ಜೆಪಿಸಿ ವಿಜಯಪುರಕ್ಕೆ ಬರುವಂತಾಗಿದ್ದು ಯತ್ನಾಳ್ ಹೋರಾಟದ ಫಲ: ಪ್ರತಾಪ್ ಸಿಂಹ
ಮುಖ್ಯಮಂತ್ರಿ ಸಿದ್ದರಾಮಯ್ಯ ನಿನ್ನೆ ಮೈಸೂರು ಲೋಕಾಯುಕ್ತ ಅಧಿಕಾರಿಗಳ ಮುಂದೆ ವಿಚಾರಣೆ ಹಾಜರಾದ ವಿಷಯಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಪ್ರತಾಪ್ ಸಿಂಹ, ಮುಡಾ ಪ್ರಕರಣವನ್ನು ಲೋಕಾಯುಕ್ತ ಮತ್ತು ಈಡಿ ಎರಡೂ ತನಿಖೆ ಮಾಡುತ್ತಿವೆ, ಕಾನೂನಿನ ಮುಂದೆ ಎಲ್ಲರೂ ಒಂದೇ, ಹಾಗಾಗಿ ಸಿದ್ದರಾಮಯ್ಯ ವಿಚಾರಣೆಗೆ ಹಾಜರಾಗಿದ್ದಾರೆ ಎಂದರು.
ಹುಬ್ಬಳ್ಳಿ: ನಗರದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಮಾಜಿ ಸಂಸದ ಪ್ರತಾಪ್ ಸಿಂಹ, ವಿಜಯಪುರದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ವಕ್ಫ್ ಬೋರ್ಡ್ ವಿರುದ್ಧ ರೈತರ ಪರವಾಗಿ ಹೋರಾಟ ನಡೆಸಿದ್ದಾರೆ, ಅವರ ಹೋರಾಟದ ಫಲವಾಗೇ ಜಂಟಿ ಸದನ ಸಮಿತಿಯು ಇಲ್ಲಿಗೆ ಅಗಮಿಸಿದೆ, ರೈತರು ಎದುರಿಸುತ್ತಿರುವ ಸಮಸ್ಯೆಗಳನ್ನು ಶಾಸಕರು ಸದನ ಸಮಿತಿಗೆ ವಿವರಿಸಲಿದ್ದಾರೆ, ಮುಂದಿನ ಸಂಸತ್ ಅಧಿವೇಶನದಲ್ಲಿ ವಕ್ಫ್ ಕಾಯ್ದೆಗೆ ತಿದ್ದುಪಡಿ ತಂದು ಮಂಡಿಸುವ ಮುನ್ನ ರೈತರು ಎದುರಿಸುತ್ತಿರುವ ಸಮಸ್ಯೆಗಳನ್ನು ಪರಿಗಣಿಸಲಾಗುವುದು ಎಂದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ: ಯಾರದೋ ಹೆಣ ತಂದು ಹೂತು ನಮ್ಮದು ಎನ್ನುತ್ತಾರೆ: ವಕ್ಫ್ ಆಸ್ತಿ ವಿಚಾರವಾಗಿ ಪ್ರತಾಪ್ ಸಿಂಹ ವಾಗ್ದಾಳಿ