AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಸಾಕಷ್ಟು ವರ್ಷಗಳ ಹಿಂದೆ ಮುಳುಗಿದ್ದ ದೇಗುಲದ ಅವಶೇಷ ಗೋಚರ

ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಸಾಕಷ್ಟು ವರ್ಷಗಳ ಹಿಂದೆ ಮುಳುಗಿದ್ದ ದೇಗುಲದ ಅವಶೇಷ ಗೋಚರ

ರಾಮ್​, ಮೈಸೂರು
| Edited By: |

Updated on: Jun 12, 2026 | 10:06 AM

Share

ಮೈಸೂರು ಜಿಲ್ಲೆಯ ಕಬಿನಿ ಜಲಾಶಯದ ಹಿನ್ನೀರಿನಲ್ಲಿ 15 ವರ್ಷಗಳ ಬಳಿಕ ಪ್ರಾಚೀನ ಬಸವೇಶ್ವರ ದೇಗುಲದ ಅವಶೇಷಗಳು ಮತ್ತೆ ಗೋಚರವಾಗಿವೆ. ಜಲಾಶಯದಲ್ಲಿ ನೀರಿನ ಮಟ್ಟ ಗಣನೀಯವಾಗಿ ಕುಸಿದಿರುವುದೇ ಇದಕ್ಕೆ ಕಾರಣ. ರಾಜ್ಯದಲ್ಲಿ ಬರಗಾಲದ ಭೀತಿ ಎದುರಾಗಿರುವ ಬಗ್ಗೆ ಚರ್ಚೆಗಳ ನಡುವೆ ಈ ವಿದ್ಯಮಾನವು ಆತಂಕವನ್ನು ಹೆಚ್ಚಿಸಿದೆ.

ಮೈಸೂರು, ಜೂನ್ 12: ಮೈಸೂರು ಜಿಲ್ಲೆಯ ಹೆಚ್​ಡಿ ಕೋಟೆ ತಾಲ್ಲೂಕಿನ ಬೀಚನಹಳ್ಳಿ ಗ್ರಾಮದ ಕಬಿನಿ ಜಲಾಶಯದ ಹಿನ್ನೀರಿನಲ್ಲಿ ಸಾಕಷ್ಟು ವರ್ಷಗಳ ಹಿಂದೆ ಮುಳುಗಡೆಯಾಗಿದ್ದ ಬಸವೇಶ್ವರ ದೇಗುಲದ ಅವಶೇಷಗಳು ಈಗ ಮತ್ತೆ ಗೋಚರವಾಗಿವೆ. ರಾಜ್ಯದಲ್ಲಿ ಭೀಕರ ಬರಗಾಲ ಎದುರಾಗಬಹುದು ಎಂಬ ಚರ್ಚೆಯ ನಡುವೆಯೇ ಈ ವಿದ್ಯಮಾನ ಕಂಡುಬಂದಿರುವುದು ಆತಂಕಕ್ಕೆ ಕಾರಣವಾಗಿದೆ. ಕಬಿನಿ ಜಲಾಶಯದಲ್ಲಿ ನೀರಿನ ಮಟ್ಟ ತೀವ್ರವಾಗಿ ಕುಸಿದಿರುವುದರಿಂದ ದೇವಸ್ಥಾನದ ಕಲ್ಲುಮಂಟಪದ ಭಾಗಗಳು ಕಾಣಿಸಿಕೊಳ್ಳುತ್ತಿವೆ. ಸ್ಥಳೀಯರ ಪ್ರಕಾರ, 15 ವರ್ಷಗಳ ಹಿಂದೆ ಇದೇ ರೀತಿಯ ಪರಿಸ್ಥಿತಿ ಎದುರಾದಾಗಲೂ ದೇಗುಲದ ಅವಶೇಷಗಳು ಗೋಚರಿಸಿದ್ದವು. ಮುಂಗಾರು ಮಳೆ ಕಡಿಮೆಯಾಗಿ ಒಳಹರಿವಿನ ಪ್ರಮಾಣ ಇಳಿಮುಖವಾದಾಗಲೆಲ್ಲಾ ಈ ದೇಗುಲದ ಭಾಗಗಳು ಕಾಣಿಸಿಕೊಳ್ಳುತ್ತವೆ. ಸಾಮಾನ್ಯವಾಗಿ ರಾಜ್ಯದಲ್ಲಿ ಮೊದಲು ತುಂಬುವ ಜಲಾಶಯಗಳಲ್ಲಿ ಕಬಿನಿಯೂ ಒಂದು. ಆದರೆ ಈಗಿನ ನೀರಿನ ಮಟ್ಟವು ಆತಂಕಕ್ಕೆ ಕಾರಣವಾಗಿದ್ದು, ರಾಜ್ಯದಲ್ಲಿ ಬರಗಾಲದ ಪರಿಸ್ಥಿತಿ ತಲೆದೋರುತ್ತಿದೆಯೇ ಎಂಬ ಚರ್ಚೆಗೆ ಪುಷ್ಟಿ ನೀಡಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ರಾಮ್​, ಮೈಸೂರು
ರಾಮ್​, ಮೈಸೂರು

ರಾಮ್ ಮೈಸೂರು ಪತ್ರಕರ್ತನಾಗಿ 20 ವರ್ಷದ ಅನುಭವ. ಕಳೆದ 14 ವರ್ಷಗಳಿಂದ ಟಿವಿ9 ಕನ್ನಡದ ಮೈಸೂರು ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ನಿರ್ವಹಣೆ. ರಾಜ್ಯದ ವಿಧಾನಸಭಾ ಲೋಕಸಭಾ ಚುನಾವಣೆಯ ವಿಶೇಷ ವರದಿ ಹಾಗೂ ರಾಜ್ಯದ ವಿವಿಧ ಕ್ಷೇತ್ರಗಳ ಉಪಚುನಾವಣಾ ವರದಿ, ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ರಾಹುಲ್ ಗಾಂಧಿ ಸ್ಪರ್ಧೆ ಮಾಡಿದ್ದ ಚುನಾವಣಾ ವರದಿ ಸೇರಿದಂತೆ ಹಲವು ಚುನಾವಣೆಯ ವರದಿಯ ಅನುಭವ. ಮುಂಬೈ ಮಹಾಮಳೆಯ ಕವರೇಜ್, ಕೊಡಗು ಜಿಲ್ಲೆಯ ಗುಡ್ಡ ಕುಸಿತ, ಸೇರಿದಂತೆ ಹಲವು ಸ್ಟಿಂಗ್ ಕಾರ್ಯಾಚರಣೆ, ಸಾಮಾಜಿಕ‌ ಸಮಸ್ಯೆ ಹಾಗೂ ಮಾನವೀಯ ಕಳಕಳಿಯುಳ್ಳ ವರದಿ ಮಾಡಿದ ಅನುಭವ.

Read More