AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kabini Dam: ಕಬಿನಿ ಜಲಾಶಯ ಸಂಪೂರ್ಣ ಭರ್ತಿ; ಡ್ಯಾಂನ 4 ಗೇಟ್​ಗಳಿಂದ ನದಿಗೆ ಭಾರಿ ಪ್ರಮಾಣದ ನೀರು ಬಿಡುಗಡೆ!

Kabini Dam: ಕಬಿನಿ ಜಲಾಶಯ ಸಂಪೂರ್ಣ ಭರ್ತಿ; ಡ್ಯಾಂನ 4 ಗೇಟ್​ಗಳಿಂದ ನದಿಗೆ ಭಾರಿ ಪ್ರಮಾಣದ ನೀರು ಬಿಡುಗಡೆ!

ರಾಮ್​, ಮೈಸೂರು
| Edited By: |

Updated on: Aug 02, 2026 | 11:16 AM

Share

ಕಬಿನಿ ಜಲಾಶಯಕ್ಕೆ ಭಾರಿ ಒಳಹರಿವು ಹೆಚ್ಚಳವಾದ ಹಿನ್ನೆಲೆಯಲ್ಲಿ ಜಲಾಶಯ ಸಂಪೂರ್ಣ ಭರ್ತಿಯಾಗಿದ್ದು, 4 ಗೇಟ್‌ಗಳನ್ನು ತೆರೆದು ನದಿಗೆ 25,000 ಕ್ಯೂಸೆಕ್ ನೀರನ್ನು ಬಿಡುಗಡೆ ಮಾಡಲಾಗಿದೆ. ಕೇರಳದ ವಯನಾಡ್‌ನಲ್ಲಿ ಸುರಿಯುತ್ತಿರುವ ಭಾರೀ ಮಳೆಯೇ ಈ ಒಳಹರಿವಿಗೆ ಕಾರಣವಾಗಿದೆ. ಕಬಿನಿ ಜಲಾಶಯದಲ್ಲಿ ಪ್ರಸ್ತುತ 82 ಅಡಿ ನೀರು ಸಂಗ್ರಹವಾಗಿದ್ದು, ಗರಿಷ್ಠ 84 ಅಡಿ ಸಾಮರ್ಥ್ಯ ಹೊಂದಿದೆ.

ಮೈಸೂರು, ಆಗಸ್ಟ್ 02: ಕಬಿನಿ ಜಲಾಶಯಕ್ಕೆ ಭಾರಿ ಒಳಹರಿವು ಹೆಚ್ಚಳವಾದ ಹಿನ್ನೆಲೆಯಲ್ಲಿ ಜಲಾಶಯ ಸಂಪೂರ್ಣ ಭರ್ತಿಯಾಗಿದ್ದು, 4 ಗೇಟ್‌ಗಳನ್ನು ತೆರೆದು ನದಿಗೆ 25,000 ಕ್ಯೂಸೆಕ್ ನೀರನ್ನು ಬಿಡುಗಡೆ ಮಾಡಲಾಗಿದೆ. ಕೇರಳದ ವಯನಾಡ್‌ನಲ್ಲಿ ಸುರಿಯುತ್ತಿರುವ ಭಾರೀ ಮಳೆಯೇ ಈ ಒಳಹರಿವಿಗೆ ಕಾರಣವಾಗಿದೆ. ಕಬಿನಿ ಜಲಾಶಯದಲ್ಲಿ ಪ್ರಸ್ತುತ 82 ಅಡಿ ನೀರು ಸಂಗ್ರಹವಾಗಿದ್ದು, ಗರಿಷ್ಠ 84 ಅಡಿ ಸಾಮರ್ಥ್ಯ ಹೊಂದಿದೆ.

ರಾಜ್ಯದಲ್ಲೇ ಮೊದಲು ತುಂಬುವ ಜಲಾಶಯ ಎಂಬ ಹೆಗ್ಗಳಿಕೆ ಹೊಂದಿರುವ ಕಬಿನಿ ಈ ವರ್ಷ ಮಳೆಯ ಕೊರತೆಯಿಂದ ಖಾಲಿಯಾಗಿ ಆತಂಕ ಮೂಡಿಸಿತ್ತು. ಇದೀಗ ಜಲಾಶಯ ಭರ್ತಿಯಾಗಿದ್ದು, ತಮಿಳುನಾಡಿಗೆ ಕಾವೇರಿ ನೀರು ಬಿಡಬೇಕು ಎಂಬ ಆದೇಶದ ನಡುವೆಯೇ ನದಿ ಪಾತ್ರಕ್ಕೆ ನೀರನ್ನು ಹರಿಸಲಾಗುತ್ತಿದೆ. ಈ ನೀರು ಮೈಸೂರು ಜಿಲ್ಲೆಯ ತಿರುಮಕೂಡಲು ಸಂಗಮದ ಮೂಲಕ ತಮಿಳುನಾಡನ್ನು ಸೇರಲಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ರಾಮ್​, ಮೈಸೂರು
ರಾಮ್​, ಮೈಸೂರು

ರಾಮ್ ಮೈಸೂರು ಪತ್ರಕರ್ತನಾಗಿ 20 ವರ್ಷದ ಅನುಭವ. ಕಳೆದ 14 ವರ್ಷಗಳಿಂದ ಟಿವಿ9 ಕನ್ನಡದ ಮೈಸೂರು ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ನಿರ್ವಹಣೆ. ರಾಜ್ಯದ ವಿಧಾನಸಭಾ ಲೋಕಸಭಾ ಚುನಾವಣೆಯ ವಿಶೇಷ ವರದಿ ಹಾಗೂ ರಾಜ್ಯದ ವಿವಿಧ ಕ್ಷೇತ್ರಗಳ ಉಪಚುನಾವಣಾ ವರದಿ, ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ರಾಹುಲ್ ಗಾಂಧಿ ಸ್ಪರ್ಧೆ ಮಾಡಿದ್ದ ಚುನಾವಣಾ ವರದಿ ಸೇರಿದಂತೆ ಹಲವು ಚುನಾವಣೆಯ ವರದಿಯ ಅನುಭವ. ಮುಂಬೈ ಮಹಾಮಳೆಯ ಕವರೇಜ್, ಕೊಡಗು ಜಿಲ್ಲೆಯ ಗುಡ್ಡ ಕುಸಿತ, ಸೇರಿದಂತೆ ಹಲವು ಸ್ಟಿಂಗ್ ಕಾರ್ಯಾಚರಣೆ, ಸಾಮಾಜಿಕ‌ ಸಮಸ್ಯೆ ಹಾಗೂ ಮಾನವೀಯ ಕಳಕಳಿಯುಳ್ಳ ವರದಿ ಮಾಡಿದ ಅನುಭವ.

Read More