ಬೆಂಗಳೂರಿನ ಟೌನ್ಹಾಲ್ ಮುಂದೆ ಭಾನುವಾರ ಭೀಕರ ಅಪಘಾತವೊಂದು ಸಂಭವಿಸಿತ್ತು. ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿಯಾಗಿದ್ದು ದ್ವಿಚತ್ರ ವಾಹನದಲ್ಲಿ ತೆರಳುತ್ತಿದ್ದ ಬೈಕ್ ಸವಾರ ಗಂಗಾಧರ್ ಮೂರ್ತಿ ಲಾರಿ ಕೆಳಗೆ ಸಿಲುಕಿದ್ದರು. ಪತ್ರಕರ್ತ ಗಂಗಾಧರ್ ಮೂರ್ತಿ ಅವರನ್ನು ಹೊರತೆಗೆದ ಸ್ಥಳೀಯರು ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿದ್ದರು. ಆದ್ರೆ ಚಿಕಿತ್ಸೆ ಫಲಿಸದೆ ಅವರು ಮೃತಪಟ್ಟಿದ್ದಾರೆ. ಕ್ರೇನ್ ಮೂಲಕ ಲಾರಿ ತೆರವು ಕಾರ್ಯಾಚರಣೆ ನಡೆದಿದ್ದು ಅಪಘಾತದ ನಂತರ ಲಾರಿ ಚಾಲಕ ಪರಾರಿಯಾಗಿದ್ದಾನೆ. ಚಾಲಕನಿಗಾಗಿ ಹಲಸೂರು ಗೇಟ್ ಪೊಲೀಸರಿಂದ ಹುಡುಕಾಟ ನಡೆಸುತ್ತಿದ್ದಾರೆ. ಎಂಹೆಚ್ 04 ಹೆಚ್‌ಎಸ್ 2180 ಸಂಖ್ಯೆಯ ಲಾರಿ ಅಪಘಾತ. ಹಲಸೂರು ಗೇಟ್ ಸಂಚಾರಿ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.