ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾದರೆ ಅವರ ಸಂಪುಟದಲ್ಲಿ ನನಗೆ ಸಚಿವ ಸ್ಥಾನ ಬೇಡ: ಕೆ.ಎನ್. ರಾಜಣ್ಣ
ಶಾಸಕ ಕೆ.ಎನ್. ರಾಜಣ್ಣ ಅವರು ತುಮಕೂರಿನಲ್ಲಿ ಮಾತನಾಡಿ, ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿಯಾದರೆ ಅವರ ಸಂಪುಟದಲ್ಲಿ ಸಚಿವ ಸ್ಥಾನ ಬೇಡ ಎಂದು ಕಡ್ಡಿ ಮುರಿದಂತೆ ಹೇಳಿದ್ದಾರೆ. ತಮಗೆ ಅಧಿಕಾರದ ದಾಹವಿಲ್ಲ, ಬೇರೆಯವರಿಗೆ ಅವಕಾಶ ಸಿಗಲಿ ಎಂಬುದು ಅವರ ನಿಲುವು. ರಾಜಣ್ಣ ಅವರ ಈ ಹೇಳಿಕೆ ರಾಜಕೀಯ ವಲಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ.
ಮೈಸೂರು, ಡಿ.6: ರಾಜ್ಯದಲ್ಲಿ ಮುಖ್ಯಮಂತ್ರಿ ಸ್ಥಾನ ಬದಲಾವಣೆ ಸಂಬಂಧಿಸಿದಂತೆ ಚರ್ಚೆ ನಡೆಯುತ್ತಿರುವ ವೇಳೆ, ಮಾಜಿ ಸಚಿವ ಕೆ.ಎನ್ ರಾಜಣ್ಣ (K.N. Rajanna) ಮಹತ್ವ ಹೇಳಿಕೆಯನ್ನು ನೀಡಿದ್ದಾರೆ. ಒಂದು ವೇಳೆ ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾದರೆ ನನಗೆ ಸಚಿವ ಸ್ಥಾನ ಬೇಡ ಮತ್ತೊಬ್ಬರಿಗೆ ಅವಕಾಶ ಕೊಡಲಿ. ನನಗೆ ಯಾವ ಸ್ಥಾನವೂ ಬೇಕಾಗಿಲ್ಲ. ನಾನು ಮೊದಲೇ ಹೇಳಿದ್ದೇನೆ, ಹಾಗಂತ ಡಿ.ಕೆ.ಶಿವಕುಮಾರ್ ಸಿಎಂ ಆಗ್ತಾರೆಂದು ಹೇಳುತ್ತಿಲ್ಲ. ಆದೇನು ಸಿಎಂ ಆಗೇ ಬಿಡುತ್ತಾರೆ ಅಂದುಕೊಂಡಿದ್ದೀರಾ? ನನಗೆ ಅಧಿಕಾರದ ದಾಹ ಇಲ್ಲ ಎಂದು ಹೇಳಿದ್ದಾರೆ. ಇದೀಗ ಈ ಹೇಳಿಕೆ ಹೊಸ ಚರ್ಚೆಗೆ ಕಾರಣವಾಗಿದೆ.
ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Latest Videos

