Video: ಆಭರಣದಂಗಡಿಗೆ ಕದಿಯಲೆಂದು ಹೋಗಿ ಫಜೀತಿಗೆ ಸಿಲುಕಿದ ಕಳ್ಳರು

Updated on: Dec 30, 2025 | 11:39 AM

ಪಂಜಾಬ್​ನ ಅಮೃತಸರದಲ್ಲಿರುವ ಆಭರಣದಂಗಡಿಯಲ್ಲಿ ಬೆಳ್ಳಂಬೆಳಗ್ಗೆ ಕದಿಯಲೆಂದು ಹೋದ ಕಳ್ಳರು ಫಜೀತಿಗೆ ಸಿಲುಕಿರುವ ಘಟನೆ ನಡೆದಿದೆ. ಸಂಧು ಕಾಲೋನಿಯಲ್ಲಿರುವ ಅಂಗಡಿಗೆ ನುಗ್ಗಿದ ದರೋಡೆಕೋರರು ಆಭರಣ ವ್ಯಾಪಾರಿಯ ಮೇಲೆ ಗುಂಡು ಹಾರಿಸಿ, ಆವರಣದೊಳಗೆ ಎರಡು ಬಾರಿ ಗುಂಡು ಹಾರಿಸಿದರು. ಅದೃಷ್ಟವಶಾತ್, ಯಾವುದೇ ಗುಂಡುಗಳು ಆಭರಣ ವ್ಯಾಪಾರಿಗೆ ತಾಗಲಿಲ್ಲ. ಬುದ್ಧಿವಂತಿಕೆಯನ್ನು ಪ್ರದರ್ಶಿಸಿ, ಆಭರಣ ವ್ಯಾಪಾರಿ ದಾಳಿಕೋರರಲ್ಲಿ ಒಬ್ಬನನ್ನು ಸೋಲಿಸುವಲ್ಲಿ ಯಶಸ್ವಿಯಾದರು.

ಪಂಜಾಬ್, ಡಿಸೆಂಬರ್ 30: ಪಂಜಾಬ್​ನ ಅಮೃತಸರದಲ್ಲಿರುವ ಆಭರಣದಂಗಡಿಯಲ್ಲಿ ಬೆಳ್ಳಂಬೆಳಗ್ಗೆ ಕದಿಯಲೆಂದು ಹೋದ ಕಳ್ಳರು ಫಜೀತಿಗೆ ಸಿಲುಕಿರುವ ಘಟನೆ ನಡೆದಿದೆ. ಸಂಧು ಕಾಲೋನಿಯಲ್ಲಿರುವ ಅಂಗಡಿಗೆ ನುಗ್ಗಿದ ದರೋಡೆಕೋರರು ಆಭರಣ ವ್ಯಾಪಾರಿಯ ಮೇಲೆ ಗುಂಡು ಹಾರಿಸಿ, ಆವರಣದೊಳಗೆ ಎರಡು ಬಾರಿ ಗುಂಡು ಹಾರಿಸಿದರು. ಅದೃಷ್ಟವಶಾತ್, ಯಾವುದೇ ಗುಂಡುಗಳು ಆಭರಣ ವ್ಯಾಪಾರಿಗೆ ತಾಗಲಿಲ್ಲ. ಬುದ್ಧಿವಂತಿಕೆಯನ್ನು ಪ್ರದರ್ಶಿಸಿ, ಆಭರಣ ವ್ಯಾಪಾರಿ ದಾಳಿಕೋರರಲ್ಲಿ ಒಬ್ಬನನ್ನು ಸೋಲಿಸುವಲ್ಲಿ ಯಶಸ್ವಿಯಾದರು.

ಈ ಘಟನೆ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಆರೋಪಿಗಳು ಮೋಟಾರ್ ಸೈಕಲ್‌ನಲ್ಲಿ ಬಂದಿದ್ದರು. ಪರಾರಿಯಾಗುವ ವೇಳೆ ಒಬ್ಬ ದರೋಡೆಕೋರ ಬೈಕ್ ಸ್ಥಳದಲ್ಲಿಯೇ ಬಿಟ್ಟು ಪರಾರಿಯಾಗಿದ್ದಾನೆ. ತಲೆಮರೆಸಿಕೊಂಡಿರುವ ಆರೋಪಿಗಳ ಪತ್ತೆಗೆ ಪೊಲೀಸರು ಶೋಧ ಕಾರ್ಯಾಚರಣೆ ಆರಂಭಿಸಿದ್ದಾರೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Loading...
Unable to load recommendations.
Follow Us
ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More