ಕಲಬುರಗಿ: ಕೊಲೆ ಯತ್ನ ಆರೋಪದಲ್ಲಿ ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಬಂಧನ

Edited By:

Updated on: Nov 21, 2025 | 10:31 AM

ಕಲಬುರಗಿಯ ಬಿಜೆಪಿ ಮುಖಂಡ, ರೌಡಿಶೀಟರ್ ಮಣಿಕಂಠ ರಾಠೋಡ್​ನನ್ನು ಕೊಲೆ ಯತ್ನ ಆರೋಪದಲ್ಲಿ ಜೇವರ್ಗಿ ತಾಲೂಕಿನ ನೆಲೋಗಿ ಪೊಲೀಸರು ಬಂಧಿಸಿದ್ದಾರೆ. ಸದ್ಯ ನ್ಯಾಯಾಲಯದ ಆದೇಶದ ಮೇರೆಗೆ ರಾಠೋಡ್​ನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಏನಿದು ಪ್ರಕರಣ? ಮಣಿಕಂಠ ರಾಠೋಡ್​ ಮಾಡಿದ್ದೇನು? ಅರೆಸ್ಟ್ ಆಗಿದ್ದೇಕೆ? ಎಲ್ಲ ವಿವರ ಇಲ್ಲಿದೆ.

ಕಲಬುರಗಿ, ನವೆಂಬರ್ 21: ಕೊಲೆ ಯತ್ನ ಆರೋಪದಲ್ಲಿ ಬಿಜೆಪಿ ಮುಖಂಡ, ರೌಡಿಶೀಟರ್ ಮಣಿಕಂಠ ರಾಠೋಡ್ ಬಂಧನವಾಗಿದೆ. ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಮಾಶಾಳ ಗ್ರಾಮದಲ್ಲಿ ಜೇವರ್ಗಿ ತಾಲೂಕಿನ ನೆಲೋಗಿ ಪೊಲೀಸರು ತಡರಾತ್ರಿ ಕಾರ್ಯಾಚರಣೆ ನಡೆಸಿ ಮಣಿಕಂಠ ರಾಠೋಡ್​ನನ್ನು ಬಂಧಿಸಿದ್ದಾರೆ. ಸದ್ಯ ಮಣಿಕಂಠ ರಾಠೋಡ್​ನನ್ನು ನ್ಯಾಯಾಲಯವು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

ಏನಿದು ಪ್ರಕರಣ?

ನಾಟಿ ಔಷಧಿ ಕೊಡುತ್ತಿದ್ದ ರಶೀದ್ ಮತ್ಯಾ ಎಂಬಾತನ ಬಂಧನಕ್ಕೆ ಆಗ್ರಹಿಸಿ ಮಣಿಕಂಠ ಜೇವರ್ಗಿ ತಾಲೂಕಿನ ನಾರಾಯಣಪುರ ಗ್ರಾಮದಲ್ಲಿ ರಶೀದ್ ಬೆಂಬಲಿಗರೊಂದಿಗೆ ವಾಗ್ವಾದ ನಡೆಸಿ ಹೈಡ್ರಾಮಾ ಕ್ರಿಯೇಟ್ ಮಾಡಿದ್ದ. ಈ ವೇಳೆ ರಶೀದ್ ಮತ್ಯಾ ಕಾರು ಚಾಲಕನ ತಲೆಗೆ ಕಲ್ಲೇಟು ಬಿದ್ದಿತ್ತು. ಸದ್ಯ ರಶೀದ್ ಮತ್ಯಾ ಚಾಲಕನ ದೂರಿನ ಮೇರೆಗೆ ಕೊಲೆ ಯತ್ನ ಆರೋಪದಲ್ಲಿ ಮಣಿಕಂಠ ರಾಠೋಡ್​​ನನ್ನು ಬಂಧಿಸಲಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Dattatraya Patil

ಮೂಲತಃ ಕಲಬುರಗಿ ಜಿಲ್ಲೆಯವರಾದ ದತ್ತಾತ್ರೇಯ ಪಾಟೀಲ್ ಸಧ್ಯ ಟಿರ್ವಿ ಕನ್ನಡ ವಾಹಿನಿಯ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದಾರೆ. ಕಳೆದ 9 ವರ್ಷಗಳಿಂದ ಟಿರ್ವಿ ಸಂಸ್ಥೆಯಲ್ಲಿ ಕೆಲಸ‌ ಮಾಡುತ್ತಿದ್ದು ಜ,2015 ರಿಂದ 22 ರವೆಗೆ ಹುಬ್ಬಳ್ಳಿಯ ವರದಿಗಾರಾಗಿ, ಕಳೆದೊಂದು ವರ್ಷ ಕೊಪ್ಪಳ ಸಧ್ಯ ಮೂರು ತಿಂಗಳಿಮದ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದು, ಕೊರೊನಾ ಸಮಯದಲ್ಲಿ ವೈದ್ಯರ ಕಳ್ಳಾಟದ ಮಾಡಿದ ರಹಸ್ಯ ಕಾರ್ಯಚರಣೆ.ಆಪರೇಷನ್ ಕಮಲದ ಕುರಿತು ಸ್ಪೋಟಕ ಬಿಎಸ್ ವೈ ವಿಡಿಯೋ ದ ಎಕ್ಸಕ್ಲೂಸಿವ್ ವರದಿಯ ಜೊತೆಗೆ ರಾಜಕೀಯ ವರದಿಗಾರಿಕೆಯಲ್ಲಿಯೂ ಆಸಕ್ತಿ ಹೊಂದಿದ್ದು, ಬಿಡುವಿನ ಸಮಯದಲ್ಲಿ ಪುಸ್ತಕ ಓದುವುದು,ಪ್ರೇಕ್ಷಣೀಯ ಹಾಗೂ ಐತಿಹಾಸಿಕ ಸ್ಥಳಗಳ ಪ್ರವಾಸ,ಮತ್ತು ಟ್ರೆಕ್ಕಿಂಗ್ ಹವ್ಯಾಸ ರೂಢಿಸಿಕೊಂಡಿದ್ದಾರೆ.

Read More