‘ದೇವರ’ ಬಿಡುಗಡೆ, ಜೂ ಎನ್​ಟಿಆರ್ ಬೃಹತ್ ಕಟೌಟ್​ಗೆ ಬೆಂಕಿ: ವಿಡಿಯೋ ನೋಡಿ

‘ದೇವರ’ ಸಿನಿಮಾವನ್ನು ಜೂ ಎನ್​ಟಿಆರ್ ಅಭಿಮಾನಿಗಳು ಅದ್ಧೂರಿಯಾಗಿ ಸ್ವಾಗತಿಸಿದ್ದಾರೆ. ಆದರೆ ಸಿನಿಮಾ ಬಿಡುಗಡೆ ದಿನ ಆಂಧ್ರ-ತೆಲಂಗಾಣದ ಕೆಲ ಚಿತ್ರಮಂದಿರಗಳಲ್ಲಿ ಫ್ಯಾನ್ಸ್​ ಗಲಾಟೆಯನ್ನೂ ಮಾಡಿದ್ದಾರೆ. ಹೈದರಾಬಾದ್​ನ ಸುದರ್ಶನ್ ಚಿತ್ರಮಂದಿರದ ಬಳಿ ನಿಲ್ಲಿಸಲಾಗಿದ್ದ ಜೂ ಎನ್​ಟಿಆರ್ ಕಟೌಟ್​ಗೆ ಬೆಂಕಿ ತಗುಲಿದೆ.

‘ದೇವರ’ ಬಿಡುಗಡೆ, ಜೂ ಎನ್​ಟಿಆರ್ ಬೃಹತ್ ಕಟೌಟ್​ಗೆ ಬೆಂಕಿ: ವಿಡಿಯೋ ನೋಡಿ
|

Updated on: Sep 27, 2024 | 3:04 PM

ಜೂ ಎನ್​ಟಿಆರ್ ನಟನೆಯ ‘ದೇವರ’ ಸಿನಿಮಾ ಸೆಪ್ಟೆಂಬರ್ 27 ರಂದು ವಿಶ್ವದಾದ್ಯಂತ ಬಿಡುಗಡೆ ಆಗಿದೆ. ದಕ್ಷಿಣದ ರಾಜ್ಯಗಳಲ್ಲಿ ಜೂ ಎನ್​ಟಿಆರ್​ ಅಭಿಮಾನಿಗಳು ಚಿತ್ರಮಂದಿರದ ಕಟೌಟ್​ಗಳನ್ನು ಕಟ್ಟಿ ಸಿನಿಮಾವನ್ನು ಅದ್ಧೂರಿಯಾಗಿ ಸ್ವಾಗತಿಸಿದ್ದಾರೆ. ಹಲವು ಕಡೆ ಮಧ್ಯ ರಾತ್ರಿಯೇ ಶೋಗಳನ್ನು ಪ್ರದರ್ಶಿಸಲಾಗಿದ್ದು, ಆಂಧ್ರ-ತೆಲಂಗಾಣದ ಹಲವು ಚಿತ್ರಮಂದಿರಗಳಲ್ಲಿ ಗಲಾಟೆಗಳು ಸಹ ನಡೆದಿವೆ. ಇದರ ನಡುವೆ ಹೈದರಾಬಾದ್​ನ ಸುದರ್ಶನ್ ಚಿತ್ರಮಂದಿರದ ಮುಂದೆ ನಿಲ್ಲಿಸಲಾಗಿದ್ದ ಜೂ ಎನ್​ಟಿಆರ್ ಅವರ ಬೃಹತ್ ಕಟೌಟ್​ಗೆ ಬೆಂಕಿ ತಗುಲಿದೆ. ಅಭಿಮಾನಿಗಳು ಪಟಾಕಿ ಹೊಡೆದು ಸಂಭ್ರಮಾಚರಣೆ ನಡೆಸುತ್ತಿರುವ ವೇಳೆ ಆಕಸ್ಮಿಕವಾಗಿ ಬೆಂಕಿ ತಗುಲಿದೆ ಎನ್ನಲಾಗುತ್ತಿದೆ. ಚಿತ್ರಮಂದಿರದ ಸಿಬ್ಬಂದಿ ಮತ್ತು ಅಭಿಮಾನಿಗಳು ಶೀಘ್ರವೇ ಬೆಂಕಿಯನ್ನು ನಂದಿಸಿದ್ದಾರೆ. ಈ ಘಟನೆಯಲ್ಲಿ ಯಾರಿಗೂ ಯಾವುದೇ ಸಮಸ್ಯೆ ಆಗಿಲ್ಲ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us