ಅಮೆರಿಕ ಅಧ್ಯಕ್ಷ ಟ್ರಂಪ್​ಗೂ ಮೊದಲೇ ಪ್ರಮಾಣವಚನ ಸ್ವೀಕರಿಸಿದ ಉಪಾಧ್ಯಕ್ಷ

Updated on: Jan 20, 2025 | 11:06 PM

ಅಮೆರಿಕದ ಅಧ್ಯಕ್ಷರಾಗಿ ಚುನಾಯಿತರಾಗಿರುವ 78 ವರ್ಷದ ಡೊನಾಲ್ಡ್ ಟ್ರಂಪ್ 2ನೇ ಅವಧಿಗೆ ಅಧ್ಯಕ್ಷರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಮೆರಿಕದ ಕಾಲಮಾನದ ಪ್ರಕಾರ ಮಧ್ಯಾಹ್ನ 12.30ಕ್ಕೆ (ಭಾರತೀಯ ಕಾಲಮಾನದ ಪ್ರಕಾರ ರಾತ್ರಿ 10.30ಕ್ಕೆ) ಟ್ರಂಪ್ ಪ್ರಮಾಣವಚನ ಸಮಾರಂಭ ನಡೆದಿದ್ದು, ಇದರಲ್ಲಿ ಪಾಲ್ಗೊಳ್ಳಲು ಇಂದು ಮುಂಜಾನೆಯಿಂದಲೇ ಜನರು ಕಿಕ್ಕಿರಿದು ಸೇರಿದ್ದರು.

ವಾಷಿಂಗ್ಟನ್ ಡಿಸಿ(ಜನವರಿ 20) ಅಮೆರಿಕದಲ್ಲಿ ಜೋ ಬೈಡೆನ್ ಆಡಳಿತ ಅಂತ್ಯಗೊಂಡಿದ್ದು, ಇಂದಿನಿಂದ ಡೋನಾಲ್ಡ್ ಟ್ರಂಪ್ ಯುಗಾರಂಭವಾಗಿದೆ.  ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ದಾಖಲಿಸಿದ ಡೊನಾಲ್ಡ್ ಟ್ರಂಪ್ ಇಂದು ಭಾರತೀಯ ಕಾಲಮಾನ ಜನವರಿ 20ರ ರಾತ್ರಿ ಅಮೆರಿಕದ 47ನೇ ಅಧ್ಯಕ್ಷರಾಗಿ ಪ್ರಮಾಣವಚನ ಸ್ವೀಕರಿಸಿದರು. ಅಮೆರಿಕ ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ ನ್ಯಾ। ಜಾನ್‌ ರಾಬರ್ಟ್ಸ್, ನೂತನ ಅಧ್ಯಕ್ಷ ಟ್ರಂಪ್‌ಗೆ ಪ್ರಮಾಣವಚನ ಬೋಧಿಸಿದರು. ಇನ್ನು ಪ್ರಮುಖ ಅಂಶ ಅಂದರೆ ಡೊನಾಲ್ಡ್ ಟ್ರಂಪ್ ಅಧ್ಯಕ್ಷರಾಗಿ ಪ್ರಮಾಣವಚನ ಸ್ವೀಕರಿಸಿದರು. ಹೌದು…ಅಮೆರಿಕದ ವಾಷಿಂಗ್ಟನ್ ಡಿಸಿಯ ಕ್ಯಾಪಿಟಲ್‌ ರೊಟುಂಡಾ ಒಳಾಂಗಣ ಸಭಾಂಗಣದಲ್ಲಿ ಅಮೆರಿಕದ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಪ್ರಮಾಣವಚನ ಸ್ವೀಕಾರ ಸಮಾರಂಭ ನಡೆದಿದ್ದು, ಟ್ರಂಪ್​ಗೂ ಮೊದಲೇ ಅಮೆರಿಕದ ಉಪಾಧ್ಯಕ್ಷರಾಗಿ ಜೆಡಿ ವ್ಯಾನ್ಸ್​ ಪ್ರಮಾಣವಚನ ಸ್ವೀಕರಿಸಿದರು.

Loading...
Unable to load recommendations.
Follow Us
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More