ವಿಡಿಯೋ: ಉಡುಪಿ ಕೃಷ್ಣನ ದರ್ಶನ ಪಡೆದು ಕನ್ನಡದಲ್ಲಿ ಮಾತನಾಡಿದ ಜೂ ಎನ್​ಟಿಆರ್

Updated on: Aug 31, 2024 | 10:02 PM

Jr NTR: ಜೂ ಎನ್​ಟಿಆರ್ ಇಂದು ಕರ್ನಾಟಕಕ್ಕೆ ಬಂದಿದ್ದರು. ತಾಯಿಯ ಆಸೆ ಈಡೇರಿಸಲು ಅವರು ರಾಜ್ಯಕ್ಕೆ ಭೇಟಿ ನೀಡಿದ್ದು ವಿಶೇಷ. ಉಡುಪಿ ಕೃಷ್ಣ ಮಠಕ್ಕೆ ಭೇಟಿ ನೀಡಿದ್ದ ಜೂ ಎನ್​ಟಿಆರ್, ತಮಗೆ ಎದುರಾದ ಮಾಧ್ಯಮಗಳೊಡನೆ ಕನ್ನಡದಲ್ಲಿಯೇ ಮಾತನಾಡಿದರು.

ನಟ ಜೂ ಎನ್​ಟಿಆರ್ ಇಂದು (ಆಗಸ್ಟ್ 31) ಕರ್ನಾಟಕಕ್ಕೆ ಭೇಟಿ ನೀಡಿದ್ದರು. ತಮ್ಮ ತಾಯಿಯ ಆಸೆಯಂತೆ ಅವರ ಹುಟ್ಟುಹಬ್ಬಕ್ಕೆ ಮುಂಚೆ ಅವರನ್ನು ಕುಂದಾಪುರಕ್ಕೆ ಹಾಗೂ ಉಡುಪಿಯ ಶ್ರೀಕೃಷ್ಣ ದೇವಸ್ಥಾನಕ್ಕೆ ಕರೆತಂದಿದ್ದರು. ಜೂ ಎನ್​ಟಿಆರ್ ಜೊತೆಗೆ ನಟ ರಿಷಬ್ ಶೆಟ್ಟಿ ಹಾಗೂ ಪ್ರಶಾಂತ್ ನೀಲ್ ಜೊತೆಗಿದ್ದರು. ಮಂಗಳೂರಿಗೆ ಬಂದಿಳಿದು, ಅಲ್ಲಿಂದ ಉಡುಪಿ ಕೃಷ್ಣ ದೇವಾಲಯಕ್ಕೆ ಭೇಟಿ ನೀಡಿ, ಅಲ್ಲಿಂದ ಕುಂದಾಪುರಕ್ಕೆ ತೆರಳಿದ ಜೂ ಎನ್​ಟಿಆರ್ ಆ ನಂತರ ಬಸ್ರೂರಿಗೆ ತೆರಳಿ ಸಂಗೀತ ನಿರ್ದೇಶಕ ರವಿ ಬಸ್ರೂರು ಅವರ ಸ್ಟುಡಿಯೋಗೆ ಭೇಟಿ ನೀಡಿದರು. ಅಲ್ಲಿ ತಮ್ಮ ಮುಂದಿನ ‘ಡ್ರ್ಯಾಗನ್’ ಸಿನಿಮಾದ ಕೆಲವು ಟ್ಯೂನ್​ಗಳನ್ನು ಸಹ ಕೇಳಿದರಂತೆ. ಈ ಸಮಯದಲ್ಲಿ ರಿಷಬ್ ಶೆಟ್ಟಿ ಸಹ ಜೊತೆಗೆ ಇದ್ದರು. ಉಡುಪಿ ಮಠಕ್ಕೆ ಭೇಟಿ ನೀಡಿದ್ದಾಗ ಮಾಧ್ಯಮಗಳೊಟ್ಟಿಗೆ ಮಾತನಾಡಿದ ಜೂ ಎನ್​ಟಿಆರ್, ಕನ್ನಡದಲ್ಲಿ ಸುಲಲಿತವಾಗಿ ಮಾತನಾಡಿ ಆಶ್ಚರ್ಯ ಮೂಡಿಸಿದರು.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More