AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಲಾಶ್ರೀ ನಟಿಸಿದ ಸಿನಿಮಾಗಳಲ್ಲಿ ಪುತ್ರಿ ಆರಾಧನಾಗೆ ಯಾವುದು ಹೆಚ್ಚು ಇಷ್ಟ?

ಮಾಲಾಶ್ರೀ ನಟಿಸಿದ ಸಿನಿಮಾಗಳಲ್ಲಿ ಪುತ್ರಿ ಆರಾಧನಾಗೆ ಯಾವುದು ಹೆಚ್ಚು ಇಷ್ಟ?

ಮಂಗಳ ರಾಜ್
| Edited By: |

Updated on: Sep 12, 2023 | 5:50 PM

Share

ಮಾಲಾಶ್ರೀ ನಟಿಸಿದ ಹಲವು ಸಿನಿಮಾಗಳು ಪ್ರೇಕ್ಷಕರಿಗೆ ಫೇವರಿಟ್​. ಅವುಗಳಲ್ಲಿ ಆರಾಧನಾಗೆ ಯಾವುದು ಇಷ್ಟ? ಈ ಪ್ರಶ್ನೆಗೆ ಸ್ವತಃ ಆರಾಧನಾ ಉತ್ತರ ನೀಡಿದ್ದಾರೆ. ‘ಕಾಟೇರ’ ಸಿನಿಮಾದ ಸುದ್ದಿಗೋಷ್ಠಿ ವೇಳೆ ಅವರು ಅನೇಕ ವಿಚಾರಗಳನ್ನು ಹಂಚಿಕೊಂಡಿದ್ದಾರೆ. ಮೊದಲ ಸಿನಿಮಾದಲ್ಲೇ ದರ್ಶನ್​ ಜೊತೆ ನಟಿಸುವ ಅವಕಾಶ ಅವರಿಗೆ ಸಿಕ್ಕಿದೆ.

ಹಿರಿಯ ನಟಿ ಮಾಲಾಶ್ರೀ (Malashree) ಅವರ ಪುತ್ರಿ ಆರಾಧನಾ ಅವರು ನಟಿಯಾಗಿ ಬಣ್ಣದ ಲೋಕಕ್ಕೆ ಎಂಟ್ರಿ ನೀಡುತ್ತಿದ್ದಾರೆ. ದರ್ಶನ್​ ನಟನೆಯ ‘ಕಾಟೇರ’ (Kaatera) ಸಿನಿಮಾಗೆ ಅವರು ನಾಯಕಿ ಆಗಿದ್ದಾರೆ. ಇತ್ತೀಚೆಗೆ ಈ ಸಿನಿಮಾದ ಸುದ್ದಿಗೋಷ್ಠಿ ನಡೆಯಿತು. ಈ ವೇಳೆ ಅವರು ‘ಟಿವಿ9 ಕನ್ನಡ’ ಜೊತೆ ಮಾತನಾಡಿದ್ದಾರೆ. ಮಾಲಾಶ್ರೀ ನಟಿಸಿದ ಹಲವು ಸಿನಿಮಾಗಳು ಪ್ರೇಕ್ಷಕರಿಗೆ ಫೇವರಿಟ್​. ಅವುಗಳಲ್ಲಿ ಆರಾಧನಾಗೆ ಯಾವುದು ಇಷ್ಟ? ಈ ಪ್ರಶ್ನೆಗೆ ಸ್ವತಃ ಆರಾಧನಾ (Aradhanaa) ಉತ್ತರ ನೀಡಿದ್ದಾರೆ. ‘ನಂಜುಂಡಿ ಕಲ್ಯಾಣ’, ‘ರಾಣಿ ಮಹಾರಾಣಿ’ ಮತ್ತು ‘ದುರ್ಗಿ’ ಸಿನಿಮಾಗಳು ತಮಗೆ ಇಷ್ಟ ಎಂದು ಅವರು ಹೇಳಿದ್ದಾರೆ. ‘ಕಾಟೇರ’ ಸಿನಿಮಾಗೆ ಬಹುತೇಕ ಶೂಟಿಂಗ್​ ಮುಗಿದಿದೆ. ಈ ಸಿನಿಮಾಗೆ ತರುಣ್​ ಸುಧೀರ್​ ನಿರ್ದೇಶನ ಮಾಡುತ್ತಿದ್ದಾರೆ. ರಾಕ್​ಲೈನ್​ ವೆಂಕಟೇಶ್​ ಅವರು ಬಂಡವಾಳ ಹೂಡಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
ಮಂಗಳ ರಾಜ್
ಮಂಗಳ ರಾಜ್

ಮಂಗಳ ರಾಜ್ ಮೂಲತಃ ಮಧುಗಿರಿ ಬಳಿಯ ರತ್ನಗಿರಿ ರಂಗಾಪುರದವರು. ಇವರು ಸುದ್ದಿ ಮಧ್ಯಮಕ್ಕೆ ಕಾಲಿಟ್ಟು 13 ವರ್ಷಗಳಾಗಿವೆ. ಈಟಿವಿಯಲ್ಲಿ ಇಂಟರ್​ನ್​ಶಿಪ್​ , ಮಧ್ಯಮದ ಅ, ಆ ಇ ಈ ಕಲಿತಿದ್ದು ಕಸ್ತೂರಿ ನ್ಯೂಸ್ 24 ನಲ್ಲಿ ನಂತ್ರ ರಾಜ್ ನ್ಯೂಸ್, ದಿಗ್ವಿಜಯ ನ್ಯೂಸ್ ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. 2021ರಿಂದ ಟಿವಿ9 ಕನ್ನಡದಲ್ಲಿ ಕೆಲಸ ಮುಂದುವರಿಸಿದ್ದಾರೆ. ಸಿನಿಮಾ ಅಂದ್ರೆ ಬಾಲ್ಯದಿಂದಲೂ ಹುಚ್ಚು. ಅರಸಿ ಬಂದಿದ್ದು ಸಿನಿಮಾ ಜರ್ನಲಿಸ್ಟ್ ಕೆಲಸ. ಸಿನಿಮಾ ಸುದ್ದಿಗಳ ಕವರೇಜ್, ಸಿನಿಮಾ ಹಾಗೂ ಸಿನಿಮಾ ಮಂದಿಯ ವಿವಾದಗಳು, ವಿಮರ್ಶೆ, ಸಿನಿಮಾದವರ ಸಾವು ನೋವು ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವುಗಳ ವರದಿಗಾರಿಕೆ ಇವರ ಕಾಯಕ. ಸಿನಿಮಾ ನೋಡುವುದೇ ಎಲ್ಲಾ ಆಸಕ್ತಿಗಳಿಗಿಂತ ಹೆಚ್ಚು ಆಸಕ್ತಿ.

Read More