ಕಲಬುರಗಿ: ಕೊಲೆ ಯತ್ನ ಆರೋಪದಲ್ಲಿ ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಬಂಧನ
ಕಲಬುರಗಿಯ ಬಿಜೆಪಿ ಮುಖಂಡ, ರೌಡಿಶೀಟರ್ ಮಣಿಕಂಠ ರಾಠೋಡ್ನನ್ನು ಕೊಲೆ ಯತ್ನ ಆರೋಪದಲ್ಲಿ ಜೇವರ್ಗಿ ತಾಲೂಕಿನ ನೆಲೋಗಿ ಪೊಲೀಸರು ಬಂಧಿಸಿದ್ದಾರೆ. ಸದ್ಯ ನ್ಯಾಯಾಲಯದ ಆದೇಶದ ಮೇರೆಗೆ ರಾಠೋಡ್ನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಏನಿದು ಪ್ರಕರಣ? ಮಣಿಕಂಠ ರಾಠೋಡ್ ಮಾಡಿದ್ದೇನು? ಅರೆಸ್ಟ್ ಆಗಿದ್ದೇಕೆ? ಎಲ್ಲ ವಿವರ ಇಲ್ಲಿದೆ.
ಕಲಬುರಗಿ, ನವೆಂಬರ್ 21: ಕೊಲೆ ಯತ್ನ ಆರೋಪದಲ್ಲಿ ಬಿಜೆಪಿ ಮುಖಂಡ, ರೌಡಿಶೀಟರ್ ಮಣಿಕಂಠ ರಾಠೋಡ್ ಬಂಧನವಾಗಿದೆ. ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಮಾಶಾಳ ಗ್ರಾಮದಲ್ಲಿ ಜೇವರ್ಗಿ ತಾಲೂಕಿನ ನೆಲೋಗಿ ಪೊಲೀಸರು ತಡರಾತ್ರಿ ಕಾರ್ಯಾಚರಣೆ ನಡೆಸಿ ಮಣಿಕಂಠ ರಾಠೋಡ್ನನ್ನು ಬಂಧಿಸಿದ್ದಾರೆ. ಸದ್ಯ ಮಣಿಕಂಠ ರಾಠೋಡ್ನನ್ನು ನ್ಯಾಯಾಲಯವು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
ಏನಿದು ಪ್ರಕರಣ?
ನಾಟಿ ಔಷಧಿ ಕೊಡುತ್ತಿದ್ದ ರಶೀದ್ ಮತ್ಯಾ ಎಂಬಾತನ ಬಂಧನಕ್ಕೆ ಆಗ್ರಹಿಸಿ ಮಣಿಕಂಠ ಜೇವರ್ಗಿ ತಾಲೂಕಿನ ನಾರಾಯಣಪುರ ಗ್ರಾಮದಲ್ಲಿ ರಶೀದ್ ಬೆಂಬಲಿಗರೊಂದಿಗೆ ವಾಗ್ವಾದ ನಡೆಸಿ ಹೈಡ್ರಾಮಾ ಕ್ರಿಯೇಟ್ ಮಾಡಿದ್ದ. ಈ ವೇಳೆ ರಶೀದ್ ಮತ್ಯಾ ಕಾರು ಚಾಲಕನ ತಲೆಗೆ ಕಲ್ಲೇಟು ಬಿದ್ದಿತ್ತು. ಸದ್ಯ ರಶೀದ್ ಮತ್ಯಾ ಚಾಲಕನ ದೂರಿನ ಮೇರೆಗೆ ಕೊಲೆ ಯತ್ನ ಆರೋಪದಲ್ಲಿ ಮಣಿಕಂಠ ರಾಠೋಡ್ನನ್ನು ಬಂಧಿಸಲಾಗಿದೆ.
