‘ಏಕ್ ಲವ್ ಯಾ’ ಹೊಸ ರಿಲೀಸ್ ದಿನಾಂಕ ಯಾವಾಗ ಅನೌನ್ಸ್ ಆಗುತ್ತೆ? ಮಾಹಿತಿ ಹಂಚಿಕೊಂಡ ಪ್ರೇಮ್
ಜ.21ರಂದು ಬಿಡುಗಡೆ ಆಗಬೇಕು ಎಂದುಕೊಂಡಿದ್ದ ‘ಏಕ್ ಲವ್ ಯಾ’ ಚಿತ್ರದ ರಿಲೀಸ್ ಡೇಟ್ ಮುಂದೂಡಿಕೆ ಆಗಿದೆ. ಆ ಬಗ್ಗೆ ನಿರ್ದೇಶಕ ಜೋಗಿ ಪ್ರೇಮ್ ಮಾತನಾಡಿದ್ದಾರೆ.
ನೈಟ್ ಕರ್ಫ್ಯೂ, ವೀಕೆಂಡ್ ಕರ್ಫ್ಯೂ ಮುಂತಾದ ನಿರ್ಬಂಧಗಳ ಹೇರಿಕೆಯಿಂದ ಚಿತ್ರೋದ್ಯಮದ ವಹಿವಾಟು ಕುಸಿಯಲಿದೆ. ಹಾಗಾಗಿ ಅನೇಕ ಸಿನಿಮಾಗಳು ರಿಲೀಸ್ ದಿನಾಂಕ ಮುಂದೂಡಿಕೊಳ್ಳುತ್ತಿವೆ. ಜೋಗಿ ಪ್ರೇಮ್ (Jogi Prem) ನಿರ್ದೇಶನದ ‘ಏಕ್ ಲವ್ ಯಾ’ ಸಿನಿಮಾ ಕೂಡ ಇದೇ ನಿರ್ಧಾರಕ್ಕೆ ಬಂದಿದೆ. ರಾಣಾ, ರಚಿತಾ ರಾಮ್ (Rachita Ram), ಗ್ರೀಷ್ಮಾ ನಾಣಯ್ಯ ಮುಖ್ಯಭೂಮಿಕೆ ನಿಭಾಯಿಸಿರುವ ಈ ಸಿನಿಮಾದ ರಿಲೀಸ್ ದಿನಾಂಕ ಸಹ ಮುಂದೂಡಿಕೆ ಆಗಿದೆ. ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ಜ.21ರಂದು ‘ಏಕ್ ಲವ್ ಯಾ’ (Ek Love Ya) ತೆರೆಗೆ ಬರಬೇಕಿತ್ತು. ಆದರೆ ದೇಶದಲ್ಲಿ ಒಮಿಕ್ರಾನ್ ಪ್ರಕರಣಗಳು (Omicron Cases in India) ಹೆಚ್ಚುತ್ತಿರುವ ಕಾರಣ ಚಿತ್ರಮಂದಿರಗಳಲ್ಲಿ ಶೇ.50ರಷ್ಟು ಆಕ್ಯುಪೆನ್ಸಿಗೆ ಮಾತ್ರ ಅವಕಾಶ ನೀಡಲಾಗಿದೆ. ಇಂಥ ಪರಿಸ್ಥಿತಿಯಲ್ಲಿ ಸಿನಿಮಾ ರಿಲೀಸ್ ಮಾಡಿದರೆ ಕಲೆಕ್ಷನ್ ಮೇಲೆ ಹೊಡೆತ ಬೀಳಲಿದೆ. ಹಾಗಾಗಿ ‘ಏಕ್ ಲವ್ ಯಾ’ ಬಿಡುಗಡೆ ದಿನಾಂಕವನ್ನು ಮುಂದೂಡಲು ಚಿತ್ರತಂಡ ನಿರ್ಧರಿಸಿದೆ. ‘ಕೊವಿಡ್ ಪ್ರಕರಣಗಳ ಸಂಖ್ಯೆ ಕಡಿಮೆ ಆಗಿ, ಎಲ್ಲ ಸಮಸ್ಯೆಗಳು ಪರಿಹಾರ ಆದಮೇಲೆ ಹೊಸ ಡೇಟ್ ಅನೌನ್ಸ್ ಮಾಡುತ್ತೇನೆ’ ಎಂದು ಪ್ರೇಮ್ ಹೇಳಿದ್ದಾರೆ.
ಇದನ್ನೂ ಓದಿ:
‘ನನ್ನ ಉಸಿರು ಇರೋವರೆಗೆ ಪುನೀತ್ ಫೋನ್ ನಂಬರ್ ಡಿಲೀಟ್ ಮಾಡಲ್ಲ’: ಜೋಗಿ ಪ್ರೇಮ್ ಭಾವುಕ ಮಾತು
‘ಊಟ, ತಿಂಡಿ ಇಲ್ಲದೇ ಗಾಂಧಿನಗರದಲ್ಲಿ ಅಲೆದವನು ನಾನು’: ಜೋಗಿ ಪ್ರೇಮ್ ಫ್ಲ್ಯಾಶ್ ಬ್ಯಾಕ್
Published on: Jan 06, 2022 09:58 AM
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ್ಯಾಪಿಡೋ ಆ್ಯಪ್ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!

