Taraka Ratna: ತಾರಕ ರತ್ನ ಆರೋಗ್ಯ ಸ್ಥಿತಿ ಗಂಭೀರ; ಬೆಂಗಳೂರಿನ ಆಸ್ಪತ್ರೆಗೆ ಶಿವಣ್ಣ, ಬಾಲಯ್ಯ, ಎನ್​ಟಿಆರ್​ ಭೇಟಿ

Updated on: Jan 29, 2023 | 12:59 PM

Nandamuri Taraka Ratna Health Update: ತಾರಕ ರತ್ನ ಅವರ ಆರೋಗ್ಯ ಸ್ಥಿತಿ ಇನ್ನೂ ಕೂಡ ಗಂಭೀರವಾಗಿಯೇ ಇದೆ. ಅನೇಕ ಸೆಲೆಬ್ರಿಟಿಗಳು ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ.

ಟಾಲಿವುಡ್​ ನಟ ನಂದಮೂರಿ ತಾರಕ ರತ್ನ (Nandamuri Taraka Ratna) ಅವರಿಗೆ ಆನೇಕಲ್​ನ ನಾರಾಯಣ ಹೃದಯಾಲಯದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಜ.27ರಂದು ಕುಪ್ಪಂನಲ್ಲಿ ಪಾದಯಾತ್ರೆ ಮಾಡುತ್ತಿದ್ದ ವೇಳೆ ಅವರು ತೀವ್ರವಾಗಿ ಅಸ್ವಸ್ಥಗೊಂಡಿದ್ದರು. ಕೂಡಲೇ ಅವರನ್ನು ಬೆಂಗಳೂರಿಗೆ ಕರೆದುಕೊಂಡು ಬಂದು ಆಸ್ಪತ್ರೆಗೆ ದಾಖಲಿಸಲಾಯಿತು. ಅವರ ಆರೋಗ್ಯ ಸ್ಥಿತಿ ಇನ್ನೂ ಕೂಡ ಗಂಭೀರವಾಗಿಯೇ ಇದೆ ಎಂದು ಹೇಳಲಾಗುತ್ತಿದೆ. ತಾರಕ ರತ್ನ ಅವರ ಸಹೋದರ ಜೂ. ಎನ್​ಟಿಆರ್​ (Jr NTR) ಅವರು ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ. ನಂದಮೂರಿ ಕಲ್ಯಾಣ್​ ರಾಮ್​, ಸಚಿವ ಸುಧಾಕರ್​, ಶಿವರಾಜ್​ಕುಮಾರ್​, ನಂದಮೂರಿ ಬಾಲಕೃಷ್ಣ (Nandamuri Balakrishna) ಕೂಡ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ. ತಾರಕ ರತ್ನ ಅವರು ಬೇಗ ಗುಣಮುಖರಾಗಲಿ ಎಂದು ಅಭಿಮಾನಿಗಳು ಪ್ರಾರ್ಥಿಸುತ್ತಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More