ಟಾಲಿವುಡ್ ನಟ ನಂದಮೂರಿ ತಾರಕ ರತ್ನ (Nandamuri Taraka Ratna) ಅವರಿಗೆ ಆನೇಕಲ್ನ ನಾರಾಯಣ ಹೃದಯಾಲಯದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಜ.27ರಂದು ಕುಪ್ಪಂನಲ್ಲಿ ಪಾದಯಾತ್ರೆ ಮಾಡುತ್ತಿದ್ದ ವೇಳೆ ಅವರು ತೀವ್ರವಾಗಿ ಅಸ್ವಸ್ಥಗೊಂಡಿದ್ದರು. ಕೂಡಲೇ ಅವರನ್ನು ಬೆಂಗಳೂರಿಗೆ ಕರೆದುಕೊಂಡು ಬಂದು ಆಸ್ಪತ್ರೆಗೆ ದಾಖಲಿಸಲಾಯಿತು. ಅವರ ಆರೋಗ್ಯ ಸ್ಥಿತಿ ಇನ್ನೂ ಕೂಡ ಗಂಭೀರವಾಗಿಯೇ ಇದೆ ಎಂದು ಹೇಳಲಾಗುತ್ತಿದೆ. ತಾರಕ ರತ್ನ ಅವರ ಸಹೋದರ ಜೂ. ಎನ್ಟಿಆರ್ (Jr NTR) ಅವರು ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ. ನಂದಮೂರಿ ಕಲ್ಯಾಣ್ ರಾಮ್, ಸಚಿವ ಸುಧಾಕರ್, ಶಿವರಾಜ್ಕುಮಾರ್, ನಂದಮೂರಿ ಬಾಲಕೃಷ್ಣ (Nandamuri Balakrishna) ಕೂಡ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ. ತಾರಕ ರತ್ನ ಅವರು ಬೇಗ ಗುಣಮುಖರಾಗಲಿ ಎಂದು ಅಭಿಮಾನಿಗಳು ಪ್ರಾರ್ಥಿಸುತ್ತಿದ್ದಾರೆ.
ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.