ವಿಜಯಪುರ: ಭಾರತೀಯ ಜನತಾ ಪಕ್ಷದ ಅಧ್ಯಕ್ಷ ಜೆಪಿ ನಡ್ಡಾ (JP Nadda) ಅವರು ವಿಜಯಪುರದ ಹೊರವಲಯದಲ್ಲಿರುವ ಜ್ಞಾನ ಯೋಗಾಶ್ರಮ ಭೇಟಿ ನೀಡಿದ ನಂತರ ನಗರದ ವಾರ್ಡ್ ನಂಬರ್ 10 ಮತ್ತು 12 ರಲ್ಲಿ ಪಾದಯಾತ್ರೆ ಮಾಡುತ್ತಾ ಸದಸ್ಯತ್ವ ನೋಂದಣಿ ಅಭಿಯಾನ (membership drive) ನಡೆಸಿದರು. ಅವರೊಂದಿಗೆ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ (BS Yediyurappa) ಮತ್ತು ಬಸವರಾಜ ಬೊಮ್ಮಾಯಿ ಸಂಪುಟದಲ್ಲಿ ಉನ್ನತ ಶಿಕ್ಷಣ ಖಾತೆಯ ಸಚಿವರಾಗಿರುವ ಡಾ ಸಿ ಎನ್ ಆಶ್ವಥ್ ನಾರಾಯಣ ಮತ್ತು ನೂರಾರು ಕಾರ್ಯಕರ್ತರು ಭಾಗವಹಿಸಿದ್ದರಾದರೂ ಸ್ಥಳೀಯ ಶಾಸಕ ಬಸನಗೌಡ ಪಾಟೀಲ ಯತ್ನಾಳ್ (Basangouda Patil Yatnal) ಅವರ ಗೈರುಹಾಜರಿ ಎದ್ದುಕಾಣುತ್ತಿತ್ತು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.