Kaatera Press Meet: ದಿಢೀರ್ ಸುದ್ದಿಗೋಷ್ಠಿ ಕರೆದ ದರ್ಶನ್, ರಾಕ್ಲೈನ್; ಲೈವ್ ನೋಡಿ
ಸಡನ್ ಆಗಿ ‘ಕಾಟೇರ’ ಸಿನಿಮಾ ತಂಡದವರು ಸುದ್ದಿಗೋಷ್ಠಿ ನಡೆಸುತ್ತಿದ್ದಾರೆ. ನಿರ್ಮಾಪಕ ರಾಕ್ಲೈನ್ ವೆಂಕಟೇಶ್, ‘ಚಾಲೆಂಜಿಂಗ್ ಸ್ಟಾರ್’ ದರ್ಶನ್, ನಿರ್ದೇಶಕ ತರುಣ್ ಸುಧೀರ್, ಡೈಲಾಗ್ ರೈಟರ್ ಮಾಸ್ತಿ ಅವರು ‘ಕಾಟೇರ’ ಸುದ್ದಿಗೋಷ್ಠಿಯಲ್ಲಿ ಪಾಲ್ಗೊಂಡಿದ್ದಾರೆ. ಸುದ್ದಿಗೋಷ್ಠಿಯ ಉದ್ದೇಶ ಏನು ಎಂಬುದನ್ನು ರಾಕ್ಲೈನ್ ವೆಂಕಟೇಶ್ ವಿವರಿಸಿದ್ದಾರೆ. ಸುದ್ದಿಗೋಷ್ಠಿಯ ಲೈವ್ ವಿಡಿಯೋ ಇಲ್ಲಿದೆ..
ಕಳೆದ ವರ್ಷ ಕೊನೆಯಲ್ಲಿ ಬಿಡುಗಡೆ ಆದ ‘ಕಾಟೇರ’ ಸಿನಿಮಾ (Kaatera Movie) ಸೂಪರ್ ಹಿಟ್ ಆಯಿತು. ಬಳಿಕ ಒಟಿಟಿಯಲ್ಲಿ ವೀಕ್ಷಣೆಗೆ ಲಭ್ಯವಾಗಿ ಕೂಡ ಜನಮನ ಸೆಳೆಯಿತು. ನಟ ದರ್ಶನ್ (Darshan) ಅವರಿಗೆ ಈ ಸಿನಿಮಾದಿಂದ ದೊಡ್ಡ ಯಶಸ್ಸು ಸಿಕ್ಕಿತು. ದರ್ಶನ್ ಅಭಿಮಾನಿಗಳು ‘ಕಾಟೇರ’ ಸಿನಿಮಾವನ್ನು ಮುಗಿಬಿದ್ದು ನೋಡಿದರು. ನಿರ್ಮಾಪಕ ರಾಕ್ಲೈನ್ ವೆಂಕಟೇಶ್ ಅವರು ಈ ಚಿತ್ರಕ್ಕೆ ಬಂಡವಾಳ ಹೂಡಿದ್ದು, ಅವರು ಕೂಡ ಲಾಭ ಕಂಡರು. ಈಗ ದಿಢೀರ್ ಆಗಿ ‘ಕಾಟೇರ’ ಚಿತ್ರತಂಡದವರು ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ಕರೆದಿದ್ದಾರೆ. ನಟ ದರ್ಶನ್, ನಿರ್ಮಾಪಕ ರಾಕ್ಲೈನ್ ವೆಂಕಟೇಶ್ (Rockline Venkatesh), ನಿರ್ದೇಶಕ ತರುಣ್ ಸುಧೀರ್, ಸಂಭಾಷಣೆಕಾರ ಮಾಸ್ತಿ ಅವರು ಈ ಸುದ್ದಿಗೋಷ್ಠಿಯಲ್ಲಿ ಭಾಗಿ ಆಗಿದ್ದಾರೆ. ಅದರ ಲೈವ್ ವಿಡಿಯೋ ಇಲ್ಲಿದೆ..
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.