Kadalekai Parishe: ಪರಿಷೆಯಲ್ಲಿ ಪ್ಲ್ಯಾಸ್ಟಿಕ್ ಬಳಕೆ ಮಾಡಿದ್ರೆ ಜೋಕೆ; ಸಚಿವ ರಾಮಲಿಂಗಾ ರೆಡ್ಡಿ ಎಚ್ಚರಿಕೆ

Updated on: Nov 17, 2025 | 3:21 PM

ಬೆಂಗಳೂರಿನ ಐತಿಹಾಸಿಕ ಕಡಲೆಕಾಯಿ ಪರಿಷೆಯು ಈ ವರ್ಷ ಹಲವು ವಿಶೇಷತೆಗಳೊಂದಿಗೆ ಜನರನ್ನು ಆಕರ್ಷಿಸುತ್ತಿದೆ.ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವ ರಾಮಲಿಂಗಾ ರೆಡ್ಡಿ, ಈ ಬಾರಿ ಆಯೋಜಕರು ಪ್ಲಾಸ್ಟಿಕ್-ರಹಿತ ಪರಿಷೆಗೆ ಒತ್ತು ನೀಡಿದ್ದು, ಪ್ಲಾಸ್ಟಿಕ್ ಬಳಸುವ ಅಂಗಡಿಗಳನ್ನು ಮುಚ್ಚತ್ತೇವೆಂದು ಎಚ್ಚರಿಕೆ ನೀಡಿದ್ದಾರೆ. ರೈತರು ಮತ್ತು ವ್ಯಾಪಾರಿಗಳಿಗೆ ಅನುಕೂಲವಾಗುವಂತೆ ಕಳೆದ ವರ್ಷದಂತೆ ಈ ವರ್ಷವೂ ತೆರಿಗೆ-ರಹಿತ ವ್ಯವಸ್ಥೆಯನ್ನು ಜಾರಿಗೆ ತರಲಾಗಿದೆ.

ಬೆಂಗಳೂರು, ನವೆಂಬರ್ 17: ಬೆಂಗಳೂರಿನ ಐತಿಹಾಸಿಕ ಕಡಲೆಕಾಯಿ ಪರಿಷೆಯು ಈ ವರ್ಷ ಹಲವು ವಿಶೇಷತೆಗಳೊಂದಿಗೆ ಜನರನ್ನು ಆಕರ್ಷಿಸುತ್ತಿದೆ. ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವ ರಾಮಲಿಂಗಾ ರೆಡ್ಡಿ, ಈ ಬಾರಿ ಆಯೋಜಕರು ಪ್ಲಾಸ್ಟಿಕ್-ರಹಿತ ಪರಿಷೆಗೆ ಒತ್ತು ನೀಡಿದ್ದು, ಪ್ಲಾಸ್ಟಿಕ್ ಬಳಸುವ ಅಂಗಡಿಗಳನ್ನು ಮುಚ್ಚತ್ತೇವೆಂದು ಎಚ್ಚರಿಕೆ ನೀಡಿದ್ದಾರೆ. ರೈತರು ಮತ್ತು ವ್ಯಾಪಾರಿಗಳಿಗೆ ಅನುಕೂಲವಾಗುವಂತೆ ಕಳೆದ ವರ್ಷದಂತೆ ಈ ವರ್ಷವೂ ತೆರಿಗೆ-ರಹಿತ ವ್ಯವಸ್ಥೆಯನ್ನು ಜಾರಿಗೆ ತರಲಾಗಿದೆ. ಹಿಂದೆ ಎರಡು ದಿನಗಳ ಕಾಲ ನಡೆಯುತ್ತಿದ್ದ ಈ ಜಾತ್ರೆಯನ್ನು ಐದು ದಿನಗಳಿಗೆ ವಿಸ್ತರಿಸಲಾಗಿದ್ದು, ಒಟ್ಟಾರೆ ಏಳೆಂಟು ದಿನಗಳ ಕಾಲ ಸಾರ್ವಜನಿಕರು ಭಾಗವಹಿಸಲು ಅವಕಾಶ ಕಲ್ಪಿಸಲಾಗಿದೆ. ಕಳೆದ ವರ್ಷ ಸುಮಾರು 4-5 ಲಕ್ಷ ಜನರು ಭಾಗವಹಿಸಿದ್ದು, ಈ ಬಾರಿ 6-8 ಲಕ್ಷ ಜನರ ನಿರೀಕ್ಷೆ ಇದೆ. ಮುಂದಿನ ವರ್ಷ ಪರಿಷೆಯನ್ನು ಇನ್ನೂ ಹೆಚ್ಚು ಭವ್ಯವಾಗಿ ನಡೆಸುವುದಾಗಿ ರಾಮಲಿಂಗರೆಡ್ಡಿ ಅವರು ಭರವಸೆ ನೀಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.