ಸ್ಫೋಟಕ ಬ್ಯಾಟಿಂಗ್… ಮತ್ತೊಂದು ಟಿ20 ಟ್ರೋಫಿ ಗೆದ್ದ ಜಿತೇಶ್ ಶರ್ಮಾ
IPL 2025 Final: ಈ ಬಾರಿಯ ಐಪಿಎಲ್ ಫೈನಲ್ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಪಂಜಾಬ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆರ್ಸಿಬಿ 20 ಓವರ್ಗಳಲ್ಲಿ 190 ರನ್ ಕಲೆಹಾಕಿದರೆ, ಈ ಗುರಿಯನ್ನು ಬೆನ್ನತ್ತಿದ ಪಂಜಾಬ್ ಕಿಂಗ್ಸ್ 20 ಓವರ್ಗಳಲ್ಲಿ 184 ರನ್ಗಳಿಸಲಷ್ಟೇ ಶಕ್ತರಾಗಿದ್ದರು.
ಈ ಬಾರಿಯ ಐಪಿಎಲ್ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಟ್ರೋಫಿ ಗೆಲ್ಲುವಲ್ಲಿ ಜಿತೇಶ್ ಶರ್ಮಾ ಪ್ರಮುಖ ಪಾತ್ರವಹಿಸಿದ್ದರು. ಅದರಲ್ಲೂ ಫೈನಲ್ ಪಂದ್ಯದಲ್ಲಿ 10 ಎಸೆತಗಳಲ್ಲಿ 24 ರನ್ ಬಾರಿಸುವ ಮೂಲಕ ಜಿತೇಶ್ ಪಂದ್ಯದ ಚಿತ್ರಣ ಬದಲಿಸಿದ್ದರು. ಈ ಮೂಲಕ ಪಂಜಾಬ್ ಕಿಂಗ್ಸ್ ವಿರುದ್ಧ ಆರ್ಸಿಬಿ 6 ರನ್ಗಳ ರೋಚಕ ಗೆಲುವು ದಾಖಲಿಸುವಲ್ಲಿ ಕಾರಣಕರ್ತರಾಗಿದ್ದರು. ಇದೀಗ ವಿದರ್ಭ ಟಿ20 ಲೀಗ್ನಲ್ಲೂ ಜಿತೇಶ್ ಶರ್ಮಾ ಕಮಾಲ್ ಮಾಡಿದ್ದಾರೆ. ಈ ಬಾರಿ ನಾಯಕನಾಗಿ ಟ್ರೋಫಿ ಎತ್ತಿ ಹಿಡಿದಿದ್ದಾರೆ.
ನಾಗಪುರದಲ್ಲಿ ನಡೆದ ವಿದರ್ಭ ಪ್ರೊ ಟಿ20 ಲೀಗ್ನ ಫೈನಲ್ ಪಂದ್ಯದಲ್ಲಿ ಮಾಸ್ಟರ್ ಬ್ಲಾಸ್ಟರ್ ಹಾಗೂ ಪಗರಿಯಾ ಸ್ಟ್ರೈಕರ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪಗರಿಯಾ ಸ್ಟ್ರೈಕರ್ಸ್ 20 ಓವರ್ಗಳಲ್ಲಿ 178 ರನ್ ಕಲೆಹಾಕಿತು.
ಈ ಕಠಿಣ ಗುರಿಯನ್ನು ಬೆನ್ನತ್ತಿದ ಮಾಸ್ಟರ್ ಬ್ಲಾಸ್ಟರ್ ತಂಡಕ್ಕೆ ವೇದಾಂತ್ ದಿಘಾಡೆ (80) ಭರ್ಜರಿ ಆರಂಭ ಒದಗಿಸಿದ್ದರು. ಇನ್ನು ಮಧ್ಯಮ ಕ್ರಮಾಂಕದಲ್ಲಿ ಕಣಕ್ಕಿಳಿದ ಜಿತೇಶ್ ಶರ್ಮಾ ಬಿರುಸಿನ ಬ್ಯಾಟಿಂಗ್ನೊಂದಿಗೆ ಅಬ್ಬರಿಸಿದರು. ಪರಿಣಾಮ 11 ಎಸೆತಗಳಲ್ಲಿ 3 ಭರ್ಜರಿ ಸಿಕ್ಸ್ ಹಾಗೂ 1 ಫೋರ್ನೊಂದಿಗೆ 30 ರನ್ಗಳು ಮೂಡಿಬಂತು.
ಜಿತೇಶ್ ಶರ್ಮಾ ಅವರ ಈ ಸ್ಫೋಟಕ ಬ್ಯಾಟಿಂಗ್ ನೆರವಿನೊಂದಿಗೆ ಮಾಸ್ಟರ್ ಬ್ಲಾಸ್ಟರ್ ತಂಡವು 17.3 ಓವರ್ಗಳಲ್ಲಿ 179 ರನ್ಗಳಿಸಿ 7 ವಿಕೆಟ್ಗಳ ಭರ್ಜರಿ ಜಯ ಸಾಧಿಸಿತು. ಈ ಮೂಲಕ ತಿಂಗಳುಗಳ ಅಂತರದಲ್ಲಿ ಜಿತೇಶ್ ಶರ್ಮಾ ಬ್ಯಾಕ್ ಟು ಬ್ಯಾಕ್ ಎರಡು ಟ್ರೋಫಿಗಳನ್ನು ಎತ್ತಿ ಹಿಡಿದಿದ್ದಾರೆ.
ಕೊನೆಗೂ ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ ಬದಲಾವಣೆ ಕಾರ್ಯ ಆರಂಭ
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್ಗಂಜ್ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು

