Kannada News Videos Kaatera director Tharun Sudhir talks about Darshan back Pain Entertainment news in Kannada
‘ಕಾಟೇರ’ ಶೂಟಿಂಗ್ ವೇಳೆಯೇ ದರ್ಶನ್ಗೆ ಬೆನ್ನು ನೋವು ಇತ್ತು: ತರುಣ್ ಸುಧೀರ್
ನಟ ದರ್ಶನ್ ಅವರು ಬಳ್ಳಾರಿ ಜೈಲಿನಿಂದ ಹೊರಗೆ ಬಂದಿದ್ದಾರೆ. ಮಧ್ಯಂತರ ಜಾಮೀನು ಸಿಕ್ಕಿರುವುದಕ್ಕೆ ದರ್ಶನ್ ಅವರ ಆಪ್ತರಿಗೆ ಸಂತಸ ಆಗಿದೆ. ನಿರ್ದೇಶಕ ತರುಣ್ ಸುಧೀರ್ ಅವರು ಪ್ರತಿಕ್ರಿಯೆ ನೀಡಿದ್ದಾರೆ. ‘ಕಾಟೇರ’ ಸಿನಿಮಾದ ಶೂಟಿಂಗ್ ವೇಳೆಯೇ ದರ್ಶನ್ ಅವರಿಗೆ ಬೆನ್ನು ನೋವಿನ ಸಮಸ್ಯೆ ಇತ್ತು ಎಂದು ತರುಣ್ ಸುಧೀರ್ ಹೇಳಿದ್ದಾರೆ.
ಬೆನ್ನು ನೋವು ಹೆಚ್ಚಾಗಿರುವುದರಿಂದ ದರ್ಶನ್ ಅವರಿಗೆ ಸರ್ಜರಿ ಮಾಡಿಸುವುದು ಅನಿವಾರ್ಯ ಆಗಿದೆ. ಹಾಗಾಗಿ ಅವರು ಜಾಮೀನು ಪಡೆದು ಹೊರಗೆ ಬಂದಿದ್ದಾರೆ. ಈ ಕುರಿತು ಅವರ ಆಪ್ತರಾದ ತರುಣ್ ಸುಧೀರ್ಅವರು ಮಾತನಾಡಿದ್ದಾರೆ. ‘ಕಾಟೇರ’ ಸಿನಿಮಾಗೆ ಚಿತ್ರೀಕರಣ ಮಾಡುವಾಗಲೇ ದರ್ಶನ್ ಅವರು ಬೆನ್ನು ನೋವಿನಿಂದ ಬಳಲುತ್ತಿದ್ದರು ಎಂಬ ವಿಚಾರವನ್ನು ತರುಣ್ ಸುಧೀರ್ ಅವರು ತಿಳಿಸಿದ್ದಾರೆ. ಅಲ್ಲದೇ ಇನ್ನೂ ಕೆಲವು ವಿಚಾರಗಳನ್ನು ಅವರು ಈ ವಿಡಿಯೋದಲ್ಲಿ ಹಂಚಿಕೊಂಡಿದ್ದಾರೆ.