ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಭೇಟಿ ರಹಸ್ಯ ಬಿಚ್ಚಿಟ್ಟ ಮಾಜಿ ಸಿಎಂ ಸಿದ್ದರಾಮಯ್ಯ
ರಮೇಶ್ ಜಾರಕಿಹೊಳಿ ಅವರ ಭೇಟಿ ಕುರಿತು ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, "ಬಂದಿದ್ದು ಸುಮ್ಮನೆ, ಕುಶಲೋಪರಿ ಮಾತನಾಡಿದ್ದು ಅಷ್ಟೇ," ಎಂದು ಹೇಳಿದ್ದಾರೆ. ರಾಜಕೀಯ ಮಹತ್ವವನ್ನು ತಳ್ಳಿಹಾಕಿದ್ದಾರೆ. ಸ್ಟಿಂಗ್ ಕಾರ್ಯಾಚರಣೆ ಪ್ರಕರಣಕ್ಕೆ ತಡೆಯಾಜ್ಞೆ ನೀಡಿರುವುದರಿಂದ ಈ ವಿಷಯದ ಬಗ್ಗೆ ಹೆಚ್ಚು ಮಾತನಾಡುವ ಅಗತ್ಯವಿಲ್ಲ ಎಂದು ಸಹ ಅವರು ಸ್ಪಷ್ಟಪಡಿಸಿದ್ದಾರೆ.
ಮೈಸೂರು, ಅಕ್ಟೋಬರ್ 14: ಸ್ಟಿಂಗ್ ಆಪರೇಷನ್ ವಿಚಾರವಾಗಿ ಮೈಸೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಲು ಮಾಜಿ ಸಿಎಂ ಸಿದ್ದರಾಮಯ್ಯ ಹಿಂದೇಟು ಹಾಕಿದ್ದಾರೆ. ಅದಕ್ಕೆ ಸ್ಟೇ ಕೊಟ್ಟಿದ್ದಾರೆ, ಅದರ ಬಗ್ಗೆ ಇನ್ನೇನು ಮಾತನಾಡಲಿ ಎಂದು ಪ್ರಶ್ನಿಸಿದ್ದಾರೆ. ರಮೇಶ್ ಜಾರಕಿಹೊಳಿ ಭೇಟಿ ವಿಚಾರವಾಗಿಯೂ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಸಿದ್ದರಾಮಯ್ಯ, ಅವರು ಬಂದಿದ್ದು ಉಭಯ ಕುಶಲೋಪರಿ ವಿಚಾರಿಸಲು. ರಮೇಶ್ ಬಂದು ಊಟ ಮಾಡಿದ್ರು ಹೋದ್ರು ಎಂದು ತಿಳಿಸಿದ್ದಾರೆ. ಮೈಸೂರಿನ ಟಿ.ಕೆ.ಲೇಔಟ್ನಲ್ಲಿರುವ ಸಿದ್ದರಾಮಯ್ಯ ನಿವಾಸಕ್ಕೆ ತೆರಳಿದ್ದ ರಮೇಶ್ ಜಾರಕಿಹೊಳಿ, ಮಾಜಿ ಸಿಎಂ ಜೊತೆ ಕೆಲ ಕಾಲ ಮಾತುಕತೆ ನಡೆಸಿದ್ದರು.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
Loading...
Unable to load recommendations.
Follow Us
