ಸೋಶಿಯಲ್ ಮೀಡಿಯಾ ಹಿರೋ ಆಗಬೇಕು ಅನ್ಕೊಂಡಿದ್ದಿಯಾ? ರೌಡಿಗೆ ಕಮಿಷನರ್ ವಾರ್ನ್

Edited By:

Updated on: Jul 01, 2026 | 4:47 PM

ಮುಖ್ಯಾಂಶಗಳು

  • ಕಲಬುರಗಿಯ ಕಮೀಷನರ್ ಕಚೇರಿ ಆವರಣದಲ್ಲಿ ರೌಡಿ ಪರೇಡ್ ನಡೆಸಿದ ಆಯುಕ್ತ ಶರಣಪ್ಪ
  • ರೌಡಿಸಂ ಬಿಡಬೇಕು ಇಲ್ಲಾಂದ್ರೆ ನಮ್ಮಿಂದ ಅಕ್ಷನ್ ಆಗಿ ಹೋಗ್ತಿಯಾ ಎಂದ ಕಮಿಷನರ್
  • ಠಾಣಾವಾರು ಟಾಪ್ 10 ರೌಡಿ ಪರೇಡ್ ನಲ್ಲಿ ಕಮೀಷನರ್ ವಾನ್೯

ರಾಜ್ಯದ ಪ್ರತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ರೌಡಿ ನಿಗ್ರಹ ಪಡೆ ರಚನೆಗೆ ಈಗಾಗಲೇ ಆದೇಶಿಸಲಾಗಿದೆ. ಇದರ ಬೆನ್ನಲ್ಲೇ ವಿವಿಧ ಜಿಲ್ಲೆಗಳಲ್ಲಿ ರೌಡಿಗಳ ಮೇಲೆ ಹದ್ದಿನ ಕಣ್ಣಿಟ್ಟಿದ್ದು, ಅವರ ಆಟಾಟೋಪಗಳಿಗೆ ಬ್ರೇಕ್ ಹಾಕಲು ಪೊಲೀಸರು ಮುಂದಾಗಿದೆ. ಇದಕ್ಕೆ ಪೂರಕವೆಂಬಂತೆ ಕಲಬುರಗಿಯಲ್ಲಿಂದು (Kalaburagi) ನಗರ ಪೊಲೀಸ್ ಆಯುಕ್ತ ಡಾ.ಶರಣಪ್ಪ ಅವರು ರೌಡಿ ಪರೇಡ್ ನಡೆಸಿದ್ದು, ರೌಡಿಸಂ ಬಿಡಬೇಕು ಇಲ್ಲಾಂದ್ರೆ ನಮ್ಮಿಂದ ಅಕ್ಷನ್ ಆಗಿ ಹೋಗ್ತಿಯಾ ಎಂದು ಖಡಕ್ ಎಚ್ಚರಿಕೆ ನೀಡಿದ್ದಾರೆ.

ಕಲಬುರಗಿ, (ಜುಲೈ 01): ಡಿಕೆ ಶಿವಕುಮಾರ್ (DK Shivakumar) ಅವರು ಸಿಎಂ ಆದ ಬಳಿಕ ಮೊದಲ ಸಭೆಯಲ್ಲೇ ರಾಜ್ಯದಲ್ಲಿ ರೌಡಿ (Rowdy) ಬಗ್ಗೆ ನಿಗಾ ವಹಿಸುವಂತೆ ಸೂಚಿಸಿದ್ದರು. ಅಲ್ಲದೇ ರೌಡಿ ನಿಗ್ರಹ ದಳ ರಚನೆಗೆ ಸೂಚಿಸಿದ್ದು. ಅದರಂತೆ ರಾಜ್ಯದ ಪ್ರತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ರೌಡಿ ನಿಗ್ರಹ ಪಡೆ ರಚನೆಗೆ ಈಗಾಗಲೇ ಆದೇಶಿಸಲಾಗಿದೆ. ಇದರ ಬೆನ್ನಲ್ಲೇ ವಿವಿಧ ಜಿಲ್ಲೆಗಳಲ್ಲಿ ರೌಡಿಗಳ ಮೇಲೆ ಹದ್ದಿನ ಕಣ್ಣಿಟ್ಟಿದ್ದು, ಅವರ ಆಟಾಟೋಪಗಳಿಗೆ ಬ್ರೇಕ್ ಹಾಕಲು ಪೊಲೀಸರು ಮುಂದಾಗಿದೆ. ಇದಕ್ಕೆ ಪೂರಕವೆಂಬಂತೆ ಕಲಬುರಗಿಯಲ್ಲಿಂದು (Kalaburagi) ನಗರ ಪೊಲೀಸ್ ಆಯುಕ್ತ ಡಾ.ಶರಣಪ್ಪ ಅವರು ರೌಡಿ ಪರೇಡ್ ನಡೆಸಿದ್ದು, ರೌಡಿಸಂ ಬಿಡಬೇಕು ಇಲ್ಲಾಂದ್ರೆ ನಮ್ಮಿಂದ ಅಕ್ಷನ್ ಆಗಿ ಹೋಗ್ತಿಯಾ ಎಂದು ಖಡಕ್ ಎಚ್ಚರಿಕೆ ನೀಡಿದ್ದಾರೆ.

ಕಲಬುರಗಿಯ ಕಮೀಷನರ್ ಕಚೇರಿ ಆವರಣದಲ್ಲಿ ಠಾಣಾವಾರು ಟಾಪ್ 10 ರೌಡಿ ಪರೇಡ್ ನಡೆಸಿದ್ದು, ಈ ವೇಳೆ ರೌಡಿ ಶೀಟರ್ ಗಜಾನನ್ ಗೆ ಕಮಿಷನರ್ ತರಾಟಗೆ ತೆಗೆದುಕೊಂಡಿದ್ದಾರೆ. ಚೆನ್ನಾಗಿ ಇರೋಕೆ ಆಗೋಲ್ವಾ? ಸೋಶಿಯಲ್ ಮೀಡಿಯಾ ಹಿರೋ ಆಗಬೇಕು ಅಂದುಕೊಂಡಿದ್ದಿಯಾ? ಎಂದು ವಾರ್ನ್ ಮಾಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Jul 01, 2026 04:43 PM
Loading...
Unable to load recommendations.
Follow Us
ದತ್ತಾತ್ರೇಯ ಪಾಟೀಲ್​

ಮೂಲತಃ ಕಲಬುರಗಿ ಜಿಲ್ಲೆಯವರಾದ ದತ್ತಾತ್ರೇಯ ಪಾಟೀಲ್ ಸಧ್ಯ ಟಿರ್ವಿ ಕನ್ನಡ ವಾಹಿನಿಯ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದಾರೆ. ಕಳೆದ 9 ವರ್ಷಗಳಿಂದ ಟಿರ್ವಿ ಸಂಸ್ಥೆಯಲ್ಲಿ ಕೆಲಸ‌ ಮಾಡುತ್ತಿದ್ದು ಜ,2015 ರಿಂದ 22 ರವೆಗೆ ಹುಬ್ಬಳ್ಳಿಯ ವರದಿಗಾರಾಗಿ, ಕಳೆದೊಂದು ವರ್ಷ ಕೊಪ್ಪಳ ಸಧ್ಯ ಮೂರು ತಿಂಗಳಿಮದ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದು, ಕೊರೊನಾ ಸಮಯದಲ್ಲಿ ವೈದ್ಯರ ಕಳ್ಳಾಟದ ಮಾಡಿದ ರಹಸ್ಯ ಕಾರ್ಯಚರಣೆ.ಆಪರೇಷನ್ ಕಮಲದ ಕುರಿತು ಸ್ಪೋಟಕ ಬಿಎಸ್ ವೈ ವಿಡಿಯೋ ದ ಎಕ್ಸಕ್ಲೂಸಿವ್ ವರದಿಯ ಜೊತೆಗೆ ರಾಜಕೀಯ ವರದಿಗಾರಿಕೆಯಲ್ಲಿಯೂ ಆಸಕ್ತಿ ಹೊಂದಿದ್ದು, ಬಿಡುವಿನ ಸಮಯದಲ್ಲಿ ಪುಸ್ತಕ ಓದುವುದು,ಪ್ರೇಕ್ಷಣೀಯ ಹಾಗೂ ಐತಿಹಾಸಿಕ ಸ್ಥಳಗಳ ಪ್ರವಾಸ,ಮತ್ತು ಟ್ರೆಕ್ಕಿಂಗ್ ಹವ್ಯಾಸ ರೂಢಿಸಿಕೊಂಡಿದ್ದಾರೆ.

Read More