AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ

ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ

ರಾಮ್​, ಮೈಸೂರು
| Edited By: |

Updated on: Aug 03, 2026 | 8:41 AM

Share

ಮೈಸೂರಿನ ಕಬಿನಿ ಜಲಾಶಯ ಸಂಪೂರ್ಣ ಭರ್ತಿಯಾಗಿದ್ದು, ಡ್ಯಾಂನಿಂದ ನೀರು ಹೊರಬಿಡಲಾಗುತ್ತಿದೆ. ಹೊರಹರಿವಿನ ಹೆಚ್ಚಳದಿಂದ ಎಚ್.ಡಿ. ಕೋಟೆ ತಾಲೂಕಿನ ಬಿದರಹಳ್ಳಿ ಸೇತುವೆ ಮುಳುಗಡೆಯಾಗಿದೆ. ಇದು ಗ್ರಾಮಸ್ಥರಿಗೆ ಸಂಚಾರ ಸಮಸ್ಯೆಯನ್ನು ಸೃಷ್ಟಿಸಿದೆ. ಈ ಸಮಸ್ಯೆಗೆ ಶಾಶ್ವತ ಪರಿಹಾರವಾಗಿ ಹೊಸ ಸೇತುವೆ ನಿರ್ಮಾಣ ಕಾರ್ಯ ಅಂತಿಮ ಹಂತದಲ್ಲಿದೆ.

ಮೈಸೂರು, ಆಗಸ್ಟ್ 3: ಮೈಸೂರು ಜಿಲ್ಲೆಯ ಎಚ್​ಡಿ ಕೋಟೆ ತಾಲೂಕಿನ ಬೀಚನಹಳ್ಳಿ ಗ್ರಾಮದ ಬಳಿಯ ಕಬಿನಿ ಜಲಾಶಯವು ಸಂಪೂರ್ಣ ಭರ್ತಿಯಾಗಿದೆ. ಕೇರಳದ ವಯನಾಡಿನಲ್ಲಿ ಸುರಿಯುತ್ತಿರುವ ಭಾರಿ ಮಳೆಯ ಪರಿಣಾಮವಾಗಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಗಣನೀಯವಾಗಿ ಹೆಚ್ಚಾಗಿದೆ. ಹೀಗಾಗಿ, ಕಬಿನಿ ಜಲಾಶಯದಿಂದ ಹೊರಹರಿವನ್ನು ಹೆಚ್ಚಿಸಲಾಗಿದ್ದು, ಇದರ ನೇರ ಪರಿಣಾಮವಾಗಿ ಜಲಾಶಯದ ಸಮೀಪವಿರುವ ಸರ್ಗೂರು ತಾಲೂಕಿನ ಬಿದರಹಳ್ಳಿ ಸೇತುವೆ ಸಂಪೂರ್ಣವಾಗಿ ಮುಳುಗಡೆಯಾಗಿದೆ.

ಈ ಸೇತುವೆ ಬಿದರಹಳ್ಳಿ ಗ್ರಾಮ ಮತ್ತು ಎಚ್.ಡಿ. ಕೋಟೆ ನಡುವೆ ಪ್ರಮುಖ ಸಂಪರ್ಕ ಕಲ್ಪಿಸುವ ಮಾರ್ಗವಾಗಿದೆ. ಸೇತುವೆ ಮುಳುಗಡೆಯಾಗುವುದರಿಂದ, ಗ್ರಾಮಸ್ಥರು ಸುಮಾರು 15 ಕಿಲೋಮೀಟರ್ ಹೆಚ್ಚುವರಿ ದೂರವನ್ನು ಸುತ್ತಿ ಬರಬೇಕಾಗಿದೆ. ಇದು ಶಾಲಾ-ಕಾಲೇಜು ವಿದ್ಯಾರ್ಥಿಗಳು, ವೃದ್ಧರು ಹಾಗೂ ವೈದ್ಯಕೀಯ ಚಿಕಿತ್ಸೆಗಾಗಿ ತೆರಳುವ ರೋಗಿಗಳಿಗೆ ತೀವ್ರ ತೊಂದರೆಯನ್ನುಂಟುಮಾಡಿದೆ. ಈ ಸಮಸ್ಯೆ ಪ್ರತಿ ಮಳೆಗಾಲದಲ್ಲೂ ಎದುರಾಗುತ್ತಿದ್ದು, ಇದಕ್ಕೆ ಶಾಶ್ವತ ಪರಿಹಾರವಾಗಿ ಅತ್ಯಾಧುನಿಕ ಹೊಸ ಸೇತುವೆಯ ನಿರ್ಮಾಣ ಕಾರ್ಯ ಭರದಿಂದ ಸಾಗಿದೆ. ಮುಂದಿನ ಮಳೆಗಾಲದ ವೇಳೆಗೆ ಈ ಸೇತುವೆ ಸಂಚಾರಕ್ಕೆ ಮುಕ್ತವಾಗುವ ನಿರೀಕ್ಷೆಯಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us