JP Nadda in Vijayapura: ಪಕ್ಷದ ಅಧ್ಯಕ್ಷರಿಂದ ಸದಸ್ಯತ್ವ ಅಭಿಯಾನ, ಬಿಎಸ್ ವೈ ಭಾಗಿ, ಸ್ಥಳೀಯ ಶಾಸಕ ಬಸನಗೌಡ ಯತ್ನಾಳ್ ಗೈರು!

ಅರುಣ್​ ಕುಮಾರ್​ ಬೆಳ್ಳಿ

Updated on: Jan 21, 2023 | 2:40 PM

ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪಮತ್ತು ನೂರಾರು ಕಾರ್ಯಕರ್ತರು ಭಾಗವಹಿಸಿದ್ದರಾದರೂ ಸ್ಥಳೀಯ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಅವರ ಗೈರುಹಾಜರಿ ಎದ್ದುಕಾಣುತ್ತಿತ್ತು.

ವಿಜಯಪುರ:  ಭಾರತೀಯ ಜನತಾ ಪಕ್ಷದ ಅಧ್ಯಕ್ಷ ಜೆಪಿ ನಡ್ಡಾ (JP Nadda) ಅವರು ವಿಜಯಪುರದ ಹೊರವಲಯದಲ್ಲಿರುವ ಜ್ಞಾನ ಯೋಗಾಶ್ರಮ ಭೇಟಿ ನೀಡಿದ ನಂತರ ನಗರದ ವಾರ್ಡ್ ನಂಬರ್ 10 ಮತ್ತು 12 ರಲ್ಲಿ ಪಾದಯಾತ್ರೆ ಮಾಡುತ್ತಾ ಸದಸ್ಯತ್ವ ನೋಂದಣಿ ಅಭಿಯಾನ (membership drive) ನಡೆಸಿದರು. ಅವರೊಂದಿಗೆ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ (BS Yediyurappa) ಮತ್ತು ಬಸವರಾಜ ಬೊಮ್ಮಾಯಿ ಸಂಪುಟದಲ್ಲಿ ಉನ್ನತ ಶಿಕ್ಷಣ ಖಾತೆಯ ಸಚಿವರಾಗಿರುವ ಡಾ ಸಿ ಎನ್ ಆಶ್ವಥ್ ನಾರಾಯಣ ಮತ್ತು ನೂರಾರು ಕಾರ್ಯಕರ್ತರು ಭಾಗವಹಿಸಿದ್ದರಾದರೂ ಸ್ಥಳೀಯ ಶಾಸಕ ಬಸನಗೌಡ ಪಾಟೀಲ ಯತ್ನಾಳ್ (Basangouda Patil Yatnal) ಅವರ ಗೈರುಹಾಜರಿ ಎದ್ದುಕಾಣುತ್ತಿತ್ತು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.

Loading...
Unable to load recommendations.
Follow Us
ಅರುಣ್​ ಕುಮಾರ್​ ಬೆಳ್ಳಿ

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.