ಬಟ್ಲರ್ ಬೊಂಬಾಟ್ ಬ್ಯಾಟಿಂಗ್: ಗೆಲುವಿನೊಂದಿಗೆ MO ಅಭಿಯಾನ ಅಂತ್ಯ
The Hundred Mens Competition 2025: ಈ ಗುರಿಯನ್ನು ಬೆನ್ನತ್ತಿದ ಮ್ಯಾಂಚೆಸ್ಟರ್ ಒರಿಜಿನಲ್ಸ್ ಪರ ಜೋಸ್ ಬಟ್ಲರ್ ಭರ್ಜಿರಿ ಬ್ಯಾಟಿಂಗ್ ಪ್ರದರ್ಶಿಸಿದರು. 37 ಎಸೆತಗಳನ್ನು ಎದುರಿಸಿದ ಬಟ್ಲರ್ 5 ಭರ್ಜರಿ ಸಿಕ್ಸ್ ಹಾಗೂ 7 ಫೋರ್ಗಳೊಂದಿಗೆ 70 ರನ್ ಬಾರಿಸಿದರು. ಈ ಸ್ಫೋಟಕ ಅರ್ಧಶತಕದ ನೆರವಿನೊಂದಿಗೆ ಮ್ಯಾಂಚೆಸ್ಟರ್ ಒರಿಜಿನಲ್ಸ್ ತಂಡವು 84 ಎಸೆತಗಳಲ್ಲಿ 140 ರನ್ ಬಾರಿಸಿ 7 ವಿಕೆಟ್ಗಳ ಭರ್ಜರಿ ಜಯ ಸಾಧಿಸಿದೆ.
ದಿ ಹಂಡ್ರೆಡ್ ಲೀಗ್ನ ತನ್ನ ಕೊನೆಯ ಪಂದ್ಯದಲ್ಲಿ ಮ್ಯಾಂಚೆಸ್ಟರ್ ಒರಿಜಿನಲ್ಸ್ (MO) ತಂಡವು 7 ವಿಕೆಟ್ಗಳ ಭರ್ಜರಿ ಜಯ ಸಾಧಿಸಿದೆ. ಲೀಡ್ಸ್ನ ಹೆಡಿಂಗ್ಲೆ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ನಾರ್ತನ್ ಸೂಪರ್ ಚಾರ್ಜರ್ಸ್ ಹಾಗೂ ಮ್ಯಾಂಚೆಸ್ಟರ್ ಒರಿಜಿನಲ್ಸ್ ತಂಡಗಳು ಮುಖಾಮುಖಿಯಾಗಿದ್ದವು.
ಈ ಪಂದ್ಯದಲ್ಲಿ ಟಾಸ್ ಗೆದ್ದ ಮ್ಯಾಂಚೆಸ್ಟರ್ ಒರಿಜಿನಲ್ಸ್ ತಂಡದ ನಾಯಕ ಫಿಲ್ ಸಾಲ್ಟ್ ಬೌಲಿಂಗ್ ಆಯ್ದುಕೊಂಡರು. ಅದರಂತೆ ಮೊದಲು ಬ್ಯಾಟ್ ಮಾಡಿದ ನಾರ್ತನ್ ಸೂಪರ್ ಚಾರ್ಜರ್ಸ್ ತಂಡವು 100 ಎಸೆತಗಳಲ್ಲಿ 8 ವಿಕೆಟ್ ಕಳೆದುಕೊಂಡು 138 ರನ್ ಕಲೆಹಾಕಿತು.
ಈ ಗುರಿಯನ್ನು ಬೆನ್ನತ್ತಿದ ಮ್ಯಾಂಚೆಸ್ಟರ್ ಒರಿಜಿನಲ್ಸ್ ಪರ ಜೋಸ್ ಬಟ್ಲರ್ ಭರ್ಜಿರಿ ಬ್ಯಾಟಿಂಗ್ ಪ್ರದರ್ಶಿಸಿದರು. 37 ಎಸೆತಗಳನ್ನು ಎದುರಿಸಿದ ಬಟ್ಲರ್ 5 ಭರ್ಜರಿ ಸಿಕ್ಸ್ ಹಾಗೂ 7 ಫೋರ್ಗಳೊಂದಿಗೆ 70 ರನ್ ಬಾರಿಸಿದರು. ಈ ಸ್ಫೋಟಕ ಅರ್ಧಶತಕದ ನೆರವಿನೊಂದಿಗೆ ಮ್ಯಾಂಚೆಸ್ಟರ್ ಒರಿಜಿನಲ್ಸ್ ತಂಡವು 84 ಎಸೆತಗಳಲ್ಲಿ 140 ರನ್ ಬಾರಿಸಿ 7 ವಿಕೆಟ್ಗಳ ಭರ್ಜರಿ ಜಯ ಸಾಧಿಸಿದೆ.
ಈ ಗೆಲುವಿನೊಂದಿಗೆ ಮ್ಯಾಂಚೆಸ್ಟರ್ ಒರಿಜಿನಲ್ಸ್ ತಂಡದ ದಿ ಹಂಡ್ರೆಡ್ ಲೀಗ್ ಅಭಿಯಾನ ಅಂತ್ಯಗೊಂಡಿದೆ. ಈ ಬಾರಿಯ ಟೂರ್ನಿಯಲ್ಲಿ 8 ಪಂದ್ಯಗಳನ್ನಾಡಿರುವ ಮ್ಯಾಂಚೆಸ್ಟರ್ ಒರಿಜಿನಲ್ಸ್ 3 ಗೆಲುವಿನೊಂದಿಗೆ 6ನೇ ಸ್ಥಾನ ಅಲಂಕರಿಸಿದೆ.
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್ಪೋರ್ಟ್ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!

