ಕಿಲ್ಲರ್ ಬಿಎಂಟಿಸಿಗೆ ಇನ್ನೆಷ್ಟು ಬಲಿ ಬೇಕು?: ಯುವತಿ ತಲೆ ಮೇಲೆ ಹರಿದ BMTC ಎಲೆಕ್ಟ್ರಿಕ್ ಬಸ್

Updated on: Feb 07, 2026 | 4:39 PM

ಬೆಂಗಳೂರಿನ ಕೆ.ಆರ್. ಪುರಂ ಮೆಟ್ರೋ ಬಳಿ ಬೆಳಿಗ್ಗೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಹನ್ನಾ ಎಂಬ ಯುವತಿ ಪ್ರಾಣ ಕಳೆದುಕೊಂಡಿದ್ದಾರೆ. BMTC ಎಲೆಕ್ಟ್ರಿಕ್ ಬಸ್ ಬೈಕಿಗೆ ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ, ಚಾಲಕನ ಅತಿ ವೇಗ ಮತ್ತು ನಿರ್ಲಕ್ಷ್ಯವೇ ಕಾರಣ ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ. ಹನ್ನಾ ಬಸ್ಸಿನ ಚಕ್ರದಡಿ ಸಿಲುಕಿ ತೀವ್ರ ಗಾಯಗಳಿಂದ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ರಸ್ತೆ ಸುರಕ್ಷತೆಯ ಬಗ್ಗೆ ಈ ಘಟನೆ ಮತ್ತೊಮ್ಮೆ ಎಚ್ಚರಿಕೆ ನೀಡಿದೆ.

ಬೆಂಗಳೂರು, ಫೆ.7: ಬೆಂಗಳೂರಿನ ಕೆ.ಆರ್. ಪುರಂ ಮೆಟ್ರೋ ನಿಲ್ದಾಣದ ಬಳಿ ಭೀಕರ ರಸ್ತೆ ಅಪಘಾತ ನಡೆದಿದೆ. ಬೆಳಿಗ್ಗೆ 9:30 ರಿಂದ 10 ಗಂಟೆಯ ಸುಮಾರಿಗೆ ಈ ದುರಂತ ಸಂಭವಿಸಿದೆ. ಹನ್ನಾ ಅವರು ತಮ್ಮ ಸ್ನೇಹಿತನ ಜೊತೆ ಬೈಕ್‌ನಲ್ಲಿ ತೆರಳುತ್ತಿದ್ದಾಗ, ಕೆ.ಆರ್. ಪುರಂ ರೈಲ್ವೆ ನಿಲ್ದಾಣ ಮತ್ತು ಮೆಟ್ರೋ ನಿಲ್ದಾಣದ ಸಮೀಪದ ರಸ್ತೆಯಲ್ಲಿ BMTC ಎಲೆಕ್ಟ್ರಿಕ್ ಬಸ್ (ಮಾರ್ಗ ಸಂಖ್ಯೆ 500/D) ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಬೈಕ್ ನಿಯಂತ್ರಣ ಕಳೆದುಕೊಂಡು ಹಿಂಬದಿ ಕುಳಿತಿದ್ದ ಹನ್ನಾ ನೇರವಾಗಿ ಬಸ್ಸಿನ ಮುಂಭಾಗದ ಚಕ್ರದ ಅಡಿ ಸಿಲುಕಿದ್ದಾರೆ. ಚಾಲಕನ ಅತಿ ವೇಗ ಮತ್ತು ಅಜಾಗರೂಕತೆಯೇ ಈ ಸಾವಿಗೆ ನೇರ ಕಾರಣ ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ. ಅಪಘಾತದ ನಂತರ ಹನ್ನಾ ಅವರನ್ನು ತಕ್ಷಣವೇ ಕೆ.ಆರ್. ಪುರಂನ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ತಲೆಗೆ ಆದ ತೀವ್ರ ಪೆಟ್ಟು ಮತ್ತು ರಕ್ತಸ್ರಾವದಿಂದಾಗಿ ಅವರು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.

ವಿಡಿಯೋ ಸುದ್ದಿಗಳು ಓದಲು ಇಲ್ಲಿ ಕ್ಲಿಕ್ ಮಾಡಿ

ವರದಿ: ನಟರಾಜ್ ಮೆಟ್ರೋ

Loading...
Unable to load recommendations.
Follow Us
ಅಕ್ಷಯ್​ ಪಲ್ಲಮಜಲು​​

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More