ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು

Edited By:

Updated on: Mar 05, 2026 | 5:48 PM

ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ನಿಂಬರ್ಗಾದಲ್ಲಿ ಹೋಳಿ ಆಚರಣೆ ವೇಳೆ ಬುರ್ಖಾಗೆ ಅಪಮಾನ ಮಾಡಲಾಗಿದೆ ಎಂದು ದಲಿತ ಸೇನೆ ಮುಖಂಡ ಸಮೀರ್ ಆವಂಟಿ ದೂರು ದಾಖಲಿಸಿದ್ದಾರೆ. ನಿಂಬರ್ಗಾ ಪೊಲೀಸ್ ಠಾಣೆಯಲ್ಲಿ ಬಿಎನ್‌ಎಸ್ ಕಾಯ್ದೆ ಅಡಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಘಟನೆಗೆ ಸಂಬಂಧಿಸಿದ ವಿಡಿಯೋಗಳು ವೈರಲ್ ಆಗಿವೆ.

ಕಲಬುರಗಿ, ಮಾರ್ಚ್​ 05: ಜಿಲ್ಲೆಯ ಆಳಂದ ತಾಲೂಕಿನ ನಿಂಬರ್ಗಾ ಗ್ರಾಮದಲ್ಲಿ ಹೋಳಿ ಹಬ್ಬದ ಆಚರಣೆ ವೇಳೆ ಬುರ್ಖಾ ಹಾಕಿಕೊಂಡು ಬಣ್ಣ ಹಚ್ಚಿ ಅವಮಾನ ಮಾಡಿರುವ ಆರೋಪ ಕೇಳಿಬಂದಿದೆ. ಓರ್ವ ವ್ಯಕ್ತಿಗೆ ಬುರ್ಖಾ ಹಾಕಿಸಿ ಬಣ್ಣ ಹಚ್ಚಿದ್ದಾರೆ. ಆ ಮೂಲಕ ಹಿಂದೂ ಯುವಕರು ಬುರ್ಖಾಗೆ ಅವಮಾನಿಸಿದ್ದಾರೆಂದು ದಲಿತ ಸೇನೆ ಮುಖಂಡ ಸಮೀರ್ ಆವಂಟಿ ನಿಂಬರ್ಗಾ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಬಿಎನ್‌ಎಸ್ ಕಾಯ್ದೆ 2003ರ ಸೆಕ್ಷನ್ 196 ಹಾಗೂ 299ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಪೊಲೀಸರು ತನಿಖೆ ನಡೆಸಿದ್ದಾರೆ. ಇನ್ನು ಘಟನೆಯ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

 

Loading...
Unable to load recommendations.
Follow Us
ದತ್ತಾತ್ರೇಯ ಪಾಟೀಲ್​

ಮೂಲತಃ ಕಲಬುರಗಿ ಜಿಲ್ಲೆಯವರಾದ ದತ್ತಾತ್ರೇಯ ಪಾಟೀಲ್ ಸಧ್ಯ ಟಿರ್ವಿ ಕನ್ನಡ ವಾಹಿನಿಯ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದಾರೆ. ಕಳೆದ 9 ವರ್ಷಗಳಿಂದ ಟಿರ್ವಿ ಸಂಸ್ಥೆಯಲ್ಲಿ ಕೆಲಸ‌ ಮಾಡುತ್ತಿದ್ದು ಜ,2015 ರಿಂದ 22 ರವೆಗೆ ಹುಬ್ಬಳ್ಳಿಯ ವರದಿಗಾರಾಗಿ, ಕಳೆದೊಂದು ವರ್ಷ ಕೊಪ್ಪಳ ಸಧ್ಯ ಮೂರು ತಿಂಗಳಿಮದ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದು, ಕೊರೊನಾ ಸಮಯದಲ್ಲಿ ವೈದ್ಯರ ಕಳ್ಳಾಟದ ಮಾಡಿದ ರಹಸ್ಯ ಕಾರ್ಯಚರಣೆ.ಆಪರೇಷನ್ ಕಮಲದ ಕುರಿತು ಸ್ಪೋಟಕ ಬಿಎಸ್ ವೈ ವಿಡಿಯೋ ದ ಎಕ್ಸಕ್ಲೂಸಿವ್ ವರದಿಯ ಜೊತೆಗೆ ರಾಜಕೀಯ ವರದಿಗಾರಿಕೆಯಲ್ಲಿಯೂ ಆಸಕ್ತಿ ಹೊಂದಿದ್ದು, ಬಿಡುವಿನ ಸಮಯದಲ್ಲಿ ಪುಸ್ತಕ ಓದುವುದು,ಪ್ರೇಕ್ಷಣೀಯ ಹಾಗೂ ಐತಿಹಾಸಿಕ ಸ್ಥಳಗಳ ಪ್ರವಾಸ,ಮತ್ತು ಟ್ರೆಕ್ಕಿಂಗ್ ಹವ್ಯಾಸ ರೂಢಿಸಿಕೊಂಡಿದ್ದಾರೆ.

Read More