ರವೀಂದ್ರ ಕಲಾಕ್ಷೇತ್ರ ತಲುಪಿದ ಶಿವರಾಮ್ ಪಾರ್ಥಿವ ಶರೀರ; ಅಂತಿಮ ದರ್ಶನಕ್ಕೆ ವ್ಯವಸ್ಥೆ  

|

Updated on: Mar 01, 2024 | 11:08 AM

ನಟ, ರಾಜಕಾರಣಿ ಹಾಗೂ ಮಾಜಿ ಐಎಎಸ್ ಅಧಿಕಾರಿ ಶಿವರಾಮ್ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ವ್ಯವಸ್ಥೆ ಮಾಡಲಾಗಿದೆ. ಚಿತ್ರರಂಗದ ಸೆಲೆಬ್ರಿಟಿಗಳು, ಕಲಾವಿದರು ಹಾಗೂ ಅಭಿಮಾನಿಗಳು ಇಲ್ಲಿಗೆ ಆಗಮಿಸಿ ಅಂತಿಮ ದರ್ಶನ ಪಡೆಯಲಿದ್ದಾರೆ. ಆ ಸಂದರ್ಭದ ವಿಡಿಯೋ ಇಲ್ಲಿದೆ.

ಕೆ. ಶಿವರಾಮ್ ಅವರ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಅವರ ಪಾರ್ಥಿವ ಶರೀರವನ್ನು ಇಡಲಾಗಿದೆ. ಚಿತ್ರರಂಗದ ಸೆಲೆಬ್ರಿಟಿಗಳು, ಕಲಾವಿದರು ಹಾಗೂ ಅಭಿಮಾನಿಗಳು ಇಲ್ಲಿಗೆ ಆಗಮಿಸಿ ಅಂತಿಮ ದರ್ಶನ ಪಡೆಯಲಿದ್ದಾರೆ. ಐಎಎಸ್​ ಅಧಿಕಾರಿಯಾಗಿ ಸೇವೆ ಸಲ್ಲಿಸುವಾಗ ನಟನಾದ ದೇಶದ ಎಕೈಕ ವ್ಯಕ್ತಿ ಎನ್ನುವ ಹೆಗ್ಗಳಿಕೆ ಶಿವರಾಮ್ (Shivaram) ಅವರಿಗೆ ಸಲ್ಲಿಕೆ ಆಗುತ್ತದೆ. ಶಿವರಾಮ್ ಅವರು ಸಾಕಷ್ಟು ಸಾಮಾಜಿಕ ಕೆಲಸಗಳನ್ನು ಮಾಡಿದ್ದಾರೆ. ಈ ಮೂಲಕ ಅವರು ಎಲ್ಲರ ಮೆಚ್ಚುಗೆ ಪಡೆದಿದ್ದಾರೆ. ಶಿವರಾಮ್ ಪಾರ್ಥಿವ ಶರೀರದ ಎದುರು ಅವರ ಕುಟುಂಬ ಕಣ್ಣೀರು ಹಾಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

 

Published on: Mar 01, 2024 11:07 AM