ವಿಜಯಪುರ: ಜೆಡಿಎಸ್ ಕಾರ್ಯಕ್ರಮಕ್ಕೆ ಪಿಸ್ತೂಲ್ ಇಟ್ಟುಕೊಂಡ ಬಂದ ಕಾರ್ಯಕರ್ತ, ವಿಡಿಯೋ ವೈರಲ್

Edited By:

Updated on: Feb 27, 2026 | 2:38 PM

ಜೆಡಿಎಸ್ ಕಾರ್ಯಕರ್ತನೊಬ್ಬ ವಿಜಯಪುರದಲ್ಲಿ ಶುಕ್ರವಾರ ನಡೆದ ಜೆಡಿಎಸ್ ಬೆಳ್ಳಿಹಬ್ಬ ಕಾರ್ಯಕ್ರಮಕ್ಕೆ ಪಿಸ್ತೂಲ್ ಸೊಂಟದಲ್ಲಿಟ್ಟುಕೊಂಡು ಬಂದ ಘಟನೆ ನಡೆದಿದೆ. ಅಸಲಿಗೆ ಅದು ಪರವಾನಗಿ ಹೊಂದಿದ್ದ ಪಿಸ್ತೂಲ್ ಆಗಿತ್ತು. ಆದರೂ ಭದ್ರತೆಯ ಕಾರಣಕ್ಕೆ ಪೊಲೀಸರು ಆತನನ್ನು ಹೊರ ಕಳುಹಿಸಿದ್ದಾರೆ. ಸದ್ಯ, ಆತನ ವಿಡಿಯೋ ವೈರಲ್ ಆಗುತ್ತಿದ್ದು, ಇಲ್ಲಿದೆ ನೋಡಿ.

ವಿಜಯಪುರ, ಫೆಬ್ರವರಿ 27: ವಿಜಯಪುರದಲ್ಲಿ ಜೆಡಿಎಸ್ ಬೆಳ್ಳಿಹಬ್ಬ ಕಾರ್ಯಕ್ರಮ ನಡೆಯುತ್ತಿರುವಾಗ ಕಾರ್ಯಕರ್ತನೊಬ್ಬ ಪರವಾನಗಿ ಇರುವ ಪಿಸ್ತೂಲ್ ಜೇಬಲ್ಲಿಟ್ಟುಕೊಂಡು ಬಂದಿದ್ದಾರೆ. ಸೊಂಟದಲ್ಲಿ ಪಿಸ್ತೂಲ್ ಇಟ್ಟುಕೊಂಡು ವೇದಿಕೆ ಮುಂಭಾಗ ಬಂದಾಗ, ಭದ್ರತೆಯ ಕಾರಣಕ್ಕೆ ಪೊಲೀಸರು ಆತನನ್ನು ಹೊರ ಕಳುಹಿಸಿದ್ದಾರೆ. ಸದ್ಯ ಜೆಡಿಎಸ್ ಕಾರ್ಯಕರ್ತ ಪಿಸ್ತೂಲ್​ನೊಂದಿಗೆ ಬಂದ ವಿಡಿಯೋ ವೈರಲ್ ಆಗುತ್ತಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Ashok Yadalli

ನನ್ನ ಹೆಸರು ಅಶೋಕ ಯಡಳ್ಳಿ, ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಕಳೆದ 2012 ರಿಂದ ವಿಜಯಪುರ ಜಿಲ್ಲಾ ಪ್ರತಿನಿಧಿಯಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೂ ಮುನ್ನ ಹೈದರಾಬಾದಿನ ರಾಮೋಜಿ ರಾವ್ ಪೀಲ್ಮ್ ಸಿಟಿಯಲ್ಲಿದ್ದ ಈಟಿವಿ ಕನ್ನಡ ಮನರಂಜನೆ ಹಾಗೂ ಸುದ್ದಿ ವಾಹಿನಿಯಲ್ಲಿ ಸೇವೆ ಸಲ್ಲಿಸುತ್ತಿದ್ದೆ. ಇದು ನನ್ನ ಕೆಲಸದ ಬಗ್ಗೆ ಹೇಳಿರೋ ಮಾಹಿತಿಯಾಗಿದ್ದು ವೈಯುಕ್ತಿಕ ಮಾಹಿತಿ ಬಗ್ಗೆ ಹೇಳದಾದರೆ. ನಾನು ಮೂಲತಃ ಧಾರವಾಡ ಜಿಲ್ಲೆಯವ. ಧಾರವಾಡ ತಾಲೂಕಿನ ಅಮ್ಮಿನಬಾವಿ ಗ್ರಾಮ ನಮ್ಮೂರು. ತಂದೆ ತಾಯಿ ಸಹೋದರ ಸಹೋದರಿಯರ ತುಂಬು ಕುಟುಂಬ. ಮೂಲತಃ ಕೃಷಿ ಕುಟುಂಬವಾಗಿದ್ದು, ಹಿರಿಯರಿಂದ ಬಂದ ಜಮೀನುಗಳಿವೆ. ಪ್ರಾಥಮಿಕ ಶಿಕ್ಷಣ ನಮ್ಮೂರಲ್ಲೇ ಬಳಿಕ ಹೈಸ್ಕೂಲ್ ನಿಂದ ಹಿಡಿದು ಪಿಜಿವರೆಗೂ ಧಾರವಾಡ. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋಧ್ಯಮ ಮತ್ತು ಸಮೂಹ ಸಂವಹನ ವಿಭಾಗದಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. ಟಿವಿ9 ನಲ್ಲಿ ಹಲವಾರು ಉತ್ತಮ ವರದಿಗಳನ್ನು ನೀಡಿದ ಹೆಮ್ಮೆ ತೃಪ್ತಿ ನನಗಿದೆ. ಆಲಮೇಲದ ವಿದ್ಯಾರ್ಥಿನಿಯರ ಮೇಲಿನ ಲೈಂಗಿಕ ದೌರ್ಜನ್ಯ ಬಹಿರಂಗ ಮಾಡಿದ್ದು, ವಿಜಯಪುರ ಬಾಗಲಕೋಟೆಯಲ್ಲಿ ಕೊಳವೆ ಬಾವಿಯಲ್ಲಿ ಬಿದ್ದಿದ್ದ ಮಕ್ಕಳ ಕುರಿತ ವರದಿ. ಹಾವಿನ ಸೇಡಿಗೆ ಒಳಗಾಗಿದ್ದ ಯುವಕನ ಸಮಸ್ಯೆ ಬಗೆ ಹರಿಸಿದ್ದು. ಉಷ್ಣ ವಿದ್ಯುತ್ ಸ್ಥಾವರದ ಗಲಾಟೆ ಹೀಗೆ ಹಲವಾರು ವಿಶೇಷ ಸುದ್ದಿಗಳು, ಚುನಾವಣೆ, ರಾಜಕೀಯ, ಕ್ರೀಡೆ, ಹೀಗೂ ಉಂಟೇ, ವಾರೆಂಟ್, ಮಾರುವೇಷ, ಸಾಧನೆ, ಕೃಷಿ ಹೀಗೆ ಅನೇಕ ವಿಚಾರಗಳ ಕುರಿತ ಸುದ್ದಿಗಳಿಗೆ ನ್ಯಾಯ ಒದಗಿಸಿದ್ದೇನೆಂದು ನಂಬಿದ್ದೇನೆ. ಭವಿಷ್ಯದಲ್ಲಿ ಇನ್ನೂ ಹೆಚ್ಚಿನ ಉತ್ತಮ ವರದಿಗಳನ್ನು ಮಾಡುವ ಹಂಬಲ - ಆಸಕ್ತಿಯಿದೆ. ಕ್ರೀಡೆ, ಸಾಮಾಜಿಕ, ಕೃಷಿಯಲ್ಲಿ ಹೆಚ್ಚಿನ ಆಸಕ್ತಿಯಿದೆ. ಧನ್ಯವಾದಗಳು.......

Read More