Jog Falls: ಹಾಲ್ನೊರೆಯಂತೆ ಕಂಗೊಳಿಸುತ್ತಿದೆ ವಿಶ್ವವಿಖ್ಯಾತ ಜೋಗ ಜಲಪಾತ
ಪ್ರಮುಖ ಪ್ರವಾಸಿ ತಾಣವಾದ ಜೋಗ ಜಲಪಾತವು ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿದೆ. ಶರಾವತಿ ಭಾಗದಲ್ಲಿ ಧಾರಾಕಾರ ಮಳೆ ಹಿನ್ನೆಲೆ ಹಾಲ್ನೊರೆಯಂತೆ ರಾಜ, ರಾಣಿ, ರೋರರ್, ರಾಕೆಟ್ ಕಂಗೊಳಿಸುತ್ತಿದೆ. ಈ ಜಲಪಾತವು ಸುಮಾರು 292 ಮೀ ಎತ್ತರದಿಂದ ಭೋರ್ಗರೆಯುತ್ತಾ ಶರಾವತಿ ನದಿಯು ನಾಲ್ಕು ಸೀಳಾಗಿ ಧುಮುಕುತ್ತದೆ.
ಶಿವಮೊಗ್ಗ, ಜು.06: ಶರಾವತಿ ಭಾಗದಲ್ಲಿ ಧಾರಾಕಾರ ಮಳೆ ಹಿನ್ನೆಲೆ ವಿಶ್ವವಿಖ್ಯಾತ ಜೋಗ ಜಲಪಾತ (Jog Falls) ಕಳೆಗಟ್ಟಿದೆ. ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿರುವ ಜೋಗ ಜಲಪಾತದಲ್ಲಿ ಶರಾವತಿ ಧುಮ್ಮಿಕ್ಕಿ ಹರಿಯುತ್ತಿದ್ದು, ಹಾಲ್ನೊರೆಯಂತೆ ರಾಜ, ರಾಣಿ, ರೋರರ್, ರಾಕೆಟ್ ಕಂಗೊಳಿಸುತ್ತಿದೆ. ಇನ್ನು ಜೋಗದ ವೈಭೋಗ ಕಣ್ತುಂಬಿಕೊಳ್ಳಲು ರಾಜ್ಯದ ಹಲವೆಡೆಗಳಿಂದ ನೂರಾರು ಪ್ರವಾಸಿಗರು ಆಗಮಿಸಿದ್ದಾರೆ. ಜಲಪಾತದ ಎದುರು ಸೆಲ್ಪಿ ತೆಗೆದುಕೊಂಡು ಪ್ರವಾಸಿಗರು ಖುಷ್ ಆಗಿದ್ದಾರೆ. ಪ್ರಮುಖ ಪ್ರವಾಸಿ ತಾಣವಾದ ಜೋಗ ಜಲಪಾತವು ಸುಮಾರು 292 ಮೀ ಎತ್ತರದಿಂದ ಭೋರ್ಗರೆಯುತ್ತಾ ಶರಾವತಿ ನದಿಯು ನಾಲ್ಕು ಸೀಳಾಗಿ ಧುಮುಕುತ್ತದೆ.
ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ