ಅಮೆರಿಕ ಅಧ್ಯಕ್ಷ ಟ್ರಂಪ್ಗೂ ಮೊದಲೇ ಪ್ರಮಾಣವಚನ ಸ್ವೀಕರಿಸಿದ ಉಪಾಧ್ಯಕ್ಷ
ಅಮೆರಿಕದ ಅಧ್ಯಕ್ಷರಾಗಿ ಚುನಾಯಿತರಾಗಿರುವ 78 ವರ್ಷದ ಡೊನಾಲ್ಡ್ ಟ್ರಂಪ್ 2ನೇ ಅವಧಿಗೆ ಅಧ್ಯಕ್ಷರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಮೆರಿಕದ ಕಾಲಮಾನದ ಪ್ರಕಾರ ಮಧ್ಯಾಹ್ನ 12.30ಕ್ಕೆ (ಭಾರತೀಯ ಕಾಲಮಾನದ ಪ್ರಕಾರ ರಾತ್ರಿ 10.30ಕ್ಕೆ) ಟ್ರಂಪ್ ಪ್ರಮಾಣವಚನ ಸಮಾರಂಭ ನಡೆದಿದ್ದು, ಇದರಲ್ಲಿ ಪಾಲ್ಗೊಳ್ಳಲು ಇಂದು ಮುಂಜಾನೆಯಿಂದಲೇ ಜನರು ಕಿಕ್ಕಿರಿದು ಸೇರಿದ್ದರು.
ವಾಷಿಂಗ್ಟನ್ ಡಿಸಿ(ಜನವರಿ 20) ಅಮೆರಿಕದಲ್ಲಿ ಜೋ ಬೈಡೆನ್ ಆಡಳಿತ ಅಂತ್ಯಗೊಂಡಿದ್ದು, ಇಂದಿನಿಂದ ಡೋನಾಲ್ಡ್ ಟ್ರಂಪ್ ಯುಗಾರಂಭವಾಗಿದೆ. ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ದಾಖಲಿಸಿದ ಡೊನಾಲ್ಡ್ ಟ್ರಂಪ್ ಇಂದು ಭಾರತೀಯ ಕಾಲಮಾನ ಜನವರಿ 20ರ ರಾತ್ರಿ ಅಮೆರಿಕದ 47ನೇ ಅಧ್ಯಕ್ಷರಾಗಿ ಪ್ರಮಾಣವಚನ ಸ್ವೀಕರಿಸಿದರು. ಅಮೆರಿಕ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ನ್ಯಾ। ಜಾನ್ ರಾಬರ್ಟ್ಸ್, ನೂತನ ಅಧ್ಯಕ್ಷ ಟ್ರಂಪ್‌ಗೆ ಪ್ರಮಾಣವಚನ ಬೋಧಿಸಿದರು. ಇನ್ನು ಪ್ರಮುಖ ಅಂಶ ಅಂದರೆ ಡೊನಾಲ್ಡ್ ಟ್ರಂಪ್ ಅಧ್ಯಕ್ಷರಾಗಿ ಪ್ರಮಾಣವಚನ ಸ್ವೀಕರಿಸಿದರು. ಹೌದು…ಅಮೆರಿಕದ ವಾಷಿಂಗ್ಟನ್ ಡಿಸಿಯ ಕ್ಯಾಪಿಟಲ್ ರೊಟುಂಡಾ ಒಳಾಂಗಣ ಸಭಾಂಗಣದಲ್ಲಿ ಅಮೆರಿಕದ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಪ್ರಮಾಣವಚನ ಸ್ವೀಕಾರ ಸಮಾರಂಭ ನಡೆದಿದ್ದು, ಟ್ರಂಪ್ಗೂ ಮೊದಲೇ ಅಮೆರಿಕದ ಉಪಾಧ್ಯಕ್ಷರಾಗಿ ಜೆಡಿ ವ್ಯಾನ್ಸ್ ಪ್ರಮಾಣವಚನ ಸ್ವೀಕರಿಸಿದರು.
Latest Videos