ಬಿಜೆಪಿಗೆ ರಾಜೀನಾಮೆ ನೀಡಿ ಬಂದ ಅಣ್ಣಾಮಲೈಗೆ ಭರ್ಜರಿ ಸ್ವಾಗತ, ಫ್ಯಾನ್ಸ್ ಹರ್ಷೋದ್ಘಾರ ಹೇಗಿದೆ ನೋಡಿ

Updated on: Jun 05, 2026 | 9:24 PM

ಕಡೆಗೂ ಸಿಂಗಂ ಖ್ಯಾತಿಯ ಅಣ್ಣಾಮಲೈ ಬಿಜೆಪಿ ಪಕ್ಷಕ್ಕೆ ಗುಡ್‌ಬೈ ಹೇಳಿದ್ದಾರೆ. ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ಅಣ್ಣಾಮಲೈ ನೀಡಿರುವ ರಾಜೀನಾಮೆಯನ್ನು ಬಿಜೆಪಿ ಅಂಗೀಕರಿಸಿದೆ. ಈ ಮೂಲಕ ಕಳೆದ ಮೂರು ದಿನಗಳಿಂದ ನಡೆಯುತ್ತಿದ್ದ ಹಗ್ಗ-ಜಗ್ಗಾಟ ಅಂತ್ಯಗೊಂಡಿದೆ. ಆದರೆ ಅಣ್ಣಾಮಲೈ ಪಕ್ಷ ತೊರೆಯುತ್ತಿದ್ದಂತೇ, ಬಿಜೆಪಿ ನಾಯಕರು ಭಿನ್ನ ಹೇಳಿಕೆಗಳನ್ನು ನೀಡಲಾರಂಭಿಸಿದ್ದಾರೆ. "ಅಣ್ಣಾಮಲೈ ಹೊರಹೋಗುವುದರಿಂದ ಪಕ್ಷಕ್ಕೆ ಯಾವ ನಷ್ಟವೂ ಇಲ್ಲ ಎಂದು ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ನೈನಾರ್‌ ನಾಗೇಂದ್ರನ್‌ ಹೇಳಿಕೆ ನೀಡಿದ್ದಾರೆ.

ಚೆನ್ನೈ, (ಜೂನ್ 05): ಕಡೆಗೂ ಸಿಂಗಂ ಖ್ಯಾತಿಯ ಅಣ್ಣಾಮಲೈ ಬಿಜೆಪಿ ಪಕ್ಷಕ್ಕೆ ಗುಡ್‌ಬೈ ಹೇಳಿದ್ದಾರೆ. ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ಅಣ್ಣಾಮಲೈ ನೀಡಿರುವ ರಾಜೀನಾಮೆಯನ್ನು ಬಿಜೆಪಿ ಅಂಗೀಕರಿಸಿದೆ. ಈ ಮೂಲಕ ಕಳೆದ ಮೂರು ದಿನಗಳಿಂದ ನಡೆಯುತ್ತಿದ್ದ ಹಗ್ಗ-ಜಗ್ಗಾಟ ಅಂತ್ಯಗೊಂಡಿದೆ. ಆದರೆ ಅಣ್ಣಾಮಲೈ ಪಕ್ಷ ತೊರೆಯುತ್ತಿದ್ದಂತೇ, ಬಿಜೆಪಿ ನಾಯಕರು ಭಿನ್ನ ಹೇಳಿಕೆಗಳನ್ನು ನೀಡಲಾರಂಭಿಸಿದ್ದಾರೆ. “ಅಣ್ಣಾಮಲೈ ಹೊರಹೋಗುವುದರಿಂದ ಪಕ್ಷಕ್ಕೆ ಯಾವ ನಷ್ಟವೂ ಇಲ್ಲ ಎಂದು ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ನೈನಾರ್‌ ನಾಗೇಂದ್ರನ್‌ ಹೇಳಿಕೆ ನೀಡಿದ್ದಾರೆ.

ಇನ್ನೊಂದೆಡೆ ರಾಜೀನಾಮೆ ಅಂಗೀಕರಿಸುತ್ತಿದ್ದಂತೆಯೇ ದೆಹಲಿಯಿಂದ ಚೆನ್ನೈಗೆ ಆಗಮಿಸಿದ ಅಣ್ಣಾಮಲೈ ಭರ್ಜರಿ ಸ್ವಾಗತ ಸಿಕ್ಕಿದೆ. ಬಿಜೆಪಿಗೆ ರಾಜೀನಾಮೆ ನೀಡಿದ್ದರಿಂದ ಸಂತಸಗೊಂಡಿರುವ ಬೆಂಬಲಿಗರು ಹಾಗೂ ಅಭಿಮಾನಿಗಳು ಅಣ್ಣಾಮಲೈ ಅವರನ್ನು ಅದ್ಧೂರಿಯಾಗಿ ಬರಮಾಡಿಕೊಂಡಿದ್ದಾರೆ.

Loading...
Unable to load recommendations.
Follow Us
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More