Karnataka Assembly Polls: ಪ್ರಧಾನಿ ನರೇಂದ್ರ ಮೋದಿಯವರ ರೋಡ್ ಶೋಗೆ ಕೇಸರಿಮಯಗೊಂಡು ಕಾಯುತ್ತಿದೆ ಬಿಸಿಲುನಾಡು ಕಲಬುರಗಿ

Updated on: May 02, 2023 | 10:43 AM

ಪ್ರಧಾನಿ ಮೋದಿ ನಗರದ ಕೆಎಂಎಫ್ ನಿಂದ ಸರ್ದಾರ್ ವಲ್ಲಭಭಾಯ್ ಪಟೇಲ್ ವೃತ್ತದವರೆಗೆ ಸುಮಾರು 5 ಕಿಮೀಗಳಷ್ಟು ದೂರ ರೋಡ್ ಶೋ ನಡೆಸಲಿದ್ದಾರೆ.

ಕಲಬುರಗಿ: ಮೇ ತಿಂಗಳ ತಾಪಮಾನ ಮತ್ತು ಉರಿಬಿಸಿನಿಂದ ಕಾದ ಹೆಂಚಿನಂತಾಗಿರುವ ಬಿಸಿಲುನಾಡು ಕಲಬುರಗಿಯಲ್ಲಿ ಇಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ (PM Narendra Modi) ರೋಡ್ ಶೋ ನಡೆಸಲಿದ್ದಾರೆ. ಪ್ರಧಾನಿಯವರ ಸ್ವಾಗತಕ್ಕೆ ಕಲಬುರಗಿ ಮದುವಣಗಿತ್ತಿಯಂತೆ ಸಜ್ಜಾಗಿದೆ. ನಗರವಿಡೀ ಕೇಸರಿಮಯ(saffronised), ಕೇಸರಿ ಬಣ್ಣದ ಪೋಸ್ಟರ್ ಗಳು, ಬಂಟಿಂಗ್ ಮತ್ತು ಬ್ಯಾನರ್ ಗಳು, ರಸ್ತೆಯುದ್ದಕ್ಕೂ ಭಗ್ವಾ ಧ್ವಜಗಳು-ನಗರವನ್ನು ಕೇಸರಿ ಬಣ್ಣದಿಂದ ಪೇಂಟ್ ಮಾಡಲಾಗಿದೆಯಾ ಎಂಬ ಭಾವನೆ ಹುಟ್ಟಿಸುತ್ತವೆ. ಪ್ರಧಾನಿ ಮೋದಿ ನಗರದ ಕೆಎಂಎಫ್​ನಿಂದ ಸರ್ದಾರ್ ವಲ್ಲಭಭಾಯ್ ಪಟೇಲ್ ವೃತ್ತದವರೆಗೆ (Sardar Vallabhbhai Patel Circle) ಸುಮಾರು 5 ಕಿಮೀಗಳಷ್ಟು ದೂರ ರೋಡ್ ಶೋ ನಡೆಸಲಿದ್ದಾರೆ. ಕಲಬುರಗಿಯ ಬಿಜೆಪಿ ಕಾರ್ಯಕರ್ತರು ಮತ್ತು ಜನತೆ ಮೋದಿ ಆಗಮನವನ್ನು ಕಾತರದಿಂದ ಎದುರು ನೋಡುತ್ತಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮತ್ತಷ್ಟು ಚುನಾವಣಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Read More