ಕಲಬುರಗಿ ಸೆಂಟ್ರಲ್ ಜೈಲಿನಿಂದ ಸಜಾ ಕೈದಿಗಳ ಸಿನಿಮೀಯ ಎಸ್ಕೇಪ್: ಇಲ್ಲಿದೆ ನೋಡಿ ಸಿಸಿಟಿವಿ ದೃಶ್ಯ!

Edited By:

Updated on: Jul 15, 2026 | 7:18 AM

ಜಿಲ್ಲೆಯ ಕೇಂದ್ರ ಕಾರಾಗೃಹದ ಬ್ಯಾರಕ್ ಕಂಬಿಗಳನ್ನು ಕಟ್ ಮಾಡಿ, ಮೂವರು ಸಜಾ ಕೈದಿಗಳು ಮಂಗಳವಾರ (ಜು 14) ಮುಂಜಾನೆ ಸುಮಾರು 3 ಗಂಟೆಗೆ ಜೈಲಿನ ಕಾಂಪೌಂಡ್ ಗೋಡೆ ಹಾರಿ ಸಿನಿಮೀಯ ಶೈಲಿಯಲ್ಲಿ ಪರಾರಿಯಾಗಿದ್ದಾರೆ. ಮಸ್ತಾನ್, ಸಂತೋಷ್ ಹಾಗೂ ಸಾಗರ್ ಪರಾರಿಯಾದ ಖತರ್ನಾಕ್ ಕೈದಿಗಳಾಗಿದ್ದು, ಇವರು ಬೀದರ್ ಕೊಲೆ ಪ್ರಕರಣದಲ್ಲಿ ಶಿಕ್ಷೆಗೆ ಒಳಗಾಗಿದ್ದರು.

ಕಲಬುರಗಿ, ಜುಲೈ 15: ಜಿಲ್ಲೆಯ ಕೇಂದ್ರ ಕಾರಾಗೃಹದ ಬ್ಯಾರಕ್ ಕಂಬಿಗಳನ್ನು ಕಟ್ ಮಾಡಿ, ಮೂವರು ಸಜಾ ಕೈದಿಗಳು ಮಂಗಳವಾರ (ಜು 14) ಮುಂಜಾನೆ ಸುಮಾರು 3 ಗಂಟೆಗೆ ಜೈಲಿನ ಕಾಂಪೌಂಡ್ ಗೋಡೆ ಹಾರಿ ಸಿನಿಮೀಯ ಶೈಲಿಯಲ್ಲಿ ಪರಾರಿಯಾಗಿದ್ದಾರೆ. ಮಸ್ತಾನ್, ಸಂತೋಷ್ ಹಾಗೂ ಸಾಗರ್ ಪರಾರಿಯಾದ ಖತರ್ನಾಕ್ ಕೈದಿಗಳಾಗಿದ್ದು, ಇವರು ಬೀದರ್ ಕೊಲೆ ಪ್ರಕರಣದಲ್ಲಿ ಶಿಕ್ಷೆಗೆ ಒಳಗಾಗಿದ್ದರು.

ಕೈದಿಗಳು ಜೈಲಿನಿಂದ ಹೊರಬಂದು ಬಿಂದಾಸ್ ಆಗಿ ನಡೆದುಕೊಂಡು ಹೋಗಿ ಕಾರ್ ಹತ್ತಿ ಬೀದರ್ ಕಡೆಗೆ ಎಸ್ಕೇಪ್ ಆಗಿರುವ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ. ತಪ್ಪಿಸಿಕೊಂಡ ಆರೋಪಿಗಳು ಬೀದರ್-ಶ್ರೀರಂಗಪಟ್ಟಣ ರಾಷ್ಟ್ರೀಯ ಹೆದ್ದಾರಿ ಮೂಲಕ ಪರಾರಿಯಾಗಿದ್ದರು. ಘಟನೆ ಬೆನ್ನಲ್ಲೇ ಅಲರ್ಟ್ ಆದ ಪೊಲೀಸರು ಕಾರ್ಯಾಚರಣೆ ನಡೆಸಿದ್ದು, ಕಲಬುರಗಿಯ ಕಪನೂರ ಕೈಗಾರಿಕಾ ಪ್ರದೇಶದಲ್ಲಿ ಒರ್ವ ಆರೋಪಿಯ ಕಾಲಿಗೆ ಗುಂಡು ಹೊಡೆದು ಖೆಡ್ಡಾಗೆ ಕೆಡವಿದ್ದಾರೆ. ಈ ಕುರಿತು ಫರಹತಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ದತ್ತಾತ್ರೇಯ ಪಾಟೀಲ್​

ಮೂಲತಃ ಕಲಬುರಗಿ ಜಿಲ್ಲೆಯವರಾದ ದತ್ತಾತ್ರೇಯ ಪಾಟೀಲ್ ಸಧ್ಯ ಟಿರ್ವಿ ಕನ್ನಡ ವಾಹಿನಿಯ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದಾರೆ. ಕಳೆದ 9 ವರ್ಷಗಳಿಂದ ಟಿರ್ವಿ ಸಂಸ್ಥೆಯಲ್ಲಿ ಕೆಲಸ‌ ಮಾಡುತ್ತಿದ್ದು ಜ,2015 ರಿಂದ 22 ರವೆಗೆ ಹುಬ್ಬಳ್ಳಿಯ ವರದಿಗಾರಾಗಿ, ಕಳೆದೊಂದು ವರ್ಷ ಕೊಪ್ಪಳ ಸಧ್ಯ ಮೂರು ತಿಂಗಳಿಮದ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದು, ಕೊರೊನಾ ಸಮಯದಲ್ಲಿ ವೈದ್ಯರ ಕಳ್ಳಾಟದ ಮಾಡಿದ ರಹಸ್ಯ ಕಾರ್ಯಚರಣೆ.ಆಪರೇಷನ್ ಕಮಲದ ಕುರಿತು ಸ್ಪೋಟಕ ಬಿಎಸ್ ವೈ ವಿಡಿಯೋ ದ ಎಕ್ಸಕ್ಲೂಸಿವ್ ವರದಿಯ ಜೊತೆಗೆ ರಾಜಕೀಯ ವರದಿಗಾರಿಕೆಯಲ್ಲಿಯೂ ಆಸಕ್ತಿ ಹೊಂದಿದ್ದು, ಬಿಡುವಿನ ಸಮಯದಲ್ಲಿ ಪುಸ್ತಕ ಓದುವುದು,ಪ್ರೇಕ್ಷಣೀಯ ಹಾಗೂ ಐತಿಹಾಸಿಕ ಸ್ಥಳಗಳ ಪ್ರವಾಸ,ಮತ್ತು ಟ್ರೆಕ್ಕಿಂಗ್ ಹವ್ಯಾಸ ರೂಢಿಸಿಕೊಂಡಿದ್ದಾರೆ.

Read More