ಅಪಾಯದ ಮಟ್ಟ ಮೀರಿದ ಜಮ್ಮು-ಕಾಶ್ಮೀರದ ಝೀಲಂ ನದಿ, ಪ್ರವಾಹದ ಎಚ್ಚರಿಕೆ
ಕಳೆದ ಕೆಲವು ದಿನಗಳಿಂದ ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರಿ ಮಳೆಯಾಗಿದ್ದು, ಕೇಂದ್ರಾಡಳಿತ ಪ್ರದೇಶದಲ್ಲಿ ಹಲವಾರು ದಿಢೀರ್ ಪ್ರವಾಹ, ಮೇಘಸ್ಫೋಟ ಮತ್ತು ಭೂಕುಸಿತ ಸಂಭವಿಸಿದೆ. ಕೇಂದ್ರಾಡಳಿತ ಪ್ರದೇಶದ ಕೆಲವು ಭಾಗಗಳಲ್ಲಿ ಅನೇಕ ಜನರು ಪ್ರಾಣ ಕಳೆದುಕೊಂಡಿದ್ದಾರೆ, ಇನ್ನೂ ಅನೇಕರು ಪ್ರವಾಹದಲ್ಲಿ ಸಿಲುಕಿಕೊಂಡಿದ್ದಾರೆ. ಹೀಗಾಗಿ, ರೆಡ್ ಅಲರ್ಟ್ ನೀಡಲಾಗಿದೆ.
ಶ್ರೀನಗರ, ಸೆಪ್ಟೆಂಬರ್ 3: ಜಮ್ಮು ಮತ್ತು ಕಾಶ್ಮೀರದ ಶ್ರೀನಗರದಲ್ಲಿ ಝೀಲಂ ನದಿಯ (Jhelum River) ನೀರಿನ ಮಟ್ಟ ಅಪಾಯದ ಮಟ್ಟವನ್ನು ದಾಟಿದೆ. ಇದರಿಂದಾಗಿ ಅಧಿಕಾರಿಗಳು ಈ ಪ್ರದೇಶದಲ್ಲಿ ಪ್ರವಾಹದ ಎಚ್ಚರಿಕೆ (Flood Alert) ನೀಡಿದ್ದಾರೆ. ಕಳೆದ ಕೆಲವು ದಿನಗಳಿಂದ ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರಿ ಮಳೆಯಾಗುತ್ತಿದ್ದು, ಕೇಂದ್ರಾಡಳಿತ ಪ್ರದೇಶದಲ್ಲಿ (ಯುಟಿ) ಹಲವಾರು ದಿಢೀರ್ ಪ್ರವಾಹ, ಮೇಘಸ್ಫೋಟ ಮತ್ತು ಭೂಕುಸಿತ ಸಂಭವಿಸಿದೆ. ಅನೇಕ ಜನರು ಪ್ರಾಣ ಕಳೆದುಕೊಂಡಿದ್ದಾರೆ. ಹವಾಮಾನ ಇಲಾಖೆ (ಐಎಂಡಿ) ಕಿಶ್ತ್ವಾರ್, ದೋಡಾ, ರಾಂಬನ್, ಉಧಂಪುರ, ರಿಯಾಸಿ, ಜಮ್ಮು, ರಾಜೌರಿ ಮತ್ತು ಪೂಂಚ್ ಜಿಲ್ಲೆಗಳಿಗೆ ನಾಳೆ ಕೂಡ ರೆಡ್ ಅಲರ್ಟ್ ನೀಡಲಾಗಿದೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published on: Sep 03, 2025 09:16 PM
Latest Videos
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ

