿ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮತ್ತಷ್ಟು ಚುನಾವಣಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Follow Us