AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನನಗೂ ಮುಖ್ಯಮಂತ್ರಿಯಾಗಬೇಕು ಎಂಬ ಆಸೆ ಇದೆ: ಸಚಿವ ಕೆ.ಎಚ್. ಮುನಿಯಪ್ಪ

ನನಗೂ ಮುಖ್ಯಮಂತ್ರಿಯಾಗಬೇಕು ಎಂಬ ಆಸೆ ಇದೆ: ಸಚಿವ ಕೆ.ಎಚ್. ಮುನಿಯಪ್ಪ

ಅಕ್ಷಯ್​ ಪಲ್ಲಮಜಲು​​
|

Updated on: Jan 15, 2026 | 3:07 PM

Share

ಕೆ.ಎಚ್. ಮುನಿಯಪ್ಪ ಅವರು ದಲಿತ ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷೆಗಳ ಬಗ್ಗೆ ಮಾತನಾಡಿದ್ದು, ಈ ನಿರ್ಧಾರವನ್ನು ಹೈಕಮಾಂಡ್‌ಗೆ ಬಿಡಲಾಗಿದೆ ಎಂದರು. ಮಲ್ಲಿಕಾರ್ಜುನ ಖರ್ಗೆ ಉದಾಹರಣೆ ನೀಡಿದ ಅವರು, 2028ಕ್ಕೆ ಕಾಂಗ್ರೆಸ್ ಅಧಿಕಾರಕ್ಕೆ ಬರುವ ವಿಶ್ವಾಸ ವ್ಯಕ್ತಪಡಿಸಿದರು. ಅಧಿಕಾರಿಗಳ ರಕ್ಷಣೆ ಕುರಿತು ಪ್ರತಿಕ್ರಿಯಿಸಿ, ಇಂತಹ ಘಟನೆಗಳು ಪುನರಾವರ್ತನೆಯಾಗಬಾರದು ಎಂದು ಎಚ್ಚರಿಕೆ ನೀಡಿದರು.

ಬೆಂಗಳೂರು,ಜ.15: ದಲಿತ ಸಮುದಾಯದ ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷೆ ಮತ್ತು ಹೈಕಮಾಂಡ್‌ನ ಪಾತ್ರ ಕುರಿತು ಸಚಿವ ಕೆ.ಎಚ್. ಮುನಿಯಪ್ಪ ಬೆಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ. ದಲಿತ ಮುಖ್ಯಮಂತ್ರಿ ವಿಚಾರವನ್ನು ಹೈಕಮಾಂಡ್ ತೀರ್ಮಾನ ಮಾಡುತ್ತದೆ. ಇದು ಮಲ್ಲಿಕಾರ್ಜುನ ಖರ್ಗೆ ಅವರ ಕಾಲದಿಂದಲೂ ಇದ್ದ ಆಸೆ, ಹೊಸದೇನಲ್ಲ ಎಂದರು. ಹೈಕಮಾಂಡ್ ಎಲ್ಲವನ್ನೂ ಅರ್ಥ ಮಾಡಿಕೊಂಡಿದೆ ಮತ್ತು ಸರಿಯಾದ ಸಮಯದಲ್ಲಿ ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತದೆ ಎಂದು ಮುನಿಯಪ್ಪ ತಿಳಿಸಿದರು. ಮಲ್ಲಿಕಾರ್ಜುನ ಖರ್ಗೆ ಅವರು ಕಾಂಗ್ರೆಸ್ ಅಧ್ಯಕ್ಷರಾಗಿದ್ದಾಗಲೂ 80 ಸೀಟುಗಳನ್ನು ಪಡೆದರೂ ಅವರಿಗೆ ಮುಖ್ಯಮಂತ್ರಿ ಸ್ಥಾನ ಸಿಗಲಿಲ್ಲ ಎಂಬ ನೋವನ್ನು ವ್ಯಕ್ತಪಡಿಸಿದರು. ಶೇ.25ರಷ್ಟು ಸಮುದಾಯಗಳು ಶೇ.75ರಷ್ಟು ಮತಗಳನ್ನು ಕಾಂಗ್ರೆಸ್‌ಗೆ ನೀಡಿದರೂ ಅವರಿಗೆ ಸೂಕ್ತ ಪ್ರಾತಿನಿಧ್ಯ ಸಿಗುತ್ತಿಲ್ಲ ಎಂಬುದನ್ನು ಹೈಕಮಾಂಡ್ ಗಮನಕ್ಕೆ ತರಲಾಗಿದೆ ಎಂದರು. ಪಕ್ಷದ ಶಿಸ್ತಿನ ಸಿಪಾಯಿಗಳಾಗಿ ಹೈಕಮಾಂಡ್ ನಿರ್ಧಾರಕ್ಕೆ ಬದ್ಧರಾಗಿರುವುದಾಗಿ ಹೇಳಿದರು. 2028ಕ್ಕೆ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಲು ಗ್ಯಾರಂಟಿ ಕಾರ್ಯಕ್ರಮಗಳು ಸಹಕಾರಿಯಾಗಿವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ