AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿ20 ಪಂದ್ಯದಲ್ಲಿ 50 ಎಸೆತಗಳಲ್ಲಿ 61 ರನ್ ಬಾರಿಸಿದ RCB ದಾಂಡಿಗ..!

ಟಿ20 ಪಂದ್ಯದಲ್ಲಿ 50 ಎಸೆತಗಳಲ್ಲಿ 61 ರನ್ ಬಾರಿಸಿದ RCB ದಾಂಡಿಗ..!

ಝಾಹಿರ್ ಯೂಸುಫ್
|

Updated on: Dec 25, 2025 | 10:24 AM

Share

Dubai Capitals vs Sharjah Warriorz: ದುಬೈ ಇಂಟರ್​​ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಶಾರ್ಜಾ ವಾರಿಯರ್ಸ್ ಹಾಗೂ ದುಬೈ ಕ್ಯಾಪಿಟಲ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಈ ಮ್ಯಾಚ್​ನಲ್ಲಿ ಮೊದಲು ಬ್ಯಾಟ್ ಮಾಡಿದ ಶಾರ್ಜಾ ವಾರಿಯರ್ಸ್ ತಂಡವು 20 ಓವರ್​ಗಳಲ್ಲಿ 8 ವಿಕೆಟ್ ಕಳೆದುಕೊಂಡು 134 ರನ್​ಗಳಿಸಲಷ್ಟೇ ಶಕ್ತರಾಗಿದ್ದರು.

ಟಿ20 ಕ್ರಿಕೆಟ್ ಅಂದರೆ ಹೊಡಿಬಡಿಯಾಟ… ಅದರಲ್ಲೂ ಕಡಿಮೆ ಮೊತ್ತದ ಟಾರ್ಗೆಟ್ ಸಿಕ್ಕರೆ ಬ್ಯಾಟರ್​ಗಳು ಅಬ್ಬರಿಸುವುದು ವಾಡಿಕೆ. ಆದರೆ ದುಬೈನಲ್ಲಿ ನಡೆದ ಇಂಟರ್​ನ್ಯಾಷನಲ್ ಲೀಗ್ ಟಿ20 ಪಂದ್ಯದಲ್ಲಿ ಸ್ಲೋ ಇನಿಂಗ್ಸ್ ಆಡಿದ ಜೋರ್ಡನ್ ಕಾಕ್ಸ್ ಸುದ್ದಿಯಾಗಿದ್ದಾರೆ.

ದುಬೈ ಇಂಟರ್​​ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಶಾರ್ಜಾ ವಾರಿಯರ್ಸ್ ಹಾಗೂ ದುಬೈ ಕ್ಯಾಪಿಟಲ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಈ ಮ್ಯಾಚ್​ನಲ್ಲಿ ಮೊದಲು ಬ್ಯಾಟ್ ಮಾಡಿದ ಶಾರ್ಜಾ ವಾರಿಯರ್ಸ್ ತಂಡವು 20 ಓವರ್​ಗಳಲ್ಲಿ 8 ವಿಕೆಟ್ ಕಳೆದುಕೊಂಡು 134 ರನ್​ಗಳಿಸಲಷ್ಟೇ ಶಕ್ತರಾಗಿದ್ದರು.

135 ರನ್​ಗಳ ಗುರಿ ಬೆನ್ನತ್ತಿದ ದುಬೈ ಕ್ಯಾಪಿಟಲ್ಸ್ ತಂಡಕ್ಕೆ ಶಯಾನ್ ಜಹಾಂಗೀರ್ ಉತ್ತಮ ಆರಂಭ ಒದಗಿಸಿದ್ದರು. 39 ಎಸೆತಗಳನ್ನು ಎದುರಿಸಿದ ಶಯಾನ್ 1 ಸಿಕ್ಸ್ ಹಾಗೂ 6 ಫೋರ್​ಗಳೊಂದಿಗೆ 51 ರನ್ ಬಾರಿಸಿದ್ದರು.

ಆದರೆ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಜೋರ್ಡನ್ ಕಾಕ್ಸ್ ನಿಧಾನಗತಿಯಲ್ಲಿ ಬ್ಯಾಟ್ ಬೀಸಿ ಅಚ್ಚರಿ ಮೂಡಿಸಿದರು. ಬರೋಬ್ಬರಿ 50 ಎಸೆತಗಳನ್ನು ಎದುರಿಸಿದ ಜೋರ್ಡನ್ 1 ಸಿಕ್ಸ್ ಹಾಗೂ 6 ಫೋರ್​ಗಳೊಂದಿಗೆ ಅಜೇಯ 61 ರನ್ ಕಲೆಹಾಕಿದರು.

ಕಾಕ್ಸ್ ಅವರ ಈ ನಿಧಾನಗತಿಯ ಬ್ಯಾಟಿಂಗ್ ಪರಿಣಾಮ 135 ರನ್​ಗಳ ಗುರಿ ತಲುಪಲು ದುಬೈ ಕ್ಯಾಪಿಟಲ್ಸ್ ತಂಡವು ಬರೋಬ್ಬರಿ 19.1 ಓವರ್​ಗಳನ್ನು ತೆಗೆದುಕೊಂಡಿತು. ಅಂದರೆ ಕೊನೆಯ ಓವರ್​ನಲ್ಲಿ 6 ವಿಕೆಟ್​ಗಳ ಜಯ ದಕ್ಕಿಸಿಕೊಂಡಿದ್ದರು.

ಅಂದಹಾಗೆ ಜೋರ್ಡನ್ ಕಾಕ್ಸ್ ಮುಂಬರುವ ಐಪಿಎಲ್​ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಕಣಕ್ಕಿಳಿಯಲಿದ್ದಾರೆ. ಈ ಬಾರಿಯ ಮಿಜಿ ಹರಾಜಿನ ಮೂಲಕ ಕಾಕ್ಸ್ ಅವರನ್ನು ಆರ್​ಸಿಬಿ 75 ಲಕ್ಷ ರೂ.ಗೆ ಖರೀದಿಸಿದೆ.