ರಾಜಕೀಯಕ್ಕೆ ಕಾಲಿಟ್ಟ ಶಿವರಾಂ ಪತ್ನಿ; ಚಾಮರಾಜ ನಗರದಿಂದ ಸ್ಪರ್ಧಿಸೋ ಸೂಚನೆ ಕೊಟ್ಟ ವಾಣಿ

Updated on: Mar 19, 2024 | 8:24 AM

ನಟ, ರಾಜಕಾರಣಿ, ಮಾಜಿ ಐಎಎಸ್ ಅಧಿಕಾರಿ ಶಿವರಾಂ ಅವರು ಇತ್ತೀಚೆಗೆ ನಿಧನ ಹೊಂದಿದರು. ಈ ವೇಳೆ ಅವರ ಪತ್ನಿ ವಾಣಿ ಸಾಕಷ್ಟು ಬೇಸರಗೊಂಡಿದ್ದರು. ಈಗ ಅವರು ರಾಜಕೀಯಕ್ಕೆ ಕಾಲಿಡುವ ಆಲೋಚನೆ ಮಾಡಿದ್ದಾರೆ. ಈ ಬಗ್ಗೆ ಸುದ್ದಿಗೋಷ್ಠಿ ಕರೆದು ಮಾಹಿತಿ ನೀಡಿದ್ದಾರೆ. ‘

ನಟ, ಮಾಜಿ ಐಎಎಸ್ ಅಧಿಕಾರಿ, ರಾಜಕಾರಣಿ ಶಿವರಾಂ (Shivaran) ಅವರು ಇತ್ತೀಚೆಗೆ ನಿಧನ ಹೊಂದಿದರು. ಈ ವೇಳೆ ಅವರ ಪತ್ನಿ ವಾಣಿ ಸಾಕಷ್ಟು ಬೇಸರಗೊಂಡಿದ್ದರು. ಈಗ ಅವರು ರಾಜಕೀಯಕ್ಕೆ ಕಾಲಿಡುವ ಆಲೋಚನೆ ಮಾಡಿದ್ದಾರೆ. ಈ ಬಗ್ಗೆ ಸುದ್ದಿಗೋಷ್ಠಿ ಕರೆದು ಮಾಹಿತಿ ನೀಡಿದ್ದಾರೆ. ‘ಅವರು ಮೃತಪಟ್ಟ ನಂತರ ಯಾರೊಬ್ಬರೂ ಬಂದು ನನ್ನನ್ನು ಸಮಾಧಾನ ಮಾಡಿಲ್ಲ’ ಎಂದು ದುಃಖ ತೋಡಿಕೊಂಡಿದ್ದಾರೆ. ಸದ್ಯ ಅವರು ಚಾಮರಾಜ ನಗರದಿಂದ ಸ್ಪರ್ಧಿಸುವ ಸೂಚನೆ ಕೊಟ್ಟಿದ್ದಾರೆ. ಆದರೆ, ಯಾವ ಪಕ್ಷ ಎಂದು ಅವರು ಹೇಳಿಲ್ಲ. ಕರ್ನಾಟಕದಲ್ಲಿ ಏಪ್ರಿಲ್ 26 ಹಾಗೂ ಮೇ 7ರಂದು ಎರಡು ಹಂತದಲ್ಲಿ ಚುನಾವಣೆ ನಡೆಯಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More