ಜಿಗಣಿಯಲ್ಲಿ ಪಾಕಿಸ್ತಾನ ಪ್ರಜೆ ಬಂಧನ: ಗೃಹ ಸಚಿವ ಪರಮೇಶ್ವರ್ ಹೇಳಿದ್ದಿಷ್ಟು​

ವಿವೇಕ ಬಿರಾದಾರ

Updated on: Sep 30, 2024 | 1:48 PM

ಜಿಗಣಿ ಪೊಲೀಸರು ಜಿಗಣಿಯ ಅಪಾರ್ಟ್​ಮೆಂಟ್​ನಲ್ಲಿ ವಾಸವಿದ್ದ ಓರ್ವ ಪಾಕಿಸ್ತಾನ ಪ್ರಜೆಯನ್ನು ಬಂಧಿಸಿದ್ದಾರೆ. ಬಂಧಿತ ಪಾಕಿಸ್ತಾನ ಪ್ರಜೆ ಕುಟುಂಬ ಸಮೇತವಾಗಿ ಜಿಗಣಿಯಲ್ಲಿ ವಾಸವಾಗಿದ್ದ. ಬಂಧಿತ ಪಾಕಿಸ್ತಾನ ಪ್ರಜೆ ಬಗ್ಗೆ ಗೃಹ ಸಚಿವ ಪರಮೇಶ್ವರ್​ ಹೇಳಿದ್ದಿಷ್ಟು.

ಬೆಂಗಳೂರಿನಲ್ಲಿ ಪಾಕಿಸ್ತಾನ ಪ್ರಜೆ ಸೇರಿ ನಾಲ್ವರು ವಿದೇಶಿಗರ ಬಂಧನ ವಿಚಾರವಾಗಿ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಮಾತನಾಡಿ, ಪಾಕಿಸ್ತಾನ ಪ್ರಜೆ 10 ವರ್ಷದಿಂದ ಭಾರತದಲ್ಲಿ ಇದ್ದ ಎಂಬ ಮಾಹಿತಿ ಇದೆ. ಕಳೆದ ಒಂದು ವರ್ಷದ ಹಿಂದೆ ಬೆಂಗಳೂರಿಗೆ ಬಂದಿದ್ದ ಮಾಹಿತಿ. 10 ವರ್ಷದಿಂದ ಇಲ್ಲಿದ್ದಾನೆ ಅಂದ್ರೆ ಕೇಂದ್ರ ಸರ್ಕಾರಕ್ಕೆ ಮಾಹಿತಿ ಇರಲಿಲ್ವಾ? ಈ ಎಲ್ಲದರ ಬಗ್ಗೆ ನಮ್ಮ ಪೊಲೀಸರು ಮಾಹಿತಿ ಪಡೆಯುತ್ತಿದ್ದಾರೆ ಎಂದು ಹೇಳಿದರು.

ಬಂಧಿತನ ಬಳಿ ಆಧಾರ್​ ಕಾರ್ಡ್​, ಪಾಸ್​ಪೋರ್ಟ್ ಇದೆ. ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕ್ರಮ ಜರುಗುತ್ತಲೇ ಇದೆ. ಅಕ್ರಮ ಬಾಂಗ್ಲಾ ವಲಸಿಗರನ್ನು ಪತ್ತೆ ಮಾಡಿ ನಿತ್ಯ ಕಳಿಸುತ್ತಿದ್ದೇವೆ. ಗಡಿ ಭದ್ರತೆ ಲೋಪದಿಂದ ಅಕ್ರಮವಾಗಿ ವಲಸಿಗರು ಬರುತ್ತಿದ್ದಾರೆ. ಬಾಂಗ್ಲಾ ಗಡಿಯಲ್ಲಿ ಭದ್ರತೆಯನ್ನು ಮತ್ತಷ್ಟು ಬಿಗಿಗೊಳಿಸಬೇಕಿದೆ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Loading...
Unable to load recommendations.
Follow Us