IND vs WI: 23 ವರ್ಷಗಳ ಬಳಿಕ ಮೂಡಿಬಂದ ಶತಕ..!
India vs West Indies, 2nd Test: ಬರೋಬ್ಬರಿ 23 ವರ್ಷಗಳ ಬಳಿಕ ವೆಸ್ಟ್ ಇಂಡೀಸ್ ಆರಂಭಿಕ ದಾಂಡಿಗ ಜಾನ್ ಕ್ಯಾಂಪ್ಬೆಲ್ ಶತಕ ಸಿಡಿಸಿದ್ದಾರೆ. ಈ ಶತಕದ ನೆರವಿನೊಂದಿಗೆ ವೆಸ್ಟ್ ಇಂಡೀಸ್ ತಂಡವು ದ್ವಿತೀಯ ಇನಿಂಗ್ಸ್ನಲ್ಲಿ ಬ್ಯಾಟಿಂಗ್ ಮುಂದುವರೆಸಿದ್ದು, 67 ಓವರ್ಗಳ ಮುಕ್ತಾಯದ ವೇಳೆಗೆ 3 ವಿಕೆಟ್ ಕಳೆದುಕೊಂಡು 225 ರನ್ ಕಲೆಹಾಕಿದೆ.
ಬರೋಬ್ಬರಿ 23 ವರ್ಷಗ ಬಳಿಕ ವೆಸ್ಟ್ ಇಂಡೀಸ್ ತಂಡದ ಆರಂಭಿಕ ಬ್ಯಾಟರ್ರೊಬ್ಬರು ಭಾರತದಲ್ಲಿ ಟೆಸ್ಟ್ ಶತಕ ಸಿಡಿಸಿದ್ದಾರೆ. ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಈ ಪಂದ್ಯದ ದ್ವಿತೀಯ ಇನಿಂಗ್ಸ್ನಲ್ಲಿ ಕಣಕ್ಕಿಳಿದ ಜಾನ್ ಕ್ಯಾಂಪ್ಬೆಲ್ 115 ರನ್ ಬಾರಿಸಿ ಮಿಂಚಿದ್ದಾರೆ. ಇದರೊಂದಿಗೆ ವಿಂಡೀಸ್ ಪಡೆಯ ಶತಕದ ಬರ ನೀಗಿದೆ.
ಅಂದರೆ ಕಳೆದ 23 ವರ್ಷಗಳಿಂದ ವೆಸ್ಟ್ ಇಂಡೀಸ್ ತಂಡದ ಯಾವುದೇ ಬ್ಯಾಟರ್ ಭಾರತದ ಪಿಚ್ನಲ್ಲಿ ಟೆಸ್ಟ್ ಶತಕ ಬಾರಿಸಿರಲಿಲ್ಲ. 2002 ರಲ್ಲಿ ನಡೆದ ಈಡನ್ ಗಾರ್ಡನ್ಸ್ ಟೆಸ್ಟ್ ಪಂದ್ಯದಲ್ಲಿ ವಾವೆಲ್ಸ್ ಹಿಂಡ್ಸ್ 100 ರನ್ಗಳಿಸಿದ್ದೇ ಕೊನೆ. ಇದಾದ ಬಳಿಕ ವಿಂಡೀಸ್ ತಂಡದ ಯಾವುದೇ ಒಪನರ್ ಬ್ಯಾಟರ್ ಭಾರತೀಯ ಪಿಚ್ನಲ್ಲಿ ಮೂರಂಕಿ ಮೊತ್ತ ಗಳಿಸಿರಲಿಲ್ಲ.
ಇದೀಗ ಬರೋಬ್ಬರಿ 23 ವರ್ಷಗಳ ಬಳಿಕ ವೆಸ್ಟ್ ಇಂಡೀಸ್ ಆರಂಭಿಕ ದಾಂಡಿಗ ಜಾನ್ ಕ್ಯಾಂಪ್ಬೆಲ್ ಶತಕ ಸಿಡಿಸಿದ್ದಾರೆ. ಈ ಶತಕದ ನೆರವಿನೊಂದಿಗೆ ವೆಸ್ಟ್ ಇಂಡೀಸ್ ತಂಡವು ದ್ವಿತೀಯ ಇನಿಂಗ್ಸ್ನಲ್ಲಿ ಬ್ಯಾಟಿಂಗ್ ಮುಂದುವರೆಸಿದ್ದು, 67 ಓವರ್ಗಳ ಮುಕ್ತಾಯದ ವೇಳೆಗೆ 3 ವಿಕೆಟ್ ಕಳೆದುಕೊಂಡು 225 ರನ್ ಕಲೆಹಾಕಿದೆ.
ಸಂಕ್ಷಿಪ್ತ ಸ್ಕೋರ್ ವಿವರ:
ಭಾರತ ಮೊದಲ ಇನಿಂಗ್ಸ್- 518/5 ಡಿಕ್ಲೇರ್
ವೆಸ್ಟ್ ಇಂಡೀಸ್ ಮೊದಲ ಇನಿಂಗ್ಸ್- 248
ವೆಸ್ಟ್ ಇಂಡೀಸ್ ದ್ವಿತೀಯ ಇನಿಂಗ್ಸ್- 225/3 (ಫಾಲೋ ಆನ್)