‘ಕಾಟೇರ’ ನೋಡಲು ಮಧ್ಯರಾತ್ರಿ ಜನ ಜಾತ್ರೆ; ದರ್ಶನ್​ಗೆ ಜೈಕಾರ, ಪಟಾಕಿ ಅಬ್ಬರ; ವಿಡಿಯೋ ನೋಡಿ..

Edited By:

Updated on: Dec 29, 2023 | 6:33 AM

ಬೆಂಗಳೂರಿನ ಜೆ.ಪಿ. ನಗರದ ಸಿದ್ದೇಶ್ವರ ಚಿತ್ರಮಂದಿರದ ಮುಂಭಾಗ ನಡು ರಾತ್ರಿಯಲ್ಲೂ ಜನ ಜಾತ್ರೆ ಸೇರಿತ್ತು. ದರ್ಶನ್​ ಫ್ಯಾನ್ಸ್​ ಪಟಾಕಿ ಸಿಡಿಸಿ ಸಂಭ್ರಮಿಸಿದ್ದಾರೆ. ತಮ್ಮ ನೆಚ್ಚಿನ ನಟನಿಗೆ ಜೈಕಾರ ಹಾಕಿ ಅಭಿಮಾನ ವ್ಯಕ್ತಪಡಿಸಿದ್ದಾರೆ. ಮೊದಲ ಶೋ ನೋಡಿದ ಅಭಿಮಾನಿಗಳು ಪಾಸಿಟಿವ್​ ಪ್ರತಿಕ್ರಿಯೆ ನೀಡಿದ್ದಾರೆ.

ರಾಜ್ಯದ ಅನೇಕ ಚಿತ್ರಮಂದಿರಗಳಲ್ಲಿ ಗುರುವಾರ (ಡಿ.28) ಮಧ್ಯ ರಾತ್ರಿಯಿಂದಲೇ ‘ಕಾಟೇರ’ (Kaatera) ಸಿನಿಮಾದ ಅಬ್ಬರ ಶುರುವಾಗಿದೆ. ‘ಚಾಲೆಂಜಿಂಗ್​ ಸ್ಟಾರ್​’ ದರ್ಶನ್​ (Darshan) ಅಭಿಮಾನಿಗಳು ಭಾರಿ ಉತ್ಸಾಹದಿಂದ ಚಿತ್ರಮಂದಿರಗಳ ಎದುರು ನೆರೆದಿದ್ದಾರೆ. ಬೆಂಗಳೂರಿನ ಜೆ.ಪಿ. ನಗರದ ಸಿದ್ದೇಶ್ವರ ಚಿತ್ರಮಂದಿರದ ಮುಂಭಾಗ ನಡು ರಾತ್ರಿಯಲ್ಲೂ ಜನ ಜಾತ್ರೆ ಸೇರಿತ್ತು. ದರ್ಶನ್​ ಫ್ಯಾನ್ಸ್​ ಪಟಾಕಿ ಸಿಡಿಸಿ ಸಂಭ್ರಮಿಸಿದ್ದಾರೆ. ತಮ್ಮ ನೆಚ್ಚಿನ ನಟನಿಗೆ ಜೈಕಾರ ಹಾಕಿ ಅಭಿಮಾನ ವ್ಯಕ್ತಪಡಿಸಿದ್ದಾರೆ. ದರ್ಶನ್​ ಅವರ ಬಗೆಬಗೆಯ ಕಟೌಟ್​ಗಳು ತಲೆ ಎತ್ತಿವೆ. ಮೊದಲ ಶೋ ನೋಡಿದ ಅಭಿಮಾನಿಗಳು ಪಾಸಿಟಿವ್​ ಪ್ರತಿಕ್ರಿಯೆ ನೀಡಿದ್ದಾರೆ. ಈ ಚಿತ್ರಕ್ಕೆ ತರುಣ್​ ಸುಧೀರ್​ (Tharun Sudhir) ನಿರ್ದೇಶನ ಮಾಡಿದ್ದಾರೆ. ದರ್ಶನ್​ಗೆ ಜೋಡಿಯಾಗಿ ಮಾಲಾಶ್ರಿ ಮಗಳು ಆರಾಧನಾ ರಾಮ್​ ನಟಿಸಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More