ಕನ್ನಡಿಗರಿಗೆ ಉದ್ಯೋಗ ಮೀಸಲಾತಿ: ನಾಲ್ವರು ಸಚಿವರಿಂದ ಸುದ್ದಿಗೋಷ್ಠಿ

|

Updated on: Jul 18, 2024 | 10:28 AM

ಖಾಸಗಿ ಕ್ಷೇತ್ರದ ಕಂಪನಿಗಳ ಉದ್ಯೋಗದಲ್ಲಿ ಕನ್ನಡಿಗರಿಗೆ ಮೀಸಲಾತಿ ನೀಡುವ ಮಸೂದೆಯನ್ನು ಸರ್ಕಾರ ಜಾರಿಗೆ ತರಲು ಮುಂದಾದಾಗ ಉದ್ಯಮಿಗಳು ವಿರೋಧ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಸಾಮಾಜಿಕ ಮಾದ್ಯಮದಲ್ಲಿ ಪರ-ವಿರೋಧದ ಚರ್ಚೆಗಳು ಆರಂಭವಾಗಿವೆ. ಇದರಿಂದ ಸರ್ಕಾರ ಮುಜುಗರಕ್ಕೆ ಒಳಗಾಗಿದ್ದು, ನಾಲ್ವರು ಸಚಿವರು ಜಂಟಿ ಸುದ್ದಿಗೋಷ್ಠಿ ನಡೆಸಿ ಸ್ಪಷ್ಟನೆ ನೀಡಿದರು.

ಬೆಂಗಳೂರು, ಜುಲೈ 18: ಖಾಸಗಿ ಕ್ಷೇತ್ರದ ಕಂಪನಿಗಳ ಉದ್ಯೋಗದಲ್ಲಿ ಕನ್ನಡಿಗರಿಗೆ ಮೀಸಲಾತಿ ನೀಡುವ ಮಸೂದೆಗೆ ಕರ್ನಾಟಕ ಸಚಿವ ಸಂಪುಟ ಮಂಗಳವಾರ (ಜು.16) ಅನುಮೋದನೆ ನೀಡಿತ್ತು. ಇದಕ್ಕೆ ಉದ್ಯಮಿ ಮೋಹನ್​ ದಾಸ್​ ಪೈ ಸೇರಿದಂತೆ ಇನ್ನೂ ಅನೇಕ ಉದ್ಯಮಿಗಳು ವಿರೋಧ ವ್ಯಕ್ತಪಡಿಸಿದ್ದರು. ಅಲ್ಲದೆ ಸಾಮಾಜಿಕ ಮಾದ್ಯಮದಲ್ಲಿ ಪರ-ವಿರೋಧದ ಚರ್ಚೆಗಳು ಆರಂಭವಾಗಿವೆ. ಮಸೂದೆಗೆ ಉದ್ಯಮಿಗಳಿಂದ ವಿರೋಧ ವ್ಯಕ್ತವಾಗುತ್ತಿದ್ದಂತೆ ಮುಜುಗರಕ್ಕೆ ಒಳಗಾಗಿದೆ. ಈ ಹಿನ್ನೆಲೆಯಲ್ಲಿ ಇಂದು (ಜು.18) ವಿಧಾನಸೌಧದ ಸಮ್ಮೇಳನಾ ಸಭಾಂಗಣದಲ್ಲಿ ನಾಲ್ವರು ಸಚಿವರು ಜಂಟಿ ಸುದ್ದಿಗೋಷ್ಠಿ ನಡೆಸಿದರು. ಸಚಿವರಾದ ದಿನೇಶ್‌ ಗುಂಡೂರಾವ್​, ಕೃಷ್ಣ ಭೈರೇಗೌಡ, ಪ್ರಿಯಾಂಕ್ ಖರ್ಗೆ, ಸಂತೋಷ್ ಲಾಡ್‌ ಮತ್ತು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಪೊನ್ನಣ್ಣ ಸುದ್ದಿಗೋಷ್ಠಿಯಲ್ಲಿ ಪಾಲ್ಗೊಂಡಿದ್ದಾರೆ.

Published on: Jul 18, 2024 10:23 AM