ಜೈಲಿಗೆ ಹೋದ ಪವಿತ್ರಾ ಗೌಡ; ಅಮ್ಮನಿಗಾಗಿ ಪೊಲೀಸ್ ವ್ಯಾನ್ ಹೊರಗೆ ಕಾದು ನಿಂತ ಮಗಳು

Updated on: Jun 20, 2024 | 8:52 PM

ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಎ1 ಪವಿತ್ರಾ ಗೌಡ ಸೇರಿ 10 ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ದರ್ಶನ್​ ಹಾಗೂ ಇನ್ನುಳಿದ ಆರೋಪಿಗಳನ್ನು ಪುನಃ ಪೊಲೀಸ್​ ಕಸ್ಟಡಿಗೆ ನೀಡಲಾಗಿದೆ. ಪರಪ್ಪನ ಅಗ್ರಹಾರಕ್ಕೆ ಪವಿತ್ರಾ ಗೌಡ ತೆರಳುವುದಕ್ಕೂ ಮೊದಲು ಅವರನ್ನು ಮಾತನಾಡಿಸಲು ಪುತ್ರಿ ಖುಷಿ ಗೌಡ ಪ್ರಯತ್ನಿಸಿದರು. ತಾಯಿಯನ್ನು ನೋಡಲು ಅವರು ಪೊಲೀಸ್​ ವ್ಯಾನ್​ನ ಹೊರಗೆ ನಿಂತು ಕಾದಿದ್ದರು.

ನಟಿ ಪವಿತ್ರಾ ಗೌಡ ಜೈಲು ಪಾಲಾಗಿದ್ದಾರೆ. ರೇಣುಕಾ ಸ್ವಾಮಿ (Renuka Swamy) ಕೊಲೆ ಪ್ರಕರಣದಲ್ಲಿ ಪವಿತ್ರಾ ಗೌಡ ಪ್ರಮುಖ ಆರೋಪಿ ಆಗಿದ್ದು, ಇಂದು (ಜೂನ್​ 20) ಅವರ ಪೊಲೀಸ್​​ ಕಸ್ಟಡಿ ಅಂತ್ಯವಾಗಿದೆ. ಈ ಹಿನ್ನೆಲೆಯಲ್ಲಿ ಕೋರ್ಟ್​ಗೆ ಹಾಜರುಪಡಿಸಲಾಗಿತ್ತು. ವಿಚಾರಣೆ ನಡೆಸಿದ ನ್ಯಾಯಾಲಯವು ಪವಿತ್ರಾ ಗೌಡ (Pavithra Gowda) ಸೇರಿ ಹಲವು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಕಳಿಸಿದೆ. ಕೋರ್ಟ್​ನಲ್ಲಿ ವಿಚಾರಣೆ ಮುಗಿಸಿ ಪೊಲೀಸ್​ ವ್ಯಾನ್​ ಹತ್ತಿದಾಗ ಅವರನ್ನು ನೋಡಲು ಪುತ್ರಿ ಖುಷಿ ಗೌಡ (Pavithra Gowda Daughter Kushi Gowda) ಆಗಮಿಸಿದ್ದರು. ನೂಕುನುಗ್ಗಲಿನ ನಡುವೆ ತಾಯಿ ಜೊತೆ ಮಾತನಾಡಲು ಖುಷಿ ಗೌಡ ಹರಸಾಹಸ ಪಡಬೇಕಾಯಿತು. ಪವಿತ್ರಾ ಗೌಡ ಅವರ ಕುಟುಂಬದ ಇತರೆ ಸದಸ್ಯರು ಕೂಡ ಪೊಲೀಸ್​ ವ್ಯಾನ್​ನ ಪಕ್ಕದಲ್ಲಿ ನಿಂತು ಮಾತನಾಡಿದರು. ನ್ಯಾಯಾಂಗ ಬಂಧನಕ್ಕೆ ಒಳಗಾಗಿರುವ ಪವಿತ್ರಾ ಗೌಡ ಅವರನ್ನು ಪರಪ್ಪನ ಅಗ್ರಹಾರಕ್ಕೆ ಶಿಫ್ಟ್​ ಮಾಡಲಾಗಿದೆ. ಚಿತ್ರದುರ್ಗದ ರೇಣುಕಾ ಸ್ವಾಮಿಯ ಭೀಕರ ಹತ್ಯೆಯಲ್ಲಿ ಪವಿತ್ರಾ ಗೌಡ ಎ1, ದರ್ಶನ್​ ಎ2 ಆಗಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More