ಜೂ.ಎನ್ಟಿಆರ್ ಹಾಗೂ ಪ್ರಶಾಂತ್ ನೀಲ್ಗೆ ಹುಟ್ಟೂರು ಪರಿಚಯಿಸಿದ ರಿಷಬ್ ಶೆಟ್ಟಿ
ಪ್ರಶಾಂತ್ ನೀಲ್ ಹಾಗೂ ಜೂನಿಯರ್ ಎನ್ಟಿಆರ್ ಅವರು ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನಲ್ಲಿರುವ ರಿಷಬ್ ಶೆಟ್ಟಿ ಹುಟ್ಟೂರು ಕೆರಾಡಿ ಗ್ರಾಮಕ್ಕೆ ಭೇಟಿ ನೀಡಿದ್ದಾರೆ. ಮೂಡಗಲ್ಲು ಕೇಶವನಾಥೇಶ್ವರ ಗುಹಾಂತರ ದೇವಾಲಯಕ್ಕೆ ಭೇಟಿ ನೀಡಿದ್ದಾರೆ. ಆ ಸಂದರ್ಭದ ವಿಡಿಯೋ ಇಲ್ಲಿದೆ.
ಜೂನಿಯರ್ ಎನ್ಟಿಆರ್ ಹಾಗೂ ಪ್ರಶಾಂತ್ ನೀಲ್ ಅವರು ಕರಾವಳಿ ಭಾಗವನ್ನು ಸುತ್ತಿದ್ದಾರೆ. ಇವರುಗಳಿಗೆ ಪ್ರದೇಶಗಳನ್ನು ಪರಿಚಯಿಸಿದ್ದು ಖ್ಯಾತ ನಟ, ನಿರ್ದೇಶಕ ರಿಷಬ್ ಶೆಟ್ಟಿ ಅವರು. ಈ ಮೂವರು ಕುಟುಂಬದ ಜೊತೆ ಸೇರಿ ಕೆರಾಡಿ ಗ್ರಾಮದ ಮೂಡಗಲ್ಲು ಕೇಶವನಾಥೇಶ್ವರ ಗುಹಾಂತರ ದೇವಾಲಯಕ್ಕೆ ಭೇಟಿ ನೀಡಿದ್ದಾರೆ. ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಕೆರಾಡಿ ಗ್ರಾಮ ರಿಷಬ್ ಅವರ ಹುಟ್ಟೂರು. ಗ್ರಾಮವನ್ನು ಅವರು ಪರಿಚಯಿಸಿದ್ದಾರೆ. ಬೆಟ್ಟದ ತಪ್ಪಲಿನಲ್ಲಿ ಓಡಾಡುವ ದೃಶ್ಯ ಡ್ರೋನ್ ಕ್ಯಾಮರಾದಲ್ಲಿ ಸೆರೆ ಆಗಿದೆ. ಅಮ್ಮನ ಆಸೆ ಈಡೇರಿಸಲು ಜೂನಿಯರ್ ಎನ್ಟಿಆರ್ ಅವರು ಉಡುಪಿಯ ಕೃಷ್ಣ ಮಠಕ್ಕೆ ತೆರಳಿದ್ದರು. ನಂತರ ಕುಂದಾಪುರದಲ್ಲಿನ ವಿವಿಧ ಸ್ಥಳಗಳಿಗೆ ಅವರು ಭೇಟಿ ಕೊಟ್ಟಿದ್ದಾರೆ. ಈ ವಿಡಿಯೋನ ರಿಷಬ್ ಹಂಚಿಕೊಂಡಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.