AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಬಿನಿ ನದಿ ಪಾತ್ರದಲ್ಲಿರುವ ಸಾರ್ವಜನಿಕರು ಎಚ್ಚರಿಕೆಯಿಂದ ಇರಲು ಸೂಚನೆ

ಕಬಿನಿ ನದಿ ಪಾತ್ರದಲ್ಲಿರುವ ಸಾರ್ವಜನಿಕರು ಎಚ್ಚರಿಕೆಯಿಂದ ಇರಲು ಸೂಚನೆ

ರಾಮ್​, ಮೈಸೂರು
| Edited By: |

Updated on:Aug 07, 2026 | 6:43 PM

Share

ಮತ್ತೆ ಕಬಿನಿ ಡ್ಯಾಂನಿಂದ ನೀರು ಬಿಡುಗಡೆ ಬಗ್ಗೆ ನದಿ ಪಾತ್ರದವರಿಗೆ ಅಲರ್ಟ್ ನೀಡಲಾಗಿದೆ. ಜಲಾಶಯದ ನೀರಿನ ಮಟ್ಟ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕಬಿನಿ ಡ್ಯಾಂನಿಂದ ನೀರು ಹೊರಬಿಡಲು ನಿರ್ಧರಿಸಲಾಗಿದೆ. ಆರಂಭದಲ್ಲಿ 7,000 ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗುತ್ತಿದ್ದು, ಅಗತ್ಯಕ್ಕೆ ಅನುಗುಣವಾಗಿ 10,000-15,000 ಕ್ಯೂಸೆಕ್‌ವರೆಗೆ ನೀರು ಹೆಚ್ಚಳ ಸಾಧ್ಯತೆ ಇದೆ. ಹೀಗಾಗಿ ನದಿ ಪಾತ್ರದ ಜನರಿಗೆ ಎಚ್ಚರಿಕೆಯಿಂದಿರಲು ಸೂಚನೆ ನೀಡಲಾಗಿದೆ.

ಮೈಸೂರು, (ಆಗಸ್ಟ್ 07): ಮತ್ತೆ ಕಬಿನಿ ಡ್ಯಾಂಗೆ ಒಳಹರಿವು ಹೆಚ್ಚಳವಾಗಿದ್ದು, ನೀರು ಬಿಡುಗಡೆ ಬಗ್ಗೆ ನದಿ ಪಾತ್ರದವರಿಗೆ ಅಲರ್ಟ್ ನೀಡಲಾಗಿದೆ. ಜಲಾಶಯದ ನೀರಿನ ಮಟ್ಟ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕಬಿನಿ ಡ್ಯಾಂನಿಂದ ನೀರು ಹೊರಬಿಡಲು ನಿರ್ಧರಿಸಲಾಗಿದೆ. ಆರಂಭದಲ್ಲಿ 7,000 ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗುತ್ತಿದ್ದು, ಅಗತ್ಯಕ್ಕೆ ಅನುಗುಣವಾಗಿ 10,000-15,000 ಕ್ಯೂಸೆಕ್‌ವರೆಗೆ ನೀರು ಹೆಚ್ಚಳ ಸಾಧ್ಯತೆ ಇದೆ. ಹೀಗಾಗಿ ನದಿ ಪಾತ್ರದ ಜನರಿಗೆ ಎಚ್ಚರಿಕೆಯಿಂದಿರಲು ಸೂಚನೆ ನೀಡಲಾಗಿದೆ. ತಗ್ಗು ಪ್ರದೇಶಗಳಿಗೆ ತೆರಳದಂತೆ, ಜಾನುವಾರುಗಳನ್ನ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲು ಮೈಸೂರು, ನಂಜನಗೂಡು, ಟಿ.ನರಸೀಪುರ ಸೇರಿದಂತೆ ನದಿ ತೀರದ ಜನರಿಗೆ ಎಚ್ಚರಿಕೆ ವಹಿಸುವಂತೆ ಜಿಲ್ಲಾಡಳಿತ ಸೂಚನೆ ನೀಡಿದೆ. ಈ ಬಗ್ಗೆ ಕಾವೇರಿ ನೀರಾವರಿ ನಿಗಮದಿಂದ ಅಧಿಕೃತ ಪ್ರಕಟಣೆ ಮೂಲಕ ತಿಳಿಸಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Aug 07, 2026 06:42 PM

Follow Us
ರಾಮ್​, ಮೈಸೂರು
ರಾಮ್​, ಮೈಸೂರು

ರಾಮ್ ಮೈಸೂರು ಪತ್ರಕರ್ತನಾಗಿ 20 ವರ್ಷದ ಅನುಭವ. ಕಳೆದ 14 ವರ್ಷಗಳಿಂದ ಟಿವಿ9 ಕನ್ನಡದ ಮೈಸೂರು ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ನಿರ್ವಹಣೆ. ರಾಜ್ಯದ ವಿಧಾನಸಭಾ ಲೋಕಸಭಾ ಚುನಾವಣೆಯ ವಿಶೇಷ ವರದಿ ಹಾಗೂ ರಾಜ್ಯದ ವಿವಿಧ ಕ್ಷೇತ್ರಗಳ ಉಪಚುನಾವಣಾ ವರದಿ, ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ರಾಹುಲ್ ಗಾಂಧಿ ಸ್ಪರ್ಧೆ ಮಾಡಿದ್ದ ಚುನಾವಣಾ ವರದಿ ಸೇರಿದಂತೆ ಹಲವು ಚುನಾವಣೆಯ ವರದಿಯ ಅನುಭವ. ಮುಂಬೈ ಮಹಾಮಳೆಯ ಕವರೇಜ್, ಕೊಡಗು ಜಿಲ್ಲೆಯ ಗುಡ್ಡ ಕುಸಿತ, ಸೇರಿದಂತೆ ಹಲವು ಸ್ಟಿಂಗ್ ಕಾರ್ಯಾಚರಣೆ, ಸಾಮಾಜಿಕ‌ ಸಮಸ್ಯೆ ಹಾಗೂ ಮಾನವೀಯ ಕಳಕಳಿಯುಳ್ಳ ವರದಿ ಮಾಡಿದ ಅನುಭವ.

Read More