ರಾಕ್​ಲೈನ್ ವೆಂಕಟೇಶ್ ಸಹೋದರ ಭ್ರಮರೇಶ್ ಮನೆಯಲ್ಲಿ ದೊಡ್ಡ ಕಳ್ಳತನ, ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ರಾಕ್​ಲೈನ್ ವೆಂಕಟೇಶ್ ಸಹೋದರ ಭ್ರಮರೇಶ್ ಮನೆಯಲ್ಲಿ ದೊಡ್ಡ ಕಳ್ಳತನ, ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಅರುಣ್​ ಕುಮಾರ್​ ಬೆಳ್ಳಿ
|

Updated on: Oct 30, 2023 | 7:37 PM

ಭ್ರಮರೇಶ್ ಕುಟುಂಬ ರವಿವಾರದಂದು ಯುರೋಪ್ ಪ್ರವಾಸ ಮುಗಿಸಿಕೊಂಡು ನಗರಕ್ಕೆ ವಾಪಸ್ಸಾದಾಗ ಕಳ್ಳತನ ನಡೆದಿರುವ ಅಂಶ ಬೆಳಕಿಗೆ ಬಂದಿದೆ. ಭ್ರಮರೇಶ್ ಮಹಾಲಕ್ಷ್ಮೀ ಲೇಔಟ್ ಠಾಣೆಯಲ್ಲಿ ದೂರು ಸಲ್ಲಿಸಿದ್ದು ಅವರು ಪ್ರಕರಣ ದಾಖಲಿಸಿಕೊಂಡು ಸ್ಥಳ ಪರಿಶೀಲನೆ ನಡೆಸಿ ಸುಳಿವಿಗಾಗಿ ಸುತ್ತಮುತ್ತಲಿನ ಸಿಸಿಟಿವಿ ಫುಟೇಜ್ ಪರಿಶೀಲಿಸುತ್ತಿದ್ದಾರೆ.

ಬೆಂಗಳೂರು: ಚಲನಚಿತ್ರ ನಿರ್ಮಾಪಕ, ಉದ್ಯಮಿ ರಾಕ್​ಲೈನ್ ವೆಂಕಟೇಶ್ (Rockline Venkatesh) ಅವರಂತೆಯೇ ಸಹೋದರ ಭ್ರಮರೇಶ್ (Bharamaresh) ಸಹ ಕುಬೇರನೇ. ದೃಶ್ಯಗಳಲ್ಲಿ ಕಾಣುವ ಮನೆ ನಗರದ ಮಹಾಲಕ್ಷ್ಮೀ ಲೇಔಟ್‌ನಲ್ಲಿದ್ದು (Mahalakshmi Layout) ಭ್ರಮರೇಶ್ ಅವರಿಗೆ ಸೇರಿದ್ದು. ಈ ಮನೆ ಸುದ್ದಿಯಲ್ಲಿದೆ. ಭ್ರಮರೇಶ್ ಮತ್ತವರ ಕುಟುಂಬ ಊರಲ್ಲಿ ಇಲ್ಲದಾಗ ಇದೇ ಮನೆಯಲ್ಲಿ ಭಾರೀ ಪ್ರಮಾಣದ ಕಳ್ಳತನ ನಡೆದಿದೆ. ಪೊಲೀಸ್ ಮೂಲಗಳ ಪ್ರಕಾರ ಭ್ರಮರೇಶ್ ಮನೆಯಿಂದ 5 ಕೆಜಿ ಚಿನ್ನಾಭರಣ ಮತ್ತು 6 ಲಕ್ಷ ರೂ. ನಗದು ಕಳುವಾಗಿದೆ. ಭ್ರಮರೇಶ್ ಕುಟುಂಬ ರವಿವಾರದಂದು ಯುರೋಪ್ ಪ್ರವಾಸ ಮುಗಿಸಿಕೊಂಡು ನಗರಕ್ಕೆ ವಾಪಸ್ಸಾದಾಗ ಕಳ್ಳತನ ನಡೆದಿರುವ ಅಂಶ ಬೆಳಕಿಗೆ ಬಂದಿದೆ. ಭ್ರಮರೇಶ್ ಮಹಾಲಕ್ಷ್ಮೀ ಲೇಔಟ್ ಠಾಣೆಯಲ್ಲಿ ದೂರು ಸಲ್ಲಿಸಿದ್ದು ಅವರು ಪ್ರಕರಣ ದಾಖಲಿಸಿಕೊಂಡು ಸ್ಥಳ ಪರಿಶೀಲನೆ ನಡೆಸಿ ಸುಳಿವಿಗಾಗಿ ಸುತ್ತಮುತ್ತಲಿನ ಸಿಸಿಟಿವಿ ಫುಟೇಜ್ ಪರಿಶೀಲಿಸುತ್ತಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ