ನಾಕೌಟ್ ರೂಟ್ ಕ್ಲಿಯರ್ ಮಾಡಿದ ಜೋ ರೂಟ್
Welsh Fire vs Trent Rockets: ಜವಾಬ್ದಾರಿಯುತ ಬ್ಯಾಟಿಂಗ್ ಪ್ರದರ್ಶಿಸಿದ ಜೋ ರೂಟ್ 41 ಎಸೆತಗಳಲ್ಲಿ 3 ಸಿಕ್ಸ್ ಹಾಗೂ 4 ಫೋರ್ಗಳೊಂದಿಗೆ ಅಜೇಯ 64 ರನ್ ಬಾರಿಸಿದರು. ಈ ಮೂಲಕ ಟ್ರೆಂಟ್ ರಾಕೆಟ್ಸ್ ತಂಡವನ್ನು 99 ಎಸೆತಗಳಲ್ಲಿ ಗುರಿ ತಲುಪಿಸುವ ಮೂಲಕ 3 ವಿಕೆಟ್ಗಳ ರೋಚಕ ಜಯ ತಂದುಕೊಟ್ಟರು. ಈ ಗೆಲುವಿನೊಂದಿಗೆ ಟ್ರೆಂಟ್ ರಾಕೆಟ್ಸ್ ತಂಡವು ದಿ ಹಂಡ್ರೆಡ್ ಲೀಗ್ನ ನಾಕೌಟ್ ಪಂದ್ಯಗಳಿಗೆ ಅರ್ಹತೆ ಪಡೆದುಕೊಂಡಿದೆ.
ದಿ ಹಂಡ್ರೆಡ್ ಲೀಗ್ನ 27ನೇ ಪಂದ್ಯದಲ್ಲಿ ಟ್ರೆಂಟ್ ರಾಕೆಟ್ಸ್ ತಂಡ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಟ್ರೆಂಟ್ ರಾಕೆಟ್ಸ್ ತಂಡವು ದಿ ಹಂಡ್ರೆಡ್ ಲೀಗ್ನ ನಾಕೌಟ್ ಹಂತಕ್ಕೇರಿದೆ. ಈ ನಿರ್ಣಾಯಕ ಪಂದ್ಯದ ಗೆಲುವಿನ ರೂವಾರಿ ಜೋ ರೂಟ್. ಕಾರ್ಡಿಫ್ನ ಸೋಫಿಯಾ ಗಾರ್ಡನ್ಸ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಟ್ರೆಂಟ್ ರಾಕೆಟ್ಸ್ ಹಾಗೂ ವೆಲ್ಷ್ ಫೈರ್ ತಂಡಗಳು ಮುಖಾಮುಖಿಯಾಗಿದ್ದವು.
ಈ ಪಂದ್ಯದಲ್ಲಿ ಟಾಸ್ ಗೆದ್ದ ಟ್ರೆಂಟ್ ರಾಕೆಟ್ಸ್ ತಂಡದ ನಾಯಕ ಡೇವಿಡ್ ವಿಲ್ಲಿ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ವೆಲ್ಷ್ ಫೈರ್ ತಂಡ ಸ್ಟೀವಿ ಎಸ್ಕಿನಾಝಿ (53) ಅವರ ಅರ್ಧಶತಕದ ನೆರವಿನೊಂದಿಗೆ 100 ಎಸೆತಗಳಲ್ಲಿ 6 ವಿಕೆಟ್ ಕಳೆದುಕೊಂಡು 150 ರನ್ ಕಲೆಹಾಕಿತು.
151 ರನ್ಗಳ ಗುರಿ ಬೆನ್ನತ್ತಿದ ಟ್ರೆಂಟ್ ರಾಕೆಟ್ಸ್ ತಂಡಕ್ಕೆ ಟಾಮ್ ಬ್ಯಾಂಟನ್ ಹಾಗೂ ಜೋ ರೂಟ್ ಭರ್ಜರಿ ಆರಂಭ ಒದಗಿಸಿದರು. ಮೊದಲ ವಿಕೆಟ್ಗೆ 66 ರನ್ ಪೇರಿಸಿದ ಬಳಿಕ ಟಾಮ್ ಬ್ಯಾಂಟನ್ (32) ಔಟಾದರು. ಇದರ ಬೆನ್ನಲ್ಲೇ ದಿಢೀರ್ ಕುಸಿತಕ್ಕೊಳಗಾದ ಟ್ರೆಂಟ್ ರಾಕೆಟ್ಸ್ ತಂಡವು 136 ರನ್ಗಳಿಗೆ 7 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತು.
ಆದರೆ ಮತ್ತೊಂದೆಡೆ ಜವಾಬ್ದಾರಿಯುತ ಬ್ಯಾಟಿಂಗ್ ಪ್ರದರ್ಶಿಸಿದ ಜೋ ರೂಟ್ 41 ಎಸೆತಗಳಲ್ಲಿ 3 ಸಿಕ್ಸ್ ಹಾಗೂ 4 ಫೋರ್ಗಳೊಂದಿಗೆ ಅಜೇಯ 64 ರನ್ ಬಾರಿಸಿದರು. ಈ ಮೂಲಕ ಟ್ರೆಂಟ್ ರಾಕೆಟ್ಸ್ ತಂಡವನ್ನು 99 ಎಸೆತಗಳಲ್ಲಿ ಗುರಿ ತಲುಪಿಸುವ ಮೂಲಕ 3 ವಿಕೆಟ್ಗಳ ರೋಚಕ ಜಯ ತಂದುಕೊಟ್ಟರು. ಈ ಗೆಲುವಿನೊಂದಿಗೆ ಟ್ರೆಂಟ್ ರಾಕೆಟ್ಸ್ ತಂಡವು ದಿ ಹಂಡ್ರೆಡ್ ಲೀಗ್ನ ನಾಕೌಟ್ ಪಂದ್ಯಗಳಿಗೆ ಅರ್ಹತೆ ಪಡೆದುಕೊಂಡಿದೆ.
