ತೋಳು ತಟ್ಟಿ ಮೀಸೆ ತಿರುವಿದ ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ಎಸೆತ

Edited By:

Updated on: Jun 27, 2026 | 4:55 PM

ಮುಖ್ಯಾಂಶಗಳು

  • ಚಿಕ್ಕಬಳ್ಳಾಪುರದಲ್ಲಿ ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ಎಸೆತ
  • ಕಾರಿನ ಸನ್ ರೂಫ್ ಮೂಲಕ ಪ್ರದೀಪ್ ಈಶ್ವರ್ ಮೆರವಣಿಗೆ ವೇಳೆ ಘಟನೆ
  • ಚಪ್ಪಲಿ ಎಸೆದವನನ್ನ ವಶಕ್ಕೆ ಪಡೆದ ಪೊಲೀಸರು

ಚಿಕ್ಕಬಳ್ಳಾಪುರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ನಡುವಿನ ಗಲಾಟೆ ತೀವ್ರ ಸ್ವರೂಪ ಪಡೆದುಕೊಂಡಿದೆ. ಚಿಕ್ಕಬಳ್ಳಾಪುರದ ಕನ್ನಡ ಭವನದಲ್ಲಿ ನಡೆಯುತ್ತಿದ್ದ ಕೆಂಪೇಗೌಡ ಕಾರ್ಯಕ್ರಮದಲ್ಲಿ ನುಗ್ಗಿದ ಜೆಡಿಎಸ್ ಕಾರ್ಯಕರ್ತರು, ಪ್ರದೀಪ್ ಈಶ್ವರ್ ಅವರನ್ನ ವೇದಿಕೆಯಿಂದ ಕೆಳಗಿಳಸಬೇಕೆಂದು ಗಲಾಟೆ ಮಾಡಿ ಕಾರ್ಯಕ್ರಮಕ್ಕೆ ಅಡ್ಡಿಪಡಿಸಿದ್ದು, ಬಳಿಕ ಸ್ವಾಮೀಜಿ ಮಧ್ಯೆ ಪ್ರವೇಶಿಸಿ ಕಾರ್ಯಕ್ರಮಕ್ಕೆ ಅನುವು ಮಾಡಿಕೊಟ್ಟರು. ಇದಾದ ನಂತರ ಪ್ರದೀಪ್ ಈಶ್ವರ್, ತಮ್ಮ ವಿರುದ್ಧ ಘೋಷಣೆ ಕೂಗಿದ ಜೆಡಿಎಸ್ ಕಾರ್ಯಕರ್ತರಿಗೆ ಮೀಸೆ ತಿರುವಿ ತೋಳು ತಟ್ಟಿ ತಿರುಗೇಟು ನೀಡಿದ್ದಾರೆ. ಇದರಿಂದ ರೊಚ್ಚಿಗೆದ್ದ ಜೆಡಿಎಸ್ ಕಾರ್ಯಕರ್ತರು ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ಎಸೆದಿದ್ದಾರೆ. ಪ್ರದೀಪ್ ಈಶ್ವರ್ ಕಾರಿನ ಸನ್​ ರೂಫ್​​​​ ಮೂಲಕ ಮೆರವಣಿಗೆ ತೆರಳುತ್ತಿದ್ದ ವೇಳೆ ಕೆಲವರು ಚಪ್ಪಲಿ ಎಸೆದಿದ್ದು, ಕೂಡಲೇ ಅವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಚಿಕ್ಕಬಳ್ಳಾಪುರ, (ಜೂನ್ 27): ಚಿಕ್ಕಬಳ್ಳಾಪುರದಲ್ಲಿ (Chikkaballapur) ಜೆಡಿಎಸ್ ಹಾಗೂ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ (Pradeep Eshwar) ನಡುವಿನ ಗಲಾಟೆ ತೀವ್ರ ಸ್ವರೂಪ ಪಡೆದುಕೊಂಡಿದೆ. ಚಿಕ್ಕಬಳ್ಳಾಪುರದ ಕನ್ನಡ ಭವನದಲ್ಲಿ ನಡೆಯುತ್ತಿದ್ದ ಕೆಂಪೇಗೌಡ ಕಾರ್ಯಕ್ರಮಕ್ಕೆ  ನುಗ್ಗಿದ ಜೆಡಿಎಸ್ ಕಾರ್ಯಕರ್ತರು, ಪ್ರದೀಪ್ ಈಶ್ವರ್ ಅವರನ್ನ ವೇದಿಕೆಯಿಂದ ಕೆಳಗಿಳಸಬೇಕೆಂದು ಗಲಾಟೆ ಮಾಡಿ ಕಾರ್ಯಕ್ರಮಕ್ಕೆ ಅಡ್ಡಿಪಡಿಸಿದ್ದು, ಬಳಿಕ ಸ್ವಾಮೀಜಿ ಮಧ್ಯೆ ಪ್ರವೇಶಿಸಿ ಕಾರ್ಯಕ್ರಮಕ್ಕೆ ಅನುವು ಮಾಡಿಕೊಟ್ಟರು. ಇದಾದ ನಂತರ ಪ್ರದೀಪ್ ಈಶ್ವರ್, ತಮ್ಮ ವಿರುದ್ಧ ಘೋಷಣೆ ಕೂಗಿದ ಜೆಡಿಎಸ್ ಕಾರ್ಯಕರ್ತರಿಗೆ ಮೀಸೆ ತಿರುವಿ ತೋಳು ತಟ್ಟಿ ತಿರುಗೇಟು ನೀಡಿದ್ದಾರೆ. ಇದರಿಂದ ರೊಚ್ಚಿಗೆದ್ದ ಜೆಡಿಎಸ್ ಕಾರ್ಯಕರ್ತರು ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ಎಸೆದಿದ್ದಾರೆ. ಪ್ರದೀಪ್ ಈಶ್ವರ್ ಕಾರಿನ ಸನ್​ ರೂಫ್​​​​ ಮೂಲಕ ಮೆರವಣಿಗೆ ತೆರಳುತ್ತಿದ್ದ ವೇಳೆ ಕೆಲವರು ಚಪ್ಪಲಿ ಎಸೆದಿದ್ದು, ಕೂಡಲೇ ಅವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಇದನ್ನೂ ನೋಡಿ: ಕೆಂಪೇಗೌಡ ಜಯಂತಿ ನಡೆಯಲು ಬಿಡದೇ ಪ್ರದೀಪ್ ಈಶ್ವರ್ ವಿರುದ್ಧ ಆಕ್ರೋಶ, ಪೊಲೀಸರಿಂದ ಲಘು ಲಾಠಿ ಚಾರ್ಜ್

Published on: Jun 27, 2026 04:51 PM
Loading...
Unable to load recommendations.
Follow Us
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ

ಚಿಕ್ಕಬಳ್ಳಾಪುರ ಎಂಬ ಸುಂದರ ಊರು ನನಗೆ ಸುಂದರವಾದ ಬದುಕನ್ನು ಕಟ್ಟಿಕೊಟ್ಟಿದೆ. 18 ವರ್ಷಗಳಿಂದ ಹಗಲುರಾತ್ರಿ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಜನ ಸೇವೆಯಲ್ಲಿದ್ದೇನೆ. ಶಿಕ್ಷಣವೆಲ್ಲ ಬೆಂಗಳೂರಿನಲ್ಲಿ. ಸರ್ಕಾರಿ ಚಲನಚಿತ್ರ ಮತ್ತು ದೂರದರ್ಶನ ಸಂಸ್ಥೆಯಲ್ಲಿ ಪದವಿ. ಬೆಂಗಳೂರು ವಿವಿಯಲ್ಲಿ ಬಿ.ಸಿ.ಎ ವ್ಯಾಸಂಗ. ವಿದ್ಯಾರ್ಥಿದೆಸೆಯಿಂದಲೆ ಟಿವಿ9 ಕನ್ನಡದಲ್ಲಿ ಕೆಲಸ.

Read More