Karnataka Assembly Polls; ಜಗದೀಶ್ ಶೆಟ್ಟರ್ ಮನವೊಲಿಸುವ ಪ್ರಯತ್ನ ಜಾರಿಯಲ್ಲಿದೆ: ಬಸವರಾಜ ಬೊಮ್ಮಾಯಿ, ಮುಖ್ಯಮಂತ್ರಿ

ಅರುಣ್​ ಕುಮಾರ್​ ಬೆಳ್ಳಿ

Updated on: Apr 15, 2023 | 11:01 AM

ಬೆಂಗಳೂರಲ್ಲೇ ಇರುವ ರಾಜ್ಯ ಬಿಜೆಪಿ ಉಸ್ತುವಾರಿ ಧರ್ಮೇಂದ್ರ ಪ್ರಧಾನ್ ಜೊತೆ ತಾವು ಶೆಟ್ಟರ್ ವಿಷಯದಲ್ಲಿ ಚರ್ಚಿಸಿರುವುದಾಗಿ ಬೊಮ್ಮಾಯಿ ಹೇಳಿದರು

ಬೆಂಗಳೂರು: ಜಗದೀಶ್ ಶೆಟ್ಟರ್ (Jagadish Shettar) ಅವರಿಗೆ ಟಿಕೆಟ್ ಸಿಗದಿರುವುದಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರೇ ಕಾರಣ ಎಂದು ಮಾಜಿ ಮುಖ್ಯಮಂತ್ರಿಯ ಬೆಂಬಲಿಗರು ಹೇಳುತ್ತಾರೆ. ಆದರೆ ಬೊಮ್ಮಾಯಿ ಹೇಳೋದೇ ಬೇರೆ. ಹುಬ್ಬಳ್ಳಿಯಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಮುಖ್ಯಮಂತ್ರಿಯವರು, ಉತ್ತರ ಕರ್ನಾಟಕ ಭಾಗಕ್ಕೆ ಶೆಟ್ಟರ್ ಬಹಳ ದೊಡ್ಡ ಶಕ್ತಿಯಾಗಿದ್ದಾರೆ, ಅವರನ್ನು ಪಕ್ಷ ಯಾವ ಕಾರಣಕ್ಕೂ ಕಳೆದುಕೊಳ್ಳಲು ತಯಾರಿಲ್ಲ, ಅವರ ಮನವೊಲಿಸುವ ಪ್ರಯತ್ನ ಜಾರಿಯಲ್ಲಿದೆ, ಬೆಂಗಳೂರಲ್ಲೇ ಇರುವ ರಾಜ್ಯ ಬಿಜೆಪಿ ಉಸ್ತುವಾರಿ ಧರ್ಮೇಂದ್ರ ಪ್ರಧಾನ್ (Dharmendra Pradhan) ಜೊತೆ ತಾವು ಶೆಟ್ಟರ್ ವಿಷಯದಲ್ಲಿ ಚರ್ಚಿಸಿರುವುದಾಗಿ ಹೇಳಿದರು. ಪಕ್ಷದ ರಾಷ್ಟ್ರೀಯ ಆಧ್ಯಕ್ಷ ಜೆಪಿ ನಡ್ಡಾ ಮತ್ತು ಇತರ ವರಿಷ್ಠ ನಾಯಕರೊಂದಿಗೂ ಮಾತುಕತೆ ನಡೆಸಿರುವುದಾಗಿ ಬೊಮ್ಮಾಯಿ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮತ್ತಷ್ಟು ಚುನಾವಣಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.